Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:7 - ಪರಿಶುದ್ದ ಬೈಬಲ್‌

7 ನಾನು ಪೆರಾತ್‌ಗೆ ಹೋದೆ ಮತ್ತು ನಡುಪಟ್ಟಿಯನ್ನು ಬಚ್ಚಿಟ್ಟ ಬೆಟ್ಟದ ಸಂದಿನಿಂದ ಹೊರತೆಗೆದೆ. ಆದರೆ ಆ ನಡುಪಟ್ಟಿ ಹಾಳಾಗಿಹೋಗಿತ್ತು. ನಾನು ಅದನ್ನು ಧರಿಸಲಾಗಲಿಲ್ಲ. ಅದು ಯಾವುದಕ್ಕೂ ಪ್ರಯೋಜನವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಾನು ಯೂಫ್ರೆಟಿಸ್ ನದಿಗೆ ಹೋಗಿ ಹುಡುಕಿ ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ನಾನು ಯೂಫ್ರೇಟೀಸ್ ನದಿಗೆ ಹೋಗಿ ಅಗೆದು ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು; ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ನಾನು ಯೂಫ್ರೇಟೀಸ್ ನದಿಗೆ ಹೋಗಿ ಹುಡುಕಿ, ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:7
10 ತಿಳಿವುಗಳ ಹೋಲಿಕೆ  

ಎಲ್ಲಾ ಜನರು ದಾರಿ ತಪ್ಪಿದ್ದಾರೆ. ಎಲ್ಲಾ ಜನರು ಅಯೋಗ್ಯರಾಗಿದ್ದಾರೆ. ಒಳ್ಳೆಯದನ್ನು ಮಾಡುವ ಒಬ್ಬನೂ ಇಲ್ಲ. ಇಲ್ಲವೇ ಇಲ್ಲ!”


ನಾವೆಲ್ಲರೂ ಪಾಪದಿಂದ ಮಲಿನರಾಗಿದ್ದೇವೆ. ನಮ್ಮ ಸುಕಾರ್ಯಗಳೆಲ್ಲಾ ಹಳೇ ಕೊಳಕು ಬಟ್ಟೆಯಂತಿವೆ. ನಾವೆಲ್ಲಾ ಒಣಗಿಹೋದ ಎಲೆಗಳಂತಿದ್ದೇವೆ. ನಮ್ಮ ಪಾಪಗಳು ಬಿರುಗಾಳಿಯಂತೆ ನಮ್ಮನ್ನು ಬಡಿದುಕೊಂಡುಹೋಗಿವೆ.


ಹಿಂದೆ ಅವನು ನಿನಗೆ ನಿಷ್ಪ್ರಯೋಜಕನಾಗಿದ್ದನು. ಆದರೆ ಈಗ ಅವನು ನಿನಗೂ ನನಗೂ ಪ್ರಯೋಜನ ಉಳ್ಳವನಾಗಿದ್ದಾನೆ.


ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.


ಬಹಳ ದಿನಗಳಾದ ತರುವಾಯ, ಯೆಹೋವನು ನನಗೆ, “ಯೆರೆಮೀಯನೇ, ಪೆರಾತ್‌ಗೆ ಹೋಗು, ನಾನು ನಿನಗೆ ಅಲ್ಲಿ ಬಚ್ಚಿಡಲು ಹೇಳಿದ ನಡುಪಟ್ಟಿಯನ್ನು ತೆಗೆದುಕೊಂಡು ಬಾ” ಎಂದು ಹೇಳಿದನು.


ಆಗ ನನಗೆ ಯೆಹೋವನ ಸಂದೇಶ ಬಂದಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು