Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:18 - ಪರಿಶುದ್ದ ಬೈಬಲ್‌

18 ನಾನು ನಗರಗಳ ಹೊರಗಡೆ ಹೋದರೆ ಖಡ್ಗಗಳಿಗೆ ಆಹುತಿಯಾಗಿ ಸತ್ತವರು ನನ್ನ ಕಣ್ಣಿಗೆ ಬೀಳುತ್ತಾರೆ. ನಾನು ನಗರಗಳಿಗೆ ಹೋದರೆ ಕ್ಷಾಮದಿಂದ ಬಳಲುವ ಜನರು ನನ್ನ ಕಣ್ಣಿಗೆ ಬೀಳುತ್ತಾರೆ. ಅವರಿಗೆ ತಿನ್ನಲು ಅನ್ನವಿಲ್ಲ. ಯಾಜಕರನ್ನು ಮತ್ತು ಪ್ರವಾದಿಗಳನ್ನು ಪರದೇಶಕ್ಕೆ ತೆಗೆದುಕೊಂಡು ಹೋಗಲಾಗಿದೆ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಾನು ಊರಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು; ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನಾನು ಹೊಲಕ್ಕೆ ಹೋದರೆ ಇಗೋ, ಖಡ್ಗದಿಂದ ಸತ್ತವರು ಕಾಣಿಸುತ್ತಾರೆ. ಪಟ್ಟಣದಲ್ಲಿ ಪ್ರವೇಶಿಸಿದರೆ ಇಗೋ, ಕ್ಷಾಮದಿಂದ ರೋಗದಲ್ಲಿ ಬಿದ್ದವರು ಕಾಣಿಸಿಕೊಳ್ಳುತ್ತಾರೆ. ಹೌದು, ಪ್ರವಾದಿಯೂ, ಯಾಜಕನೂ ತಮಗೆ ತಿಳಿಯದ ದೇಶಕ್ಕೆ ಸಂಚಾರ ಮಾಡುವರು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:18
19 ತಿಳಿವುಗಳ ಹೋಲಿಕೆ  

ಖಡ್ಗಧಾರಿಯಾದ ವೈರಿಯು ಪಟ್ಟಣದ ಹೊರಗಿದ್ದಾನೆ. ರೋಗ ಮತ್ತು ಹಸಿವೆ ಪಟ್ಟಣದೊಳಗಿವೆ. ಒಬ್ಬನು ಹೊರಗೆ ಹೊಲದ ಬಳಿ ಹೋದರೆ ವೈರಿಸೈನಿಕನು ಅವನನ್ನು ಕೊಲ್ಲುವನು. ಪಟ್ಟಣದೊಳಗೇ ಉಳಿದರೆ ರೋಗ ಮತ್ತು ಹಸಿವೆಯು ಅವನನ್ನು