ಯೆರೆಮೀಯ 13:1 - ಪರಿಶುದ್ದ ಬೈಬಲ್1 ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ಹೋಗಿ ಒಂದು ನಾರಿನ ನಡುಪಟ್ಟಿಯನ್ನು ಕೊಂಡುಕೊ. ಅದನ್ನು ನಿನ್ನ ಸೊಂಟಕ್ಕೆ ಸುತ್ತಿಕೊ. ಆ ನಡುಪಟ್ಟಿ ನೀರಿನಲ್ಲಿ ನೆನೆಯದಂತೆ ನೋಡಿಕೊ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ನನಗೆ : “ನೀನು ಹೋಗಿ ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೊ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ನನಗೆ - ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಬೇಡ ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ನನಗೆ, “ನೀನು ಹೋಗಿ, ನಾರಿನ ನಡುಕಟ್ಟು ಒಂದನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ. ಅದನ್ನು ನೀರಿನಲ್ಲಿ ನೆನೆಸಬೇಡ,” ಎಂದು ಅಪ್ಪಣೆಕೊಟ್ಟರು. ಅಧ್ಯಾಯವನ್ನು ನೋಡಿ |
ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”