ಯೆರೆಮೀಯ 14:12 - ಪರಿಶುದ್ದ ಬೈಬಲ್12 ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇವರು ಉಪವಾಸ ಮಾಡುವಾಗ ಇವರ ಮೊರೆಯನ್ನು ಕೇಳೆನು; ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು; ಖಡ್ಗ ಕ್ಷಾಮ ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.
ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವುದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.
ನಾನು ನೋಡಿದಾಗ, ನನ್ನ ಮುಂದೆ ಒಂದು ಬೂದುಬಣ್ಣದ ಕುದುರೆಯಿರುವುದು ನನಗೆ ಕಾಣಿಸಿತು. ಆ ಕುದುರೆಯ ಮೇಲೆ ಕುಳಿತಿದ್ದ ಸವಾರನೇ ಮೃತ್ಯು. ಅವನ ಹಿಂದೆ ಪಾತಾಳ ಎಂಬುವನು ಬಂದನು. ಅವರಿಗೆ ಭೂಮಿಯ ಕಾಲುಭಾಗದ ಮೇಲೆ ಅಧಿಕಾರವನ್ನು ನೀಡಲಾಯಿತು. ಕತ್ತಿಯಿಂದಲೂ ಬರಗಾಲದಿಂದಲೂ ರೋಗಗಳಿಂದಲೂ ಮತ್ತು ಲೋಕದ ಮೇಲಿರುವ ಕಾಡುಮೃಗಗಳಿಂದಲೂ ಜನರನ್ನು ಕೊಲ್ಲುವ ಅಧಿಕಾರವನ್ನು ಅವರಿಗೆ ನೀಡಲಾಯಿತು.
“ಈಗ ವೈರಿಗಳು ನಗರವನ್ನು ಮುತ್ತಿದ್ದಾರೆ. ಜೆರುಸಲೇಮಿನ ಗೋಡೆಯನ್ನು ಹತ್ತಿ ಅದನ್ನು ಸ್ವಾಧೀನಪಡಿಸಿಕೊಳ್ಳುವದಕ್ಕಾಗಿ ಅವರು ಇಳಿಜಾರುಗೋಡೆಗಳನ್ನು ಕಟ್ಟುತ್ತಿದ್ದಾರೆ. ಬಾಬಿಲೋನಿನ ಸೈನಿಕರು ತಮ್ಮ ಖಡ್ಗ, ಕ್ಷಾಮ ಮತ್ತು ಭಯಂಕರವ್ಯಾಧಿ ಇವುಗಳ ಸಹಾಯದಿಂದ ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವರು. ಬಾಬಿಲೋನಿನ ಸೈನಿಕರು ಈಗ ನಗರದ ಮೇಲೆ ಧಾಳಿ ಮಾಡುತ್ತಿದ್ದಾರೆ. ಯೆಹೋವನೇ, ಹೀಗಾಗುವದೆಂದು ನೀನು ಹೇಳಿದ್ದೆ, ಈಗ ನೀನು ಹೇಳಿದಂತೆಯೇ ಆಗುತ್ತಿದೆ.