Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:25 - ಪರಿಶುದ್ದ ಬೈಬಲ್‌

25 ನಿಮ್ಮ ಗತಿ ಹೀಗಾಗುವುದು. ನನ್ನ ಯೋಜನೆಗಳಲ್ಲಿ ಇದು ನಿಮ್ಮ ಪಾತ್ರ.” ಇದು ಯೆಹೋವನ ನುಡಿ. “ಏಕೆ ಹೀಗಾಗುವದು? ಏಕೆಂದರೆ ನೀವು ನನ್ನನ್ನು ಮರೆತುಬಿಟ್ಟಿರಿ. ಸುಳ್ಳುದೇವರುಗಳನ್ನು ನಂಬಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನೀನು ನನ್ನನ್ನು ಮರೆತುಬಿಟ್ಟು ಸುಳ್ಳನ್ನು ನಂಬಿದ್ದರಿಂದ ಇದೇ ನಿನಗೆ ಒದಗಲಿರುವ ಗತಿ. ಇದೇ ನಾನು ನಿನಗೆ ಅಳೆದುಕೊಡುವ ಪ್ರತೀಕಾರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದೇ ನಿನ್ನ ಭಾಗವು, ನನ್ನಿಂದ ನಿನಗೆ ಅಳತೆ ಮಾಡಿದ ಪಾಲು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ನನ್ನನ್ನು ಮರೆತುಬಿಟ್ಟು, ಸುಳ್ಳು ದೇವರುಗಳಲ್ಲಿ ಭರವಸೆಯಿಟ್ಟಿದ್ದೀಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:25
22 ತಿಳಿವುಗಳ ಹೋಲಿಕೆ  

ದುಷ್ಟರಿಗೆ ದೇವರು ಮಾಡುವುದು ಇದನ್ನೇ. ಅವರಿಗೆ ದೇವರು ಕೊಡುವುದೂ ಇದನ್ನೇ.”


ಅವನನ್ನು ಶಿಕ್ಷಿಸಿ ಕಪಟಿಗಳಿರುವ ಸ್ಥಳಕ್ಕೆ ನೂಕಿಸುವನು. ಆ ಸ್ಥಳದಲ್ಲಿ ಜನರು ಬಾಧೆಯಿಂದ ಗೋಳಾಡುತ್ತಾ ತಮ್ಮ ಹಲ್ಲುಗಳನ್ನು ಕಡಿಯುತ್ತಾ ಇರುವರು.


ಯುವತಿಯು ತನ್ನ ಆಭರಣಗಳನ್ನು ಮರೆಯುವಳೇ? ಇಲ್ಲ. ವಧುವು ಮದುವೆಯ ಉಡುಪನ್ನು ಧರಿಸಿಕೊಳ್ಳಲು ಮರೆಯುವಳೇ? ಇಲ್ಲ. ಆದರೆ ನನ್ನ ಜನರು ನನ್ನನ್ನು ಅಸಂಖ್ಯಾತ ದಿನಗಳವರೆಗೆ ಮರೆತುಬಿಟ್ಟಿದ್ದಾರೆ.


ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.


ದೇವರನ್ನು ಅಲಕ್ಷ್ಯ ಮಾಡುವ ಜನರೆಲ್ಲ ಕೆಟ್ಟವರು. ಅವರು ಮರಣದ ಸ್ಥಳಕ್ಕೆ ಹೋಗುವರು.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಜನರು ಬುದ್ಧಿಗೇಡಿಗಳಾಗಿದ್ದಾರೆ. ತಾವು ಕೆತ್ತಿದ ವಿಗ್ರಹಗಳಿಂದ ಅಕ್ಕಸಾಲಿಗರು ಮೋಸಹೋಗುತ್ತಾರೆ. ಆ ವಿಗ್ರಹಗಳು ಕೇವಲ ಸುಳ್ಳಿನ ಕಂತೆಗಳು. ಅವುಗಳಲ್ಲಿ ಜೀವವಿಲ್ಲ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.


ನೀವು, “ನಾವು ಮರಣದೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ. ನಾವು ಪಾತಾಳದೊಂದಿಗೆ ಒಪ್ಪಂದ ಮಾಡಿದ್ದೇವೆ. ಆದ್ದರಿಂದ ನಾವು ಶಿಕ್ಷಿಸಲ್ಪಡುವದಿಲ್ಲ. ಶಿಕ್ಷೆಯು ಹಾದುಹೋಗುವಾಗ ಅದು ನಮಗೇನೂ ಹಾನಿ ಮಾಡುವದಿಲ್ಲ. ನಾವು ನಮ್ಮ ಸುಳ್ಳುಮೋಸಗಳ ಹಿಂದೆ ಅವಿತುಕೊಳ್ಳುತ್ತೇವೆ” ಎಂದು ಹೇಳುತ್ತೀರಿ.


“ಆ ಸಮಯದಲ್ಲಿ ಯಾಕೋಬಿನ ಸಂಪತ್ತೆಲ್ಲಾ ಕೊಳ್ಳೆಹೊಡೆಯಲ್ಪಡುವದು. ಯಾಕೋಬನು ರೋಗಗ್ರಸ್ಥನಾದವನಂತೆ ಬಲಹೀನನಾಗಿಯೂ ತೆಳುವಾಗಿಯೂ ಇರುವನು.


ಅವರು ದೇವರ ಸತ್ಯವನ್ನು ತೊರೆದು ಸುಳ್ಳನ್ನು ಹಿಡಿದುಕೊಂಡರು; ಸೃಷ್ಟಿಸಲ್ಪಟ್ಟ ವಸ್ತುಗಳನ್ನು ಆರಾಧಿಸಿದರು; ಅವುಗಳ ಸೇವೆ ಮಾಡಿದರು. ಆದರೆ ಆ ವಸ್ತುಗಳನ್ನು ಸೃಷ್ಟಿಸಿದ ದೇವರನ್ನು ಅವರು ಆರಾಧಿಸಲಿಲ್ಲ; ಆತನ ಸೇವೆ ಮಾಡಲಿಲ್ಲ. ದೇವರಿಗೇ ನಿರಂತರ ಸ್ತುತಿಸ್ತೋತ್ರ ಸಲ್ಲಬೇಕು. ಆಮೆನ್.


ಅವುಗಳಿಗೆ ಮಾಡತಕ್ಕದ್ದನ್ನು ದೇವರು ತೀರ್ಮಾನಿಸಿದ್ದಾನೆ. ಆತನು ಅವುಗಳಿಗೆ ಒಂದು ಸ್ಥಳವನ್ನು ಆರಿಸಿದ್ದಾನೆ. ಆತನು ಮೇರೆಯನ್ನು ನಿರ್ಮಿಸಿ ಅವುಗಳ ದೇಶವನ್ನು ತೋರಿಸಿದ್ದಾನೆ. ಹೀಗೆ ಆ ಪ್ರಾಣಿಗಳು ದೇಶವನ್ನು ನಿತ್ಯಕಾಲಕ್ಕೂ ತಮ್ಮದಾಗಿ ಮಾಡಿಕೊಳ್ಳುವವು. ವರ್ಷವರ್ಷವೂ ಅವುಗಳು ಅಲ್ಲಿಯೇ ವಾಸಮಾಡುವವು.


ನಿಮ್ಮ ಪಾಪಗಳೂ ನಿಮ್ಮ ಪಿತೃಗಳ ಪಾಪಗಳೂ ಒಂದೇಯಾಗಿವೆ. ಇದು ಯೆಹೋವನ ನುಡಿ. ನಿಮ್ಮ ಪೂರ್ವಿಕರು ಬೆಟ್ಟಗಳ ಮೇಲೆ ಧೂಪಸುಟ್ಟು ಪಾಪಮಾಡಿದರು. ಅವರು ಆ ಬೆಟ್ಟಗಳ ಮೇಲೆ ನನ್ನನ್ನು ಅವಮಾನಪಡಿಸಿದರು. ಆದರೆ ನಾನು ಅವರನ್ನು ಮೊದಲು ಶಿಕ್ಷಿಸಿದೆನು. ಅವರಿಗೆ ತಕ್ಕ ಶಿಕ್ಷೆಯನ್ನು ಕೊಟ್ಟೆನು.”


ಬೋಳುಪರ್ವತದ ಮೇಲೆ ಅಳುವ ಧ್ವನಿಯನ್ನು ನೀವು ಕೇಳಬಹುದು. ಇಸ್ರೇಲಿನ ಜನರು ಕಣ್ಣೀರು ಸುರಿಸಿ ಕರುಣೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಅವರು ತುಂಬಾ ಕೆಟ್ಟುಹೋಗಿ ತಮ್ಮ ದೇವರಾದ ಯೆಹೋವನನ್ನು ಮರೆತರು.


ನಿನ್ನ ಜನರು ನನ್ನ ಮಾತುಗಳನ್ನು ಕೇಳಲಿಲ್ಲ. ನನ್ನ ಬೋಧನೆಯನ್ನು ಸ್ವೀಕರಿಸಲಿಲ್ಲ. ಜೆರುಸಲೇಮ್ ದೇವರ ಮೇಲೆ ಭರವಸವಿಡಲಿಲ್ಲ. ಆತನ ಬಳಿಗೆ ಹೋಗಲಿಲ್ಲ.


ಆದರೆ ನನ್ನ ಜನರು ನನ್ನನ್ನು ಮರೆತಿದ್ದಾರೆ. ಅವರು ನಿಷ್ಪ್ರಯೋಜಕವಾದ ವಿಗ್ರಹಗಳಿಗೆ ನೈವೇದ್ಯ ಮಾಡುತ್ತಾರೆ. ನನ್ನ ಜನರು ತಾವು ಮಾಡುವ ಕೆಲಸಗಳಲ್ಲಿ ಮುಗ್ಗರಿಸುತ್ತಾರೆ. ಅವರು ತಮ್ಮ ಪೂರ್ವಿಕರ ಹಳೆಯ ಹಾದಿಯಲ್ಲಿಯೇ ಮುಗ್ಗರಿಸುತ್ತಾರೆ. ನನ್ನ ಜನರು ಒಳ್ಳೆಯ ರಾಜಬೀದಿಯ ಮೇಲೆ ನನ್ನನ್ನು ಹಿಂಬಾಲಿಸುವದನ್ನು ತೊರೆದು ಹಾಳಾದ ಹಾದಿಯನ್ನು ಹಿಡಿಯುತ್ತಾರೆ.


“ನನ್ನ ಒಡೆಯನಾದ ಯೆಹೋವನು ಹೀಗೆ ಹೇಳಿದನು: ‘ಜೆರುಸಲೇಮೇ, ನೀನು ನನ್ನನ್ನು ಮರೆತುಬಿಟ್ಟೆ. ನೀನು ನನ್ನನ್ನು ತೊರೆದುಬಿಟ್ಟೆ; ಆದ್ದರಿಂದ ನೀನು ನನ್ನನ್ನು ತೊರೆದ ಸೂಳೆಯಂತೆ ಜೀವಿಸಿದ್ದಕ್ಕೆ ಶಿಕ್ಷೆ ಅನುಭವಿಸಬೇಕು. ನಿನ್ನ ನೀಚ ನಡತೆಗಾಗಿ ನೀನು ಕಷ್ಟ ಅನುಭವಿಸಬೇಕು.’”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು