ಯೆರೆಮೀಯ 13:21 - ಪರಿಶುದ್ದ ಬೈಬಲ್21 ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಬೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿನ್ನೊಡನೆ ಗೆಳೆಯರಂತೆ ಬಾಳಲು ನೀನೇ ಪಳಗಿಸಿದವರನ್ನು ನಿನಗೆ ಒಡೆಯರನ್ನಾಗಿ ನಾನು ನೇಮಿಸುವಾಗ ಏನು ಹೇಳುವೆ? ಹೆರುವವಳಿಗೆ ಬರುವಂಥ ವೇದನೆ ಆಗ ನಿನಗೆ ಬರದೆ ಇರುವುದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನಲ್ಲಿ ಬಳಿಕೆಗೊಳ್ಳುವಂತೆ ನೀನು ಅಭ್ಯಾಸಮಾಡಿಸಿದವರನ್ನು [ಯೆಹೋವನು] ನಿನಗೆ ತಲೆಯಾಗಿ ನೇವಿುಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವದಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು ಯೆಹೋವ ದೇವರು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳೋ ಎಂಬಂತೆ ಹಿಡಿಯುವುದಲ್ಲವೆ? ಅಧ್ಯಾಯವನ್ನು ನೋಡಿ |
ಯೆಹೂದದ ರಾಜನ ಅರಮನೆಯಲ್ಲಿ ಉಳಿದ ಎಲ್ಲಾ ಸ್ತ್ರೀಯರನ್ನು ಬಾಬಿಲೋನಿನ ಸೈನ್ಯಾಧಿಕಾರಿಗಳ ಬಳಿಗೆ ತರಲಾಗುವುದು. ನಿನ್ನ ಸ್ತ್ರೀಯರು ಹಾಡನ್ನು ಹಾಡಿ ನಿನ್ನನ್ನು ತಮಾಷೆ ಮಾಡುವರು. ಆ ಸ್ತ್ರೀಯರು ಹೀಗೆ ಹೇಳುವರು: ‘ನಿನಗಿಂತಲೂ ಪ್ರಬಲರಾಗಿದ್ದ ನಿನ್ನ ಒಳ್ಳೆಯ ಸ್ನೇಹಿತರು ನಿನ್ನನ್ನು ತಪ್ಪುದಾರಿಗೆ ಎಳೆದರು. ಆ ಸ್ನೇಹಿತರನ್ನು ನೀನು ತುಂಬಾ ನಂಬಿಕೊಂಡಿದ್ದೆ. ನಿನ್ನ ಪಾದಗಳು ಕೆಸರಿನಲ್ಲಿ ಹೂತಿವೆ. ನಿನ್ನ ಸ್ನೇಹಿತರು ನಿನ್ನಿದ ದೂರವಾಗಿದ್ದಾರೆ.’
ಹಾಳಾಗಿಹೋದ ಯೆಹೂದವೇ, ನೀನು ಮಾಡುತ್ತಿರುವುದೇನು? ಅತ್ಯುತ್ತಮವಾದ ಕೆಂಪುಬಣ್ಣದ ಪೋಷಾಕನ್ನು ನೀನು ಧರಿಸಿಕೊಳ್ಳುತ್ತಿರುವುದೇಕೆ? ಸುವರ್ಣಾಭರಣಗಳಿಂದ ನಿನ್ನನ್ನು ಏಕೆ ಅಲಂಕರಿಸಿಕೊಳ್ಳುತ್ತಿರುವೆ? ಕಣ್ಣಿಗೆ ಕಾಡಿಗೆಯನ್ನು ಏಕೆ ಹಚ್ಚುತ್ತಿರುವೆ? ನೀನು ಅಲಂಕಾರ ಮಾಡಿಕೊಳ್ಳುವದೆಲ್ಲ ವ್ಯರ್ಥ. ನಿನ್ನ ಪ್ರಿಯತಮರು ನಿನ್ನನ್ನು ತಿರಸ್ಕರಿಸುತ್ತಾರೆ. ಅವರು ನಿನ್ನನ್ನು ಕೊಲೆಮಾಡುವ ಪ್ರಯತ್ನದಲ್ಲಿದ್ದಾರೆ.