Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:17 - ಪರಿಶುದ್ದ ಬೈಬಲ್‌

17 “ಯೆರೆಮೀಯನೇ, ಯೆಹೂದದ ಜನರಿಗೆ ಈ ಸಂದೇಶವನ್ನು ಹೇಳು: ‘ನನ್ನ ಕಣ್ಣುಗಳಲ್ಲಿ ಕಣ್ಣೀರು ತುಂಬಿಕೊಂಡಿದೆ. ನಾನು ನಿರಂತರವಾಗಿ ಹಗಲಿರುಳು ಅಳುವೆನು. ನಾನು ನನ್ನ ಕನ್ಯೆಯಾದ ಮಗಳಿಗಾಗಿ ಅಳುವೆನು. ನಾನು ನನ್ನ ಜನರಿಗಾಗಿ ಅಳುವೆನು. ಏಕೆಂದರೆ ಯಾರೋ ಒಬ್ಬರು ಅವರನ್ನು ಹೊಡೆದು ಸದೆಬಡಿದಿದ್ದಾರೆ, ಅವರಿಗೆ ಬಹಳ ಗಾಯಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ಈ ಮಾತನ್ನು ಅವರಿಗೆ ಹೇಳು - ನನ್ನ ಕಣ್ಣೀರು ರಾತ್ರೀಹಗಲು ನಿರಂತರ ಸುರಿಯಲಿ; ಏಕಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟುಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆದ್ದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು. “ ‘ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ. ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ಏಟಿನಿಂದಲೂ, ದೊಡ್ಡ ಪೆಟ್ಟಿನಿಂದಲೂ ಗಾಯಗೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:17
20 ತಿಳಿವುಗಳ ಹೋಲಿಕೆ  

ನನ್ನ ಜನರು ಗಾಯಗೊಂಡಿದ್ದಾರೆ. ಆದ್ದರಿಂದ ನಾನೂ ಗಾಯಗೊಂಡಿದ್ದೇನೆ. ಈಗ ಗಾಯಗೊಂಡ ಜನರ ಬಗ್ಗೆ ಯೋಚಿಸುತ್ತ ನಾನು ದುಃಖದಿಂದ ಮೌನವಾಗಿದ್ದೇನೆ.


ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.


ಯೆಹೂದದ ಜನರಾದ ನೀವು ಯೆಹೋವನ ಮಾತನ್ನು ಕೇಳದಿದ್ದರೆ, ನಾನು ಗುಟ್ಟಾದ ಸ್ಥಳದಲ್ಲಿ ಅಳುವೆನು. ನಿಮ್ಮ ಅಹಂಕಾರವು ನನ್ನನ್ನು ಅಳುವ ಹಾಗೆ ಮಾಡುವುದು. ನಾನು ಬಹಳ ಗಟ್ಟಿಯಾಗಿ ಅಳುವೆನು, ನನ್ನ ಕಣ್ಣುಗಳಿಂದ ಕಣ್ಣೀರು ಹೊರಸೂಸುವುದು. ಏಕೆಂದರೆ ಯೆಹೋವನ ಮಂದೆಯು ಸೆರೆಹಿಡಿಯಲ್ಪಡುವುದು.


ನನ್ನ ತಲೆಯಲ್ಲೆಲ್ಲ ನೀರು ತುಂಬಿಕೊಂಡಿದ್ದು, ನನ್ನ ಕಣ್ಣುಗಳು ನೀರಿನ ಬುಗ್ಗೆಗಳಾಗಿದ್ದರೆ, ನಾಶಮಾಡಲ್ಪಟ್ಟ ನನ್ನ ಜನರಿಗಾಗಿ ಹಗಲಿರುಳು ಗೋಳಾಡುತ್ತಿದ್ದೆ.


ಆದ್ದರಿಂದ ನಾನು ನಿಮ್ಮನ್ನು ಶಿಕ್ಷಿಸಲು ಪ್ರಾರಂಭಿಸಿದೆನು. ನಿಮ್ಮ ಪಾಪಗಳ ದೆಸೆಯಿಂದ ನಿಮ್ಮನ್ನು ನಾಶಮಾಡುವೆನು.


ಜೆರುಸಲೇಮ್ ನಗರದ ಗೋಡೆಯೇ, ಮನಃಪೂರ್ವಕವಾಗಿ ಯೆಹೋವನಲ್ಲಿ ಮೊರೆಯಿಡು. ನಿನ್ನ ಕಣ್ಣೀರು ಹಗಲಿರುಳು ನದಿಯಂತೆ ಹರಿಯಲಿ, ನಿಲ್ಲಿಸಬೇಡ. ನಿನ್ನ ಕಣ್ಣುಗಳಿಗೆ ವಿರಾಮ ಸಿಗುವುದು ಬೇಡ.


ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಟ್ಟಾಗಿದೆ. ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” ಎಂದು ಸಮಾಧಾನ ತಂದುಕೊಂಡೆ.


