ಯೆರೆಮೀಯ 14:14 - ಪರಿಶುದ್ದ ಬೈಬಲ್14 ಆಗ ಯೆಹೋವನು ನನಗೆ, “ಯೆರೆಮೀಯನೇ, ಆ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುತ್ತಾರೆ. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಅವರಿಗೆ ನಾನು ಯಾವ ಅಪ್ಪಣೆಯನ್ನೂ ಕೊಟ್ಟಿಲ್ಲ, ಅವರೊಂದಿಗೆ ನಾನು ಮಾತನ್ನೂ ಆಡಿಲ್ಲ. ಆ ಪ್ರವಾದಿಗಳು ಸುಳ್ಳುದರ್ಶನಗಳನ್ನು ನಿಷ್ಪ್ರಯೋಜಕವಾದ ಮಾಟಮಂತ್ರಗಳನ್ನು ಸ್ವಕಲ್ಪಿತ ವಿಚಾರಗಳನ್ನೂ ಬೋಧಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೆಹೋವನು ನನಗೆ ಹೀಗೆ ನುಡಿದನು - ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ; ಅವರು ಸುಳ್ಳಾದ ದಿವ್ಯದರ್ಶನವನ್ನೂ ಕಣಿಯನ್ನೂ ಮಾಯಾತಂತ್ರವನ್ನೂ ಸ್ವಕಲ್ಪಿತಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. ಅಧ್ಯಾಯವನ್ನು ನೋಡಿ |
ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.
ಜನರು ಭವಿಷ್ಯವನ್ನು ತಿಳಿಯುವುದಕ್ಕೆ ತಮ್ಮ ಸಣ್ಣ ಬೊಂಬೆಗಳನ್ನೋ ಮಂತ್ರಜಾಲವನ್ನೋ ಉಪಯೋಗಿಸುವರು. ಆದರೆ ಅವೆಲ್ಲಾ ನಿಷ್ಪ್ರಯೋಜಕ. ಆ ಜನರು ದರ್ಶನವನ್ನು ನೋಡುವರು ಮತ್ತು ಕನಸುಗಳ ಬಗ್ಗೆ ಹೇಳುವರು. ಆದರೆ ಅವುಗಳೆಲ್ಲಾ ನಿಷ್ಪ್ರಯೋಜಕ ಸುಳ್ಳುಗಳಾಗಿವೆ. ಆದ್ದರಿಂದ ಜನರು ಸಹಾಯಕ್ಕಾಗಿ ಕೂಗುತ್ತಾ ಅತ್ತಿಂದಿತ್ತ ತಿರುಗಾಡುವ ಕುರಿಗಳಂತಿದ್ದಾರೆ. ಅವುಗಳನ್ನು ನಡಿಸಲು ಕುರುಬರೇ ಇಲ್ಲ.
ಕೊಲಾಯನ ಮಗನಾದ ಅಹಾಬ ಮತ್ತು ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಸರ್ವಶಕ್ತನಾದ ಯೆಹೋವನು ಹೀಗೆಂದನು: “ಇವರಿಬ್ಬರು ನಿಮಗೆ ಸುಳ್ಳುಪ್ರವಾದನೆ ಮಾಡಿದ್ದಾರೆ. ಅವರ ಸಂದೇಶವು ನನ್ನಿಂದ ಬಂದದ್ದು ಎಂದು ಅವರು ಹೇಳಿದ್ದಾರೆ. ಆದರೆ ಅವರು ಹೇಳಿದ್ದು ಸುಳ್ಳು. ನಾನು ಆ ಇಬ್ಬರು ಪ್ರವಾದಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುವೆನು. ನೆಬೂಕದ್ನೆಚ್ಚರನು ಬಾಬಿಲೋನಿನಲ್ಲಿ ಬಂಧಿಯಾಗಿರುವ ನಿಮ್ಮೆಲ್ಲರ ಸಮ್ಮುಖದಲ್ಲಿ ಆ ಇಬ್ಬರು ಪ್ರವಾದಿಗಳನ್ನು ಕೊಲ್ಲುವನು.
ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’”
ಆಮೇಲೆ ಹನನ್ಯನು ಗಟ್ಟಿಯಾಗಿ ಎಲ್ಲರೂ ಕೇಳುವಂತೆ ಮಾತನಾಡಿದನು. “ಯೆಹೋವನು ಹೇಳುತ್ತಾನೆ: ‘ಇದೇ ರೀತಿಯಲ್ಲಿ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಹೇರಿದ ನೊಗವನ್ನು ನಾನು ಮುರಿದುಹಾಕುವೆನು. ಅವನು ಆ ನೊಗವನ್ನು ಜಗತ್ತಿನ ಸಮಸ್ತ ಜನಾಂಗಗಳ ಮೇಲೆ ಹೇರಿದ್ದಾನೆ. ಆದರೆ ನಾನು ಆ ನೊಗವನ್ನು ಎರಡು ವರ್ಷದೊಳಗಾಗಿ ಮುರಿದುಹಾಕುವೆನು.’” ಹನನ್ಯನು ಹಾಗೆ ಹೇಳಿದ ಮೇಲೆ ಯೆರೆಮೀಯನು ಪವಿತ್ರಾಲಯವನ್ನು ಬಿಟ್ಟನು.