ಯೆರೆಮೀಯ 13:10 - ಪರಿಶುದ್ದ ಬೈಬಲ್10 ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಸ್ತ್ರೀಯರ ಪರಿಮಳದ್ರವ್ಯವು ಕೊಳೆತ ವಾಸನೆಯಿಂದ ಕೂಡಿರುವುದು. ಅವರು ಸೊಂಟಪಟ್ಟಿಯ ಬದಲಿಗೆ ಹಗ್ಗ ಕಟ್ಟಿಕೊಳ್ಳುವರು; ತಲೆಕೂದಲನ್ನು ಅಂದವಾಗಿ ಹೆಣೆದುಕೊಳ್ಳುವ ಬದಲು ಬೋಳಿಸಿಕೊಳ್ಳುವರು. ಈಗ ಅವರಿಗೆ ಆಧುನಿಕ ವಸ್ತ್ರಗಳಿರುವವು; ಆದರೆ ಆಗ ಅವರು ಶೋಕವಸ್ತ್ರಗಳನ್ನೇ ಧರಿಸುವರು. ಈಗ ಅವರು ಮುಖಗಳಿಗೆ ಸೌಂದರ್ಯದ ಬೊಟ್ಟುಗಳನ್ನು ಇಟ್ಟುಕೊಳ್ಳುವರು; ಆದರೆ ಆಗ ಅವರ ಚರ್ಮದಲ್ಲಿ ಸುಟ್ಟಕಲೆಗಳೇ ಇರುವವು.
ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.
ನಾನು ನನ್ನ ಸೇವಕರಾದ ಪ್ರವಾದಿಗಳನ್ನು ಇಸ್ರೇಲಿಗೆ ಮತ್ತು ಯೆಹೂದಕ್ಕೆ ಕಳುಹಿಸಿಕೊಟ್ಟೆ. ನಾನು ಅವರನ್ನು ನಿಮ್ಮಲ್ಲಿಗೆ ಪುನಃಪುನಃ ಕಳುಹಿಸಿಕೊಟ್ಟೆ. ಆ ಪ್ರವಾದಿಗಳು, “ಇಸ್ರೇಲಿನ ಮತ್ತು ಯೆಹೂದದ ಪ್ರತಿಯೊಬ್ಬರೂ ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಬೇಕು. ನೀವು ಒಳ್ಳೆಯವರಾಗಿರಬೇಕು. ಬೇರೆ ದೇವರುಗಳನ್ನು ಅನುಸರಿಸಬಾರದು. ಅವುಗಳನ್ನು ಪೂಜಿಸಬಾರದು. ಅವುಗಳ ಸೇವೆಮಾಡಬಾರದು ಎಂದು ಹೇಳಿದರು. ನನ್ನ ಆಜ್ಞೆಯನ್ನು ಪಾಲಿಸಿದರೆ ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಪ್ರದೇಶದಲ್ಲಿ ನೀವು ವಾಸಿಸಬಹುದು” ಎಂದು ಹೇಳಿದ್ದೆ. ಆದರೆ ನೀವು ನನ್ನ ಸಂದೇಶದ ಕಡೆಗೆ ಗಮನ ಕೊಡಲಿಲ್ಲ.