Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:11 - ಪರಿಶುದ್ದ ಬೈಬಲ್‌

11 ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಮಸ್ತ ಇಸ್ರಾಯೇಲ್ ವಂಶವೂ ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರುವಾಸಿಯೂ ಸ್ತೋತ್ರವೂ ಮಹಿಮೆಯೂ ಆಗಿರಲೆಂದು ನಡುಕಟ್ಟು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳಲೊಲ್ಲದೆ ಹೋದರು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾವ ಪ್ರಕಾರ ಇದು ಮನುಷ್ಯನ ನಡುವಿಗೆ ಹತ್ತಿಕೊಳ್ಳುವುದೋ, ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ, ಯೆಹೂದದ ಮನೆತನವನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು, ಆದರೆ ಅವರು ಕೇಳದೇ ಹೋದರು ಎಂದು ಯೆಹೋವ ದೇವರ ಅನ್ನುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:11
25 ತಿಳಿವುಗಳ ಹೋಲಿಕೆ  

ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಬಗ್ಗೆ ಕೇಳಿದಾಗ ಬೇರೆ ಜನಾಂಗಗಳ ಜನರು ಅದನ್ನು ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’


ನಾನು ನಿರ್ಮಿಸಿದ ಈ ಜನರು ನನಗೆ ಸ್ತೋತ್ರಗಾನ ಹಾಡುವರು.


“ಆದರೆ ನನ್ನ ಜನರು ನನಗೆ ಕಿವಿಗೊಡಲಿಲ್ಲ. ಇಸ್ರೇಲರು ನನಗೆ ವಿಧೇಯರಾಗಲಿಲ್ಲ.


ನೀವಾದರೋ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನರೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. ದೇವರು ತಾನು ಮಾಡಿದ ಅತ್ಯಾಶ್ಚರ್ಯ ಸಂಗತಿಗಳನ್ನು ತಿಳಿಸಲು ನಿಮ್ಮನ್ನು ಅಂಧಕಾರದಿಂದ (ಪಾಪಗಳಿಂದ) ತನ್ನ ಅದ್ಭುತವಾದ ಬೆಳಕಿಗೆ ಕರೆತಂದನು.


ಯೆಹೋವನೇ, ನೀನು ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡಿದೆ. ಇಂದಿನವರೆಗೂ ನೀನು ಅದ್ಭುತಕಾರ್ಯಗಳನ್ನು ಮಾಡಿದೆ. ಇಸ್ರೇಲಿನಲ್ಲಿಯೂ ನೀನು ಅವುಗಳನ್ನು ಮಾಡಿದೆ. ಜನರು ಇರುವಲ್ಲೆಲ್ಲ ನೀನು ಅವುಗಳನ್ನು ಮಾಡಿದೆ. ಇವುಗಳಿಂದ ನೀನು ಸುಪ್ರಸಿದ್ಧನಾಗಿರುವೆ.


ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.


ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.


ನಾನು ನಿಮ್ಮನ್ನು ನೋಡಿಕೊಳ್ಳುವುದಕ್ಕೆ ಕಾವಲುಗಾರರನ್ನು ನೇಮಿಸಿದೆ. ನಾನು ಅವರಿಗೆ ‘ಯುದ್ಧದ ತುತ್ತೂರಿಯ ನಾದವನ್ನು ಕೇಳಿರಿ’ ಎಂದು ಹೇಳಿದೆ. ಆದರೆ ಅವರು ‘ನಾವು ಕೇಳುವುದಿಲ್ಲ’ ಅಂದರು.


ಆತನ ಜನರು “ಪವಿತ್ರಜನ”ರೆಂದೂ, “ಯೆಹೋವನಿಂದ ರಕ್ಷಿಸಲ್ಪಟ್ಟವ”ರೆಂದೂ ಕರೆಯಲ್ಪಡುವರು. ಜೆರುಸಲೇಮ್, “ದೇವರಿಗೆ ಬೇಕಾದ ಪಟ್ಟಣ”ವೆಂದೂ, “ದೇವರಿರುವ ಪಟ್ಟಣ”ವೆಂದೂ ಕರೆಯಲ್ಪಡುವದು.


ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ!


ಯೆಹೋವನು ಯಾಕೋಬನನ್ನು ಆರಿಸಿಕೊಂಡನು. ಇಸ್ರೇಲ್, ಆತನಿಗೆ ಸೇರಿದ್ದು.


ಈ ಹೊತ್ತು ಯೆಹೋವನು ನಿಮ್ಮನ್ನು ತನ್ನ ಸ್ವಂತ ಜನಾಂಗವೆಂದು ಸ್ವೀಕರಿಸಿದ್ದಾನೆ ಎಂದು ವಾಗ್ದಾನ ಮಾಡುತ್ತಾನೆ. ನೀವು ಆತನ ಎಲ್ಲಾ ಆಜ್ಞೆಗಳಿಗೆ ವಿಧೇಯರಾಗಬೇಕು.


“ನಾವು ನಮ್ಮ ದೇವರಾದ ಯೆಹೋವನಿಗೆ ಪ್ರಾರ್ಥಿಸುವಾಗ ಆತನು ನಮ್ಮ ಹತ್ತಿರವೇ ಇದ್ದಾನೆ. ಯಾವ ದೇಶದವರಿಗೂ ಆತನಂಥ ದೇವರಿಲ್ಲ.


‘ನಮ್ಮ ಕಾಲುಗಳಿಗೆ ಹತ್ತಿದ ನಿಮ್ಮ ಊರಿನ ಧೂಳನ್ನು ನಿಮಗೆ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ದೇವರ ರಾಜ್ಯ ಸಮೀಪಿಸುತ್ತಿದೆ ಎಂಬುದು ನಿಮಗೆ ತಿಳಿದಿರಲಿ’ ಎಂದು ಹೇಳಿರಿ.


ಇಸ್ರೇಲಿನ ಜನರಾದ ನೀವು ಈ ದುಷ್ಕೃತ್ಯಗಳನ್ನು ಮಾಡುತ್ತಿದ್ದೀರಿ.” ಇದು ಯೆಹೋವನಾದ ನನ್ನ ಮಾತು: “ನಾನು ನಿಮಗೆ ಮತ್ತೆಮತ್ತೆ ಹೇಳಿದೆ, ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ. ನಾನು ನಿಮ್ಮನ್ನು ಕೂಗಿದೆ, ಆದರೆ ನೀವು ಉತ್ತರ ಕೊಡಲಿಲ್ಲ.


ನಾನು ಅವರಿಗೆ, ‘ನನಗೆ ವಿಧೇಯರಾಗಿರಿ. ನಾನು ನಿಮಗೆ ದೇವರಾಗಿರುತ್ತೇನೆ, ನೀವು ನನ್ನ ಭಕ್ತರಾಗಿರುತ್ತೀರಿ. ನಾನು ಆಜ್ಞಾಪಿಸಿದ್ದನ್ನೆಲ್ಲವನ್ನು ಮಾಡಿರಿ, ಅದರಿಂದ ನಿಮಗೆ ಒಳ್ಳೆಯದಾಗುವುದು’ ಎಂದು ಮಾತ್ರ ಆಜ್ಞಾಪಿಸಿದ್ದೆ.


“ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.


ಯೆಹೋವನು ನನಗೆ ಹೀಗೆ ಹೇಳಿದನು, “ಯೆರೆಮೀಯನೇ, ಹೋಗಿ ಒಂದು ನಾರಿನ ನಡುಪಟ್ಟಿಯನ್ನು ಕೊಂಡುಕೊ. ಅದನ್ನು ನಿನ್ನ ಸೊಂಟಕ್ಕೆ ಸುತ್ತಿಕೊ. ಆ ನಡುಪಟ್ಟಿ ನೀರಿನಲ್ಲಿ ನೆನೆಯದಂತೆ ನೋಡಿಕೊ.”


“ಯೆರೆಮೀಯನೇ, ಯೆಹೂದದ ಜನರಿಗೆ, ‘ಇಸ್ರೇಲಿನ ದೇವರಾದ ಯೆಹೋವನು ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕು ಎಂದು ಹೇಳುತ್ತಾನೆ’ ಎಂದು ಹೇಳು. ಆಗ ಆ ಜನರು ನಕ್ಕು, ‘ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕೆಂಬುದು ನಮಗೆ ಚೆನ್ನಾಗಿ ಗೊತ್ತು’ ಎಂದು ನಿನಗೆ ಹೇಳುತ್ತಾರೆ.


ಇಸ್ರೇಲಿನ ಜನರೇ, ಈ ಸಂದೇಶಕ್ಕೆ ಕಿವಿಗೊಡಿರಿ! ನಿಮ್ಮ ವಿಷಯವಾಗಿ ಯೆಹೋವನು ಹೀಗೆ ಹೇಳಿದ್ದಾನೆ. ಇಸ್ರೇಲೇ, ಇದು ನಾನು ಈಜಿಪ್ಟ್‌ನಿಂದ ಬಿಡಿಸಿಕೊಂಡು ಬಂದ ಎಲ್ಲಾ ಕುಟುಂಬಗಳವರ (ಇಸ್ರೇಲ್) ವಿಷಯವಾದ ಸಂದೇಶ.


ಎಲ್ಲಾ ಜನಾಂಗಗಳಿಗಿಂತ ನಿಮ್ಮನ್ನು ಬಲಿಷ್ಠರಾದ ಜನಾಂಗವನ್ನಾಗಿ ಮಾಡುವನು. ದೇವರು ನಿಮಗೆ ಜನರಿಂದ ಹೊಗಳಿಕೆಯನ್ನು, ಪ್ರಖ್ಯಾತಿಯನ್ನು ಮತ್ತು ಗೌರವವನ್ನು ಬರಮಾಡುವನು; ಆತನು ವಾಗ್ದಾನ ಮಾಡಿದಂತೆಯೇ ನೀವು ಪವಿತ್ರ ಜನರಾಗುವಿರಿ.”


“ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುವನು: ‘ನಾನು ಜೆರುಸಲೇಮಿಗೂ ಅದರ ಸುತ್ತಲಿನ ಹಳ್ಳಿಗಳಿಗೂ ಅನೇಕ ವಿಪತ್ತುಗಳನ್ನು ಬರಮಾಡುವುದಾಗಿ ಹೇಳಿದೆನು. ಅವುಗಳನ್ನು ಬೇಗನೆ ಬರಮಾಡುತ್ತೇನೆ. ಏಕೆಂದರೆ ಜನರು ಬಹಳ ಮೊಂಡರಾಗಿದ್ದಾರೆ. ನಾನು ಹೇಳಿದ್ದನ್ನು ಅವರು ಕೇಳುವುದೂ ಇಲ್ಲ, ಅನುಸರಿಸುವುದೂ ಇಲ್ಲ.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು