ಯೆರೆಮೀಯ 13:14 - ಪರಿಶುದ್ದ ಬೈಬಲ್14 ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು; ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.” ಅಧ್ಯಾಯವನ್ನು ನೋಡಿ |
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
ಬಳಿಕ ದೇವರು ಅಲ್ಲಿದ್ದ ಉಳಿದವರಿಗೆ, “ಮೊದಲನೆಯವನನ್ನು ಹಿಂಬಾಲಿಸಿರಿ. ಹಣೆಗಳ ಮೇಲೆ ಗುರುತಿಲ್ಲದ ಜನರನ್ನು ಕೊಂದು ನಾಶಪಡಿಸಿರಿ. ಯಾವ ಮರುಕವನ್ನಾಗಲಿ ಕನಿಕರವನ್ನಾಗಲಿ ತೋರದೆ ವೃದ್ಧರನ್ನೂ ಯೌವನಸ್ಥರನ್ನೂ ಯುವತಿಯರನ್ನೂ ಸ್ತ್ರೀಯರನ್ನೂ ಮಕ್ಕಳನ್ನೂ ಕೊಲ್ಲಿರಿ. ಆದರೆ ಹಣೆಯ ಮೇಲೆ ಗುರುತು ಹೊಂದಿರುವ ಯಾರನ್ನೂ ಮುಟ್ಟಬೇಡಿ. ಇದನ್ನು ನನ್ನ ಆಲಯದಿಂದಲೇ ಆರಂಭಿಸಿ” ಎಂದು ಹೇಳಿದನು. ಆದ್ದರಿಂದ ಅವರು ಆಲಯದ ಮುಂದೆ ಇದ್ದ ಹಿರಿಯರನ್ನು ಕೊಲ್ಲುವುದರ ಮೂಲಕ ಈ ಕೆಲಸವನ್ನು ಆರಂಭಿಸಿದರು.
ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.