ಯೆರೆಮೀಯ 13:17 - ಪರಿಶುದ್ದ ಬೈಬಲ್17 ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನ್ನನ್ನು ಅಳುವ ಹಾಗೆ ಮಾಡುವುದು. ನಾನು ಬಹಳ ಗಟ್ಟಿಯಾಗಿ ಅಳುವೆನು, ನನ್ನ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು. ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿವಿುತ್ತ ಗೋಳಾಡುವದು; ಯೆಹೋವನ ಮಂದೆಯು ಸೆರೆಯಾಗಿ ಹೋದದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀವು ಕೇಳದಿದ್ದರೆ, ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು, ಯೆಹೋವ ದೇವರ ಮಂದೆಯು ಸೆರೆಯಾಗಿ ಹೋದದ್ದರಿಂದ ಬಹಳವಾಗಿ ಅಳುವೆನು. ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು. ಅಧ್ಯಾಯವನ್ನು ನೋಡಿ |
ಆ ಕುರುಬರು ನನ್ನ ಜನರಿಗೆ ಹೊಣೆಗಾರರಾಗಿದ್ದಾರೆ. ಇಸ್ರೇಲಿನ ದೇವರಾದ ಯೆಹೋವನು ಆ ಕುರುಬರಿಗೆ ಹೀಗೆ ಹೇಳುತ್ತಾನೆ, “ನನ್ನ ಕುರಿಗಳು ಎಲ್ಲಾ ದಿಕ್ಕುಗಳಿಗೂ ಚದರುವಂತೆ ನೀವು ಮಾಡಿರುವಿರಿ. ನೀವು ಅವುಗಳನ್ನು ಓಡಿಸಿಬಿಟ್ಟಿದ್ದೀರಿ. ನೀವು ಅವುಗಳ ಯೋಗಕ್ಷೇಮವನ್ನು ನೋಡಿಕೊಳ್ಳಲಿಲ್ಲ. ಈಗ ನಾನು ನಿಮ್ಮನ್ನು ವಿಚಾರಿಸಿಕೊಳ್ಳುತ್ತೇನೆ. ನೀವು ಮಾಡಿದ ದುಷ್ಕೃತ್ಯಗಳಿಗಾಗಿ ನಿಮ್ಮನ್ನು ದಂಡಿಸುತ್ತೇನೆ.” ಯೆಹೋವನು ಹೀಗೆ ಹೇಳಿದನು.