Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:15 - ಪರಿಶುದ್ದ ಬೈಬಲ್‌

15 ನನ್ನ ಹೆಸರಿನಲ್ಲಿ ಬೋಧನೆ ಮಾಡುತ್ತಿರುವ ಈ ಪ್ರವಾದಿಗಳ ಬಗ್ಗೆ ನಾನು ಹೇಳುವದು ಇಷ್ಟೇ. ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಆ ಪ್ರವಾದಿಗಳು ‘ಶತ್ರುಗಳು ಖಡ್ಗಧಾರಿಗಳಾಗಿ ಎಂದಿಗೂ ಈ ದೇಶದ ಮೇಲೆ ಧಾಳಿ ಮಾಡುವದಿಲ್ಲ. ಈ ದೇಶದಲ್ಲಿ ಎಂದೂ ಕ್ಷಾಮ ಕಾಣಿಸಿಕೊಳ್ಳುವದಿಲ್ಲ’ ಎಂದು ಹೇಳಿದ್ದಾರೆ. ಆದರೆ ಆ ಪ್ರವಾದಿಗಳು ಹಸಿವಿನ ತಾಪದಿಂದ ಸಾಯುತ್ತಾರೆ ಮತ್ತು ಶತ್ರುವಿನ ಖಡ್ಗ ಅವರನ್ನು ಕೊಲ್ಲುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದುದರಿಂದ ನನ್ನ ಅಪ್ಪಣೆಯಿಲ್ಲದೆ, ನನ್ನ ಹೆಸರೆತ್ತಿ, ಪ್ರವಾದನೆ ಮಾಡುತ್ತಾ ಖಡ್ಗವಾಗಲಿ, ಕ್ಷಾಮವಾಗಲಿ ಈ ನಾಡಿಗೆ ಬರುವುದಿಲ್ಲ ಎಂದು ಬೋಧಿಸುತ್ತಿದ್ದಾರಲ್ಲವೆ? ಆ ಪ್ರವಾದಿಗಳ ವಿಷಯದಲ್ಲಿ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ - ಖಡ್ಗದಿಂದಲೆ, ಕ್ಷಾಮದಿಂದಲೆ ಆ ಪ್ರವಾದಿಗಳು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು - ಖಡ್ಗದಿಂದಲೂ ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು ಎಂದು ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದ್ದರಿಂದ ಯೆಹೋವ ದೇವರು ತಾನು ಕಳುಹಿಸದೆ, ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು, ‘ಈ ದೇಶದಲ್ಲಿ ಖಡ್ಗವೂ ಬರವೂ ಇರುವುದಿಲ್ಲ,’ ಎಂದು ಹೇಳುವಂಥ ಪ್ರವಾದಿಗಳನ್ನು ಕುರಿತು, ಖಡ್ಗದಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:15
26 ತಿಳಿವುಗಳ ಹೋಲಿಕೆ  

ಹೀಗೆ, ಸಲಹೆ ಕೇಳಲು ಬಂದ ಮನುಷ್ಯನೂ ಅವನಿಗೆ ಉತ್ತರಕೊಟ್ಟ ಪ್ರವಾದಿಯೂ ಒಂದೇ ಶಿಕ್ಷೆಯನ್ನು ಹೊಂದುವರು.


ಆದರೆ ಆ ಮೃಗವನ್ನೂ ಸುಳ್ಳುಪ್ರವಾದಿಯನ್ನೂ ಸೆರೆಹಿಡಿಯಲಾಯಿತು. ಈ ಸುಳ್ಳುಪ್ರವಾದಿಯೇ ಮೃಗಕ್ಕಾಗಿ ಅದ್ಭುತಗಳನ್ನು ಮಾಡಿದವನು. ಈ ಸುಳ್ಳುಪ್ರವಾದಿಯು ಮೃಗದ ಗುರುತು ಹಾಕಿಸಿಕೊಂಡಿರುವ ಮತ್ತು ಅದರ ವಿಗ್ರಹವನ್ನು ಆರಾಧಿಸಿದ ಜನರನ್ನು ಮರುಳು ಮಾಡಲು ಈ ಅದ್ಭುತಗಳನ್ನು ಬಳಸಿದ್ದನು. ಈ ಸುಳ್ಳುಪ್ರವಾದಿಯನ್ನೂ ಮೃಗವನ್ನೂ, ಬೆಂಕಿ ಮತ್ತು ಗಂಧಕಗಳಿಂದ ಉರಿಯುವ ಕೆರೆಯಲ್ಲಿ ಜೀವಂತವಾಗಿ ಎಸೆಯಲಾಯಿತು.


ಆದರೆ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಹೆಂಡತಿಯು ಪಟ್ಟಣದೊಳಗೆ ವೇಶ್ಯೆಯಾಗುವಳು. ನಿನ್ನ ಗಂಡು, ಹೆಣ್ಣುಮಕ್ಕಳು ಕತ್ತಿಯಿಂದ ಸಾಯುವರು. ಅನ್ಯರು ನಿನ್ನ ದೇಶವನ್ನು ಕಿತ್ತುಕೊಂಡು ತಮ್ಮೊಳಗೆ ಹಂಚಿಕೊಳ್ಳುವರು. ಮತ್ತು ನೀನು ಪರದೇಶದಲ್ಲಿ ಸಾಯುವೆ. ಇಸ್ರೇಲಿನ ಜನರು ಖಂಡಿತವಾಗಿಯೂ ಸೆರೆಹಿಡಿಯಲ್ಪಟ್ಟು ತಮ್ಮ ದೇಶದಿಂದ ಒಯ್ಯಲ್ಪಡುವರು.’”


ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’”


ಅವರು ತಮ್ಮ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ಸ್ವಲ್ಪವೂ ನಾಚಿಕೆಪಡುವುದಿಲ್ಲ. ಅವರಿಗೆ ನಾಚಿಕೆ ಎಂಬುದೇ ತಿಳಿದಿಲ್ಲ. ಆದ್ದರಿಂದ ಉಳಿದೆಲ್ಲರಂತೆ ಅವರಿಗೂ ಶಿಕ್ಷೆ ವಿಧಿಸಲಾಗುವುದು. ನಾನು ಅವರನ್ನು ಶಿಕ್ಷಿಸುವಾಗ ಅವರು ಮುಗ್ಗರಿಸಿ ಬೀಳುವರು.’” ಯೆಹೋವನ ನುಡಿಗಳಿವು.


ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.


ಮೀಕಾಯೆಹು, “ಕೇಡು ಬೇಗನೆ ಬರಲಿದೆ. ಆಗ ನೀನು ಹೋಗಿ ಒಂದು ಚಿಕ್ಕ ಕೊಠಡಿಯಲ್ಲಿ ಅಡಗಿಕೊಳ್ಳುವೆ. ನಾನು ಸತ್ಯವನ್ನೇ ನುಡಿದೆನೆಂದು ಆಗ ನಿನಗೆ ತಿಳಿಯುತ್ತದೆ!” ಎಂದನು.


“ನಾನು ಸುಳ್ಳುಪ್ರವಾದಿಗಳ ವಿರೋಧಿಯಾಗಿದ್ದೇನೆ.” ಇದು ಯೆಹೋವನ ನುಡಿ. “ಈ ಪ್ರವಾದಿಗಳು ನನ್ನ ಪದಗಳನ್ನು ಒಬ್ಬರಿಂದೊಬ್ಬರು ಕದಿಯುತ್ತಿದ್ದಾರೆ.


ನಾನು ಆ ಪ್ರವಾದಿಗಳನ್ನು ಕಳುಹಿಸಿಲ್ಲ. ಅವರು ಸುಳ್ಳು ಪ್ರವಾದನೆಗಳನ್ನು ಮಾಡುತ್ತಿದ್ದಾರೆ ಮತ್ತು ಅದು ನನ್ನ ಸಂದೇಶವೆಂದು ಹೇಳುತ್ತಲಿದ್ದಾರೆ. ನಾನು ಯೆಹೂದದ ಜನರಾದ ನಿಮ್ಮನ್ನು ದೂರ ಕಳುಹಿಸುತ್ತೇನೆ. ನೀವು ಸಾಯುವಿರಿ. ನಿಮಗೆ ಪ್ರವಾದನೆಯನ್ನು ಮಾಡುತ್ತಿರುವ ಆ ಪ್ರವಾದಿಗಳು ಸಹ ಸಾಯುತ್ತಾರೆ’” ಇದು ಯೆಹೋವನ ನುಡಿ.


ನಾನು ನನ್ನ ಪ್ರಿಯತಮರನ್ನು ಕೂಗಿ ಕರೆದೆ. ಆದರೆ ಅವರು ನನಗೆ ಮೋಸ ಮಾಡಿದರು. ನನ್ನ ಯಾಜಕರು ಮತ್ತು ಹಿರಿಯರು ನಗರದಲ್ಲಿ ಸತ್ತುಹೋದರು. ಅವರು ತಮಗಾಗಿ ಆಹಾರವನ್ನು ಹುಡುಕುತ್ತಿದ್ದರು. ಅವರು ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳ ಬಯಸಿದರು.


ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?


ನೀವು ಗೋಡೆಗೆ ಗಾರೆ ಹಾಕಿದಿರಿ. ಆದರೆ ನಾನು ಇಡೀ ಗೋಡೆಯನ್ನೆ ನಾಶಮಾಡುವೆನು. ಅದನ್ನು ನೆಲಸಮ ಮಾಡುವೆನು. ಆ ಗೋಡೆಯು ನಿಮ್ಮ ಮೇಲೆ ಬಿದ್ದು ನಿಮ್ಮನ್ನು ಕೊಲ್ಲುವುದು. ಆಗ ನಾನು ಯೆಹೋವನೆಂದು ಗೊತ್ತಾಗುವುದು.


ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು.


ಕೆಲವು ಸುಳ್ಳುಪ್ರವಾದಿಗಳೆದ್ದು ಯೆಹೋವನ ಜನರಿಗೆ ಸುಳ್ಳನ್ನು ತಿಳಿಸುತ್ತಾರೆ. ಅಂಥವರ ಬಗ್ಗೆ ಯೆಹೋವನು ಹೇಳುವುದೇನೆಂದರೆ, “ಈ ಪ್ರವಾದಿಗಳ ಮಾತುಗಳು ಅವರ ಹೊಟ್ಟೆಗಳನ್ನವಲಂಬಿಸಿವೆ. ಜನರು ಅವರಿಗೆ ಆಹಾರ ಕೊಟ್ಟರೆ ಶಾಂತಿಯನ್ನು ವಾಗ್ದಾನ ಮಾಡುತ್ತಾರೆ. ಜನರು ಅವರಿಗೆ ಆಹಾರ ಕೊಡದಿದ್ದರೆ ಯುದ್ಧವನ್ನು ವಾಗ್ದಾನ ಮಾಡುತ್ತಾರೆ.


“ಒಬ್ಬ ಪ್ರವಾದಿಯು ನಾನು ಹೇಳದ ಸಂಗತಿಯನ್ನು ನಿಮಗೆ ಹೇಳಿದರೂ ಹೇಳಬಹುದು. ದೇವರಿಂದ ಬಂದ ಸಂದೇಶವನ್ನು ನಿಮಗೆ ತಿಳಿಸುತ್ತಿರುವೆನು ಎಂದು ಅವನು ಹೇಳಬಹುದು. ಇಂಥಾ ಸಂದರ್ಭಗಳು ಬಂದಲ್ಲಿ ಆ ಪ್ರವಾದಿಯನ್ನು ಸಾಯಿಸಬೇಕು. ಇಷ್ಟು ಮಾತ್ರವಲ್ಲ ಇತರ ದೇವರುಗಳ ಸಂದೇಶವನ್ನು ಕೊಡುವ ಪ್ರವಾದಿಗಳೂ ಬರಬಹುದು. ಅವರನ್ನೂ ನೀವು ಸಾಯಿಸಬೇಕು.


“ನಾನು ಅವರ ಹಣ್ಣುಗಳನ್ನೂ ಬೆಳೆಗಳನ್ನೂ ಕಿತ್ತುಕೊಂಡು ಅವರಿಗೆ ಸುಗ್ಗಿಯಾಗದಂತೆ ಮಾಡುತ್ತೇನೆ.” ಇದು ಯೆಹೋವನ ನುಡಿ. ದ್ರಾಕ್ಷಿಬಳ್ಳಿಯಲ್ಲಿ ದ್ರಾಕ್ಷಿಗಳಿರುವದಿಲ್ಲ. ಅಂಜೂರದ ಮರದಲ್ಲಿ ಒಂದಾದರೂ ಅಂಜೂರದ ಹಣ್ಣು ಇರುವದಿಲ್ಲ. ಎಲೆಗಳು ಸಹ ಒಣಗಿ ಉದುರುವವು. ನಾನು ಅವರಿಗೆ ಕೊಟ್ಟ ವಸ್ತುಗಳನ್ನು ಕಿತ್ತುಕೊಳ್ಳುವೆನು.


ಯೆಹೋವನು ಹೇಳುವುದೇನೆಂದರೆ, “ಯಾವ ಪ್ರವಾದಿಗಳು ಸುಳ್ಳುದರ್ಶನವನ್ನು ನೋಡಿ ಸುಳ್ಳನ್ನು ಹೇಳಿದ್ದಾರೋ, ಅವರನ್ನು ಶಿಕ್ಷಿಸುವೆನು. ನನ್ನ ಜನರ ಮಧ್ಯೆಯಿಂದ ಅವರನ್ನು ತೆಗೆದುಬಿಡುವೆನು. ಅವರ ಹೆಸರುಗಳು ಇಸ್ರೇಲರ ವಂಶಾವಳಿ ಪಟ್ಟಿಯಲ್ಲಿ ಇರುವುದಿಲ್ಲ. ಅವರು ಇಸ್ರೇಲ್ ದೇಶಕ್ಕೆ ಹಿಂದಿರುಗಿ ಬರುವುದಿಲ್ಲ. ನಾನೇ ಒಡೆಯನಾದ ಯೆಹೋವನೆಂದು ಆಗ ನಿಮಗೆ ಗೊತ್ತಾಗುವುದು.


ಗೋಡೆಗೆ ಗಾರೆ ಬಳಿಯುವವರ ಮೇಲೂ, ಗೋಡೆಯ ಮೇಲೂ ನನ್ನ ಕೋಪವನ್ನು ತೀರಿಸಿಕೊಳ್ಳುವೆನು. ಆಗ ನಾನು, ‘ಈಗ ಗೋಡೆ ಇಲ್ಲ. ಅದಕ್ಕೆ ಗಾರೆ ಹಾಕುವವರೂ ಇಲ್ಲ’ ಎಂದು ಹೇಳುವೆನು.


“‘ಆದರೆ ವೈರಿಯು ಬರುವಂತದ್ದನ್ನು ಆ ಕಾವಲುಗಾರನು ಕಂಡರೂ, ಜನರನ್ನು ಎಚ್ಚರಿಸಲು ತುತ್ತೂರಿಯನ್ನು ಊದದಿದ್ದರೆ ವೈರಿಯು ಅವರನ್ನು ಸೆರೆಹಿಡಿದು ಕೈದಿಗಳನ್ನಾಗಿ ಮಾಡಿ ಕೊಂಡೊಯ್ಯುವನು. ಆ ಮನುಷ್ಯನು ಪಾಪಮಾಡಿದ್ದರಿಂದ ಆ ಶಿಕ್ಷೆಯು ಅವನಿಗೆ ದೊರಕಿತು. ಆದರೆ, ಕಾವಲುಗಾರನು ಕೂಡಾ ಅವನ ಮರಣಕ್ಕೆ ಕಾರಣನಾಗುವನು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು