ಯೆರೆಮೀಯ 13:12 - ಪರಿಶುದ್ದ ಬೈಬಲ್12 “ಯೆರೆಮೀಯನೇ, ಯೆಹೂದದ ಜನರಿಗೆ, ‘ಇಸ್ರೇಲಿನ ದೇವರಾದ ಯೆಹೋವನು ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕು ಎಂದು ಹೇಳುತ್ತಾನೆ’ ಎಂದು ಹೇಳು. ಆಗ ಆ ಜನರು ನಕ್ಕು, ‘ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕೆಂಬುದು ನಮಗೆ ಚೆನ್ನಾಗಿ ಗೊತ್ತು’ ಎಂದು ನಿನಗೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, “ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ಯೆರೆಮೀಯನೇ, ನೀನು ಅವರಿಗೆ ಹೀಗೆಂದು ಸಾರು : ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಸಂದೇಶವನ್ನು ಕೇಳಿ - ‘ಪ್ರತಿಯೊಂದು ಕುಡಿಕೆಯು ದ್ರಾಕ್ಷಾರಸದಿಂದ ತುಂಬಿರುವುದು.’ ಆಗ ಅವರು ನಿನಗೆ - ‘ಪ್ರತಿಯೊಂದು ಕುಡಿಕೆ ದ್ರಾಕ್ಷಾರಸದಿಂದ ತುಂಬಿರುವುದು ಎಂಬುದು ನಮಗೆ ಗೊತ್ತಿಲ್ಲವೆ?’ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವದು ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ - ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವದು ನಮಗೆ ಗೊತ್ತಿಲ್ಲವೋ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 “ಆದ್ದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು: ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವು. ಆಗ ಅವರು ನಿನಗೆ ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ,’ ಎಂದು ನಿನಗೆ ಹೇಳುವರು. ಅಧ್ಯಾಯವನ್ನು ನೋಡಿ |
ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”