“ಸನ್ಹೇರೀಬನ ಕುರಿತು ಯೆಹೋವನ ಸಂದೇಶವಿದು: ‘ಅಶ್ಶೂರದ ಅರಸನೇ, ಚೀಯೋನಿನ ಕುಮಾರಿಯು ನಿನ್ನನ್ನು ಪ್ರಾಮುಖ್ಯವಾದವನೆಂದು ಎಣಿಸುವದಿಲ್ಲ. ಆಕೆ ನಿನ್ನನ್ನು ನೋಡಿ ಪರಿಹಾಸ್ಯ ಮಾಡುವಳು. ಜೆರುಸಲೇಮಿನ ಕುಮಾರಿಯು ನಿನ್ನ ಹಿಂದೆ ತಲೆಯಾಡಿಸುತ್ತಾ ನಿನ್ನನ್ನು ಹಾಸ್ಯ ಮಾಡುವಳು.


ನನ್ನನ್ನು ಶಿಕ್ಷಿಸುವುದನ್ನು ನಿಲ್ಲಿಸು. ಇಲ್ಲವಾದರೆ, ನಾನು ಸತ್ತೇ ಹೋಗುವೆನು.


ಇಸ್ರೇಲ್ ಕುಮಾರಿಯು ಬಿದ್ದಳು. ಇನ್ನೆಂದಿಗೂ ಆಕೆ ಏಳುವದಿಲ್ಲ. ಆಕೆ ಒಬ್ಬಂಟಿಗಳಾಗಿ ಧೂಳಿನ ಮೇಲೆ ಬಿದ್ದಿದ್ದಾಳೆ. ಆಕೆಯನ್ನು ಎಬ್ಬಿಸಲು ಯಾರೂ ಇಲ್ಲ.


ಜನರು ನಿನ್ನ ಉಪದೇಶಗಳಿಗೆ ವಿಧೇಯರಾಗದಿರುವುದರಿಂದ ನನ್ನ ಕಣ್ಣೀರು ಗೋಳಾಟದಿಂದ ನದಿಯಾಗಿ ಹರಿಯುತ್ತಿದೆ.


ದೇವರೇ, ನಾನು ದುಃಖಿತನಾಗಿದ್ದೇನೆ, ಭಯಭೀತನಾಗಿದ್ದೇನೆ.


ಸನ್ಹೇರೀಬನನ್ನು ಕುರಿತು ಯೆಹೋವನು ಹೇಳುವುದೇನೆಂದರೆ: “ಚೀಯೋನ್ ಕುವರಿಯು ನಿನ್ನನ್ನು ತಿರಸ್ಕರಿಸುತ್ತಾಳೆ; ನಿನ್ನನ್ನು ಪರಿಹಾಸ್ಯ ಮಾಡುತ್ತಾಳೆ. ಜೆರುಸಲೇಮಿನ ಕುವರಿಯು ನಿನ್ನ ಹಿಂದಿನಿಂದ ತಲೆಯಾಡಿಸುತ್ತಾಳೆ.


‘ಆ ಹೆಂಗಸರು, ಬೇಗನೆ ಬಂದು ನಮಗಾಗಿ ಗೋಳಾಡಲಿ. ಆಗ ನಮ್ಮ ಕಣ್ಣುಗಳು ಕಣ್ಣೀರಿನಿಂದ ತುಂಬುವವು; ನಮ್ಮ ಕಣ್ಣುಗಳಿಂದ ನೀರಿನ ಪ್ರವಾಹಗಳು ಹರಿಯುವವು’ ಎನ್ನುವರು.


ಯೆಹೋವನು ಹೇಳುವದನ್ನು ಆಲಿಸಿರಿ: “ಬೇರೆ ಜನಾಂಗದ ಜನರಿಗೆ ಈ ಪ್ರಶ್ನೆಯನ್ನು ಕೇಳಿರಿ, ‘ಇಸ್ರೇಲ್ ಮಾಡಿದಂಥ ದುಷ್ಕೃತ್ಯಗಳನ್ನು ಬೇರೆ ಯಾರಾದರೂ ಮಾಡಿದ್ದನ್ನು ನೀವು ಎಂದಾದರೂ ಕೇಳಿದ್ದೀರಾ?’ ಇಸ್ರೇಲ್ ದೇಶವು ದೇವರ ವಧುವಿನಂತಿದೆ.


ಕಂಬನಿ ಸುರಿದು ನನ್ನ ಕಣ್ಣುಗಳು ಇಂಗಿಹೋಗಿವೆ. ನನ್ನ ಕರುಳು ತಳಮಳಗೊಂಡಿದೆ. ನನ್ನ ಹೃದಯವನ್ನು ನೆಲಕ್ಕೆ ಚೆಲ್ಲಲಾಗಿದೆ ಎಂದೆನಿಸುತ್ತಿದೆ. ನನ್ನ ಜನರ ವಿನಾಶದಿಂದ ನನಗೆ ಹೀಗಾಗಿದೆ. ಮಕ್ಕಳು ಮತ್ತು ಶಿಶುಗಳು ಮೂರ್ಛೆ ಹೋಗುತ್ತಿದ್ದಾರೆ. ಅವರು ನಗರದ ಕೇಂದ್ರ ಸ್ಥಳಗಳಲ್ಲಿ (ಚೌಕಗಳಲ್ಲಿ) ಮೂರ್ಛೆಹೋಗುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು