ಯೆರೆಮೀಯ 13:19 - ಪರಿಶುದ್ದ ಬೈಬಲ್19 ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ದಕ್ಷಿಣ ನಾಡಿನ ನಗರಗಳು ಮುತ್ತಿಗೆಗೆ ತುತ್ತಾಗಿವೆ. ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಜುದೇಯವೆಲ್ಲ ಸೆರೆಹೋಗಿದೆ; ಸಂಪೂರ್ಣವಾಗಿ ಸೆರೆಯಾಗಿದೆ’.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ದಕ್ಷಿಣದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ದಕ್ಷಿಣ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ. ಅಧ್ಯಾಯವನ್ನು ನೋಡಿ |
ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾದ ನೆಬೂಜರದಾನನೆಂಬವನು ಜೆರುಸಲೇಮಿನಲ್ಲಿ ಉಳಿದ ಜನರನ್ನು ಹಿಡಿದು ಬಂಧಿಗಳನ್ನಾಗಿ ಮಾಡಿದ್ದನು. ಅವರನ್ನು ಅವನು ಬಾಬಿಲೋನಿಗೆ ತೆಗೆದುಕೊಂಡು ಹೋದನು. ಈ ಮೊದಲೆ ಅವನಿಗೆ ಶರಣಾಗತರಾದವರನ್ನೂ ಸಹ ನೆಬೂಜರದಾನನು ಬಂಧಿಗಳನ್ನಾಗಿ ಮಾಡಿದನು. ಅವನು ಜೆರುಸಲೇಮಿನ ಉಳಿದವರೆಲ್ಲರನ್ನು ಬಂಧಿಗಳನ್ನಾಗಿ ಮಾಡಿ ಬಾಬಿಲೋನಿಗೆ ತೆಗೆದುಕೊಂಡು ಹೋದನು.
ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.
ಜೆರುಸಲೇಮಿಗೆ ಯೆಹೂದದ ಪಟ್ಟಣಗಳಿಂದ ಜನರು ಬರುವರು. ಅದರ ಸುತ್ತಲೂ ಇದ್ದ ಸಣ್ಣಸಣ್ಣ ಹಳ್ಳಿಗಳಿಂದ ಜನರು ಜೆರುಸಲೇಮಿಗೆ ಬರುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಿಂದ ಜನರು ಬರುವರು. ಪಶ್ಚಿಮ ಬೆಟ್ಟಗಳ ಇಳಿಜಾರು ಪ್ರದೇಶದಿಂದ ಮತ್ತು ಬೆಟ್ಟಪ್ರದೇಶದಿಂದ ಜನರು ಬರುವರು. ನೆಗೆವ್ ಪ್ರದೇಶದಿಂದ ಜನರು ಬರುವರು. ಆ ಜನರೆಲ್ಲರು ಸರ್ವಾಂಗಹೋಮಗಳನ್ನು, ಯಜ್ಞಗಳನ್ನು, ಧಾನ್ಯನೈವೇದ್ಯಗಳನ್ನು, ಧೂಪವನ್ನು ಮತ್ತು ಕೃತಜ್ಞತಾಯಜ್ಞಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಬರುವರು.
ಜನರು ಹಣ ಕೊಟ್ಟು ಭೂಮಿಯನ್ನು ಕೊಂಡುಕೊಳ್ಳುವರು. ಅವರು ಕರಾರುಪತ್ರಗಳಿಗೆ ಸಹಿಹಾಕುವರು. ಜನರು ಕ್ರಯಪತ್ರಗಳಿಗೆ ಸಹಿ ಹಾಕುವದನ್ನು ಬೇರೆಯವರು ನೋಡುವರು. ಬೆನ್ಯಾಮೀನ್ ಕುಲದವರು ವಾಸಿಸುವ ಪ್ರದೇಶದಲ್ಲಿ ಜನರು ಪುನಃ ಹೊಲಗಳನ್ನು ಕೊಂಡುಕೊಳ್ಳುವರು. ಜೆರುಸಲೇಮಿನ ಸುತ್ತಲಿನ ಪ್ರದೇಶದಲ್ಲಿ ಅವರು ಹೊಲಗಳನ್ನು ಕೊಂಡುಕೊಳ್ಳುವರು. ಅವರು ಯೆಹೂದ ಪ್ರದೇಶದ ಊರುಗಳಲ್ಲಿಯೂ ಬೆಟ್ಟಪ್ರದೇಶದಲ್ಲಿಯೂ ಪಶ್ಚಿಮದ ಇಳಿಜಾರು ಪ್ರದೇಶದಲ್ಲಿಯೂ ದಕ್ಷಿಣದ ಮರಳುಗಾಡಿನಲ್ಲಿಯೂ ಹೊಲಗಳನ್ನು ಕೊಂಡುಕೊಳ್ಳುವರು. ನಾನು ನಿಮ್ಮ ಜನರನ್ನು ನಿಮ್ಮ ಪ್ರದೇಶಕ್ಕೆ ಪುನಃ ಕರೆದುಕೊಂಡು ಬರುವದರಿಂದ ಹೀಗಾಗುವುದು.” ಇದು ಯೆಹೋವನ ನುಡಿ.
ಇದನ್ನು ತಿಳಿಸುವುದಕ್ಕಾಗಿಯೇ ದೇವರು ಹಿಂದಿನ ಕಾಲದಲ್ಲಿ ಪ್ರವಾದಿಗಳನ್ನು ಉಪಯೋಗಿಸಿದ್ದನು. ಜೆರುಸಲೇಮ್ ಜನಭರಿತವಾದ ಪಟ್ಟಣವಾಗಿದ್ದಾಗ ದೇವರು ಇದನ್ನು ಜನರಿಗೆ ತಿಳಿಸಿದ್ದನು. ಜೆರುಸಲೇಮಿನ ಸುತ್ತಮುತ್ತ ಇರುವ ಪಟ್ಟಣಗಳಲ್ಲಿ ಜನರು ವಾಸಿಸುತ್ತಿದ್ದ ಸಮಯದಲ್ಲಿ ದೇವರು ಇದನ್ನು ತಿಳಿಸಿದ್ದನು. ನೆಗೆವ್‌ನಲ್ಲಿಯೂ ಪಶ್ಚಿಮದ ಪರ್ವತಗಳ ಬುಡದಲ್ಲಿಯೂ ದೇವರು ಇದನ್ನು ಜನರಿಗೆ ತಿಳಿಸಿದ್ದನು.”
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)