Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:9 - ಪರಿಶುದ್ದ ಬೈಬಲ್‌

9 ಯೆಹೋವನು ಹೀಗೆ ಹೇಳಿದನು, “ನಡುಪಟ್ಟಿಯು ಹಾಳಾಗಿ ನಿಷ್ಪ್ರಯೋಜಕವಾಗಿದೆ. ಅಂತೆಯೇ ನಾನು ಯೆಹೂದದ ಮತ್ತು ಜೆರುಸಲೇಮಿನ ಜಂಬದ ಜನರನ್ನು ಹಾಳುಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 “ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಇದು ಸರ್ವೇಶ್ವರನಾದ ನನ್ನ ನುಡಿ - ಈ ಪ್ರಕಾರವಾಗಿಯೇ ನಾನು ಜುದೇಯದ ದೊಡ್ಡಸ್ತಿಕೆಯನ್ನು ಹಾಗು ಜೆರುಸಲೇಮಿನ ಘನವಾದ ದೊಡ್ಡಸ್ತಿಕೆಯನ್ನು ತೆಗೆದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇದು ಯೆಹೋವನಾದ ನನ್ನ ನುಡಿ - ಇದೇ ಪ್ರಕಾರವಾಗಿ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಯೆರೂಸಲೇವಿುನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಈ ಪ್ರಕಾರ ನಾನು ಯೆಹೂದದ ಗರ್ವವನ್ನೂ, ಯೆರೂಸಲೇಮಿನ ಮಹಾ ಗರ್ವವನ್ನು ಕೆಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:9
19 ತಿಳಿವುಗಳ ಹೋಲಿಕೆ  

ನಿಮ್ಮ ಗರ್ವಕ್ಕೆ ಕಾರಣವಾದ ಬಲಿಷ್ಠವಾದ ಪಟ್ಟಣಗಳನ್ನು ನಾಶಮಾಡುವೆ. ಆಕಾಶವು ಮಳೆಗರೆಯುವುದಿಲ್ಲ. ಭೂಮಿಯು ಬೆಳೆಯನ್ನು ಫಲಿಸುವುದಿಲ್ಲ.


“ಆಗ ಜೆರುಸಲೇಮೇ, ನಿನ್ನ ಜನರು ನನಗೆ ವಿರುದ್ಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನೀನು ನಾಚಿಕೆಪಡುವುದಿಲ್ಲ. ಯಾಕೆಂದರೆ ನಾನು ಆ ದುಷ್ಟ ಜನರನ್ನೆಲ್ಲಾ ನಿರ್ಮೂಲ ಮಾಡುವೆನು. ಅಹಂಕಾರ ತುಂಬಿದ ಜನರನ್ನು ನಾನು ತೆಗೆದುಬಿಡುವೆನು. ನನ್ನ ಪವಿತ್ರ ಪರ್ವತದಲ್ಲಿ ಗರ್ವವುಳ್ಳವರು ಯಾರೂ ಇರುವದಿಲ್ಲ.


ಸರ್ವಶಕ್ತನಾದ ಯೆಹೋವನೇ. ಅದು ಪ್ರಾಮುಖ್ಯವಾಗದಂತೆ ಆತನೇ ತೀರ್ಮಾನಿಸಿದ್ದಾನೆ. ಆತನು ಗೌರವಿಸಲ್ಪಡುವ ಜನರನ್ನು ಅವಮಾನಪಡಿಸಬೇಕೆಂತಲೂ ಮಾಡಿದ್ದಾನೆ.


ಅಹಂಕಾರಿಯು ನಾಶನದ ಅಪಾಯದಲ್ಲಿದ್ದಾನೆ. ದುರಾಭಿಮಾನಿಯು ಸೋಲಿನ ಅಪಾಯದಲ್ಲಿದ್ದಾನೆ.


ಯುವಕರೇ, ನಾನು ನಿಮಗೂ ಕೆಲವು ಮಾತುಗಳನ್ನು ಹೇಳಬೇಕಾಗಿದೆ. ನೀವು ಹಿರಿಯರಿಗೆ ಅಧೀನರಾಗಿರಬೇಕು. ನೀವೆಲ್ಲರೂ ಒಬ್ಬರಿಗೊಬ್ಬರು ನಮ್ರತೆಯಿಂದ ನಡೆದುಕೊಳ್ಳಬೇಕು. “ದೇವರು ಅಹಂಕಾರಿಗಳಿಗೆ ವಿರುದ್ಧನಾಗಿದ್ದಾನೆ. ಆದರೆ ಆತನು ನಮ್ರತೆಯಿಂದ ಇರುವ ಜನರಿಗೆ ಕೃಪೆಯನ್ನು ದಯಪಾಲಿಸುವನು.”


ಆದರೆ ದೇವರು ದಯಪಾಲಿಸಿದ ಕೃಪೆಯು ಅದಕ್ಕಿಂತಲೂ ಹೆಚ್ಚಿನದು. ಪವಿತ್ರ ಗ್ರಂಥವು ಹೇಳುವಂತೆ, “ದೇವರು ಅಹಂಕಾರಿಗಳಿಗೆ ವಿರುದ್ಧವಾಗಿರುತ್ತಾನೆ, ದೀನರಿಗಾದರೆ ಕೃಪೆಯನ್ನು ದಯಪಾಲಿಸುತ್ತಾನೆ.”


ಅವನು ಪ್ರಾರ್ಥಿಸಿದ ಬಳಿಕ ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ಮನೆಗೆ ಹೋದನು ಎಂದು ನಾನು ನಿಮಗೆ ಹೇಳುತ್ತೇನೆ. ಆದರೆ ಆ ಫರಿಸಾಯನು ನೀತಿವಂತನೆಂದು ನಿರ್ಣಯಿಸಲ್ಪಡಲಿಲ್ಲ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನೂ ತಗ್ಗಿಸಲ್ಪಡುವನು; ತನ್ನನ್ನು ತಗ್ಗಿಸಿಕೊಳ್ಳುವ ಪ್ರತಿಯೊಬ್ಬನೂ ಹೆಚ್ಚಿಸಲ್ಪಡುವನು.”


ಹೌದು, ಯೆಹೋವನು ಯಾಕೋಬನ ವೈಭವವನ್ನು ಇಸ್ರೇಲಿನ ವೈಭವವಾಗಿ ಸ್ಥಾಪಿಸುವನು. ವೈರಿಯು ಅವರನ್ನು ನಾಶಮಾಡಿ ಅವರ ದ್ರಾಕ್ಷಿಬಳ್ಳಿಯನ್ನು ಹಾಳುಮಾಡಿದ್ದನು.


ದೇವರು ಹೇಳಿದ್ದೇನೆಂದರೆ, “ಹಿಂದೆ, ನೀನು ಜಂಬದಿಂದ ನಿನ್ನ ತಂಗಿ ಸೊದೋಮಳ ವಿಷಯವಾಗಿ ಗೇಲಿ ಮಾಡಿದ್ದೀ. ಹಾಗೆ ನೀನು ತಿರುಗಿ ಮಾಡುವುದಿಲ್ಲ.


ಸೊದೋಮಿಗೂ ಮತ್ತು ಆಕೆಯ ಹೆಣ್ಣು ಮಕ್ಕಳಿಗೂ ಅತಿರೇಕ ಜಂಬವು ಬಂದು ಭಯಂಕರ ಕೃತ್ಯಗಳನ್ನು ನನ್ನ ಮುಂದೆಯೇ ಮಾಡಿದರು. ಆದ್ದರಿಂದ ನಾನು ಅವರನ್ನು ನನ್ನಿಂದ ದೂರ ಮಾಡಿದೆನು.”


“ಮೋವಾಬಿನ ಸೊಕ್ಕಿನ ಬಗ್ಗೆ ನಾವು ಕೇಳಿದ್ದೇವೆ. ಅವನಿಗೆ ತುಂಬ ಸೊಕ್ಕು ಬಂದಿತ್ತು. ತಾನೇ ಮುಖ್ಯವಾದವನೆಂದು ಅವನು ಭಾವಿಸಿದ್ದನು. ಅವನು ಯಾವಾಗಲೂ ಬಡಾಯಿಕೊಚ್ಚಿಕೊಳ್ಳುತ್ತಿದ್ದನು. ಅವನು ತುಂಬಾ ಸೊಕ್ಕಿನವನಾಗಿದ್ದನು.”


ಮೋವಾಬಿನ ಜನರು ತುಂಬ ಹೆಚ್ಚಳಪಡುವವರೂ ಜಂಬದವರೂ ಎಂದು ನಾವು ಕೇಳಿದ್ದೇವೆ. ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ.


ಆಗ ನನಗೆ ಯೆಹೋವನ ಸಂದೇಶ ಬಂದಿತು.


ನಾನು ಈ ದ್ರಾಕ್ಷಾರಸವನ್ನು ಜೆರುಸಲೇಮಿನ ಮತ್ತು ಯೆಹೂದದ ಜನರಿಗೆ ಸುರಿದೆನು. ನಾನು ರಾಜನನ್ನು ಮತ್ತು ಯೆಹೂದದ ನಾಯಕರನ್ನು ಈ ಪಾತ್ರೆಯಲ್ಲಿಯ ದ್ರಾಕ್ಷಾರಸವನ್ನು ಕುಡಿಯುವಂತೆ ಮಾಡಿದೆನು. ಅವರು ಬರಿದಾದ ಮರುಭೂಮಿಯಂತಾಗಲೆಂದು ಹೀಗೆ ಮಾಡಿದೆನು. ಆ ಸ್ಥಳವು ತುಂಬಾ ಹಾಳಾಗಲಿ, ಜನರು ಅದರ ಬಗ್ಗೆ ಸಿಳ್ಳುಹಾಕಲಿ, ಶಾಪಹಾಕಲಿ ಎಂಬ ಉದ್ದೇಶದಿಂದ ನಾನು ಹಾಗೆ ಮಾಡಿದೆನು. ಹಾಗೆಯೇ ಆಯಿತು. ಯೆಹೂದವು ಈಗ ಹಾಗೆಯೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು