Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:6 - ಪರಿಶುದ್ದ ಬೈಬಲ್‌

6 ಬಹಳ ದಿನಗಳಾದ ತರುವಾಯ, ಯೆಹೋವನು ನನಗೆ, “ಯೆರೆಮೀಯನೇ, ಪೆರಾತ್‌ಗೆ ಹೋಗು, ನಾನು ನಿನಗೆ ಅಲ್ಲಿ ಬಚ್ಚಿಡಲು ಹೇಳಿದ ನಡುಪಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಬಹು ದಿನಗಳ ಮೇಲೆ ಯೆಹೋವನು ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಬಹು ದಿನಗಳ ಮೇಲೆ ಸರ್ವೇಶ್ವರ ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಬಹುದಿನಗಳ ಮೇಲೆ ಯೆಹೋವನು ನನಗೆ - ಹೊರಡು, ಯೂಫ್ರೇಟೀಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಹು ದಿನಗಳ ಮೇಲೆ ಯೆಹೋವ ದೇವರು ನನಗೆ, “ಹೊರಡು, ಯೂಫ್ರೇಟೀಸ್ ನದಿಗೆ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:6
5 ತಿಳಿವುಗಳ ಹೋಲಿಕೆ  

ಆದ್ದರಿಂದ ನಾನು ಪೆರಾತ್‌ಗೆ ಹೋದೆ. ಯೆಹೋವನು ಹೇಳಿದ ಪ್ರಕಾರ ನಡುಪಟ್ಟಿಯನ್ನು ಬಚ್ಚಿಟ್ಟೆ.


ನಾನು ಪೆರಾತ್‌ಗೆ ಹೋದೆ ಮತ್ತು ನಡುಪಟ್ಟಿಯನ್ನು ಬಚ್ಚಿಟ್ಟ ಬೆಟ್ಟದ ಸಂದಿನಿಂದ ಹೊರತೆಗೆದೆ. ಆದರೆ ಆ ನಡುಪಟ್ಟಿ ಹಾಳಾಗಿಹೋಗಿತ್ತು. ನಾನು ಅದನ್ನು ಧರಿಸಲಾಗಲಿಲ್ಲ. ಅದು ಯಾವುದಕ್ಕೂ ಪ್ರಯೋಜನವಿರಲಿಲ್ಲ.


ಕೆರೂಬಿಯರ ತಲೆಗಳ ಮೇಲಿದ್ದ ಗುಮಟದ ಕಡೆಗೆ ನೋಡಿದೆನು. ಆ ಗುಮಟದ ಮೇಲೆ ಇಂದ್ರನೀಲಮಣಿಯಿಂದ ಮಾಡಿದ ಸಿಂಹಾಸನದಂತೆ ಕಾಣುತ್ತಿದ್ದ ಏನೋ ಇತ್ತು.


ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಈ ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು