ಯೆರೆಮೀಯ 14:13 - ಪರಿಶುದ್ದ ಬೈಬಲ್13 ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ಈ ಜನರಿಗೆ, ‘ಖಡ್ಗ ನಿಮ್ಮ ಕಣ್ಣಿಗೂ ಕಾಣಿಸದು, ಕ್ಷಾಮ ನಿಮಗೆಂದಿಗೂ ಬಂದೊದಗದು. ಸರ್ವೇಶ್ವರ ಈ ನಾಡಿನಲ್ಲೆ ನಿಮಗೆ ಚಿರಶಾಂತಿ ಸಮಾಧಾನವನ್ನು ಕೊಡುವರು’ ಎಂದು ಪ್ರವಾದಿಗಳೇ ನುಡಿಯುತ್ತಿದ್ದಾರೆ,” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ - ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ಸ್ಥಿರಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ ಎಂಬದಾಗಿ ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು. ಅಧ್ಯಾಯವನ್ನು ನೋಡಿ |
ಹಿಂದಿನ ಕಾಲದಲ್ಲಿ, ದೇವಜನರಲ್ಲಿ ಸುಳ್ಳುಪ್ರವಾದಿಗಳಿದ್ದರು. ಈಗಲೂ ಇದ್ದಾರೆ. ನಿಮ್ಮಲ್ಲಿಯೂ ಸಹ ಕೆಲವು ಸುಳ್ಳುಪ್ರವಾದಿಗಳಿರುತ್ತಾರೆ. ಜನರನ್ನು ನಾಶನಕ್ಕೆ ನಡೆಸುವ ಸುಳ್ಳುಬೋಧನೆಗಳನ್ನು ಅವರು ಬೋಧಿಸುತ್ತಾರೆ. ತಾವು ಸುಳ್ಳುಬೋಧಕರೆಂಬುದು ನಿಮಗೆ ಸುಲಭವಾಗಿ ತಿಳಿಯದ ರೀತಿಯಲ್ಲಿ ಅವರು ಬೋಧಿಸುತ್ತಾರೆ. ಅವರು ತಮಗೆ ಬಿಡುಗಡೆ ತಂದುಕೊಟ್ಟ ಒಡೆಯನನ್ನೇ (ಯೇಸು) ಒಪ್ಪಿಕೊಳ್ಳುವುದಿಲ್ಲ. ಆದ್ದರಿಂದ ಅವರು ಬಹುಬೇಗನೆ ತಮ್ಮನ್ನು ತಾವೇ ನಾಶಪಡಿಸಿಕೊಳ್ಳುತ್ತಾರೆ.
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’”