ಯೆರೆಮೀಯ 13:18 - ಪರಿಶುದ್ದ ಬೈಬಲ್18 ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.” ಅಧ್ಯಾಯವನ್ನು ನೋಡಿ |
ಮನಸ್ಸೆಯ ಪ್ರಾರ್ಥನೆಯ ವಿಷಯವಾಗಿಯೂ ದೇವರ ಪ್ರತಿಕ್ರಿಯೆಯ ವಿಷಯವಾಗಿಯೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿದೆ. ಮಾತ್ರವಲ್ಲದೆ ಮನಸ್ಸೆಯು ದೇವರಿಗೆ ವಿರುದ್ಧವಾಗಿ ಮಾಡಿದ ಘೋರಕೃತ್ಯಗಳೂ ಪಶ್ಚಾತ್ತಾಪಪಡುವ ಮೊದಲು ಎಲ್ಲೆಲ್ಲಿ ಅನ್ಯದೇವತೆಗಳಿಗೆ ಪೂಜಾಸ್ಥಳಗಳನ್ನು ಮಾಡಿದ್ದನೆಂದೂ ಎಲ್ಲೆಲ್ಲಿ ಅಶೇರಸ್ತಂಭಗಳನ್ನು ನೆಡಿಸಿದ್ದನೆಂದೂ ದೇವದರ್ಶಿಗಳ ಚರಿತ್ರೆಯಲ್ಲಿ ಬರೆಯಲಾಗಿದೆ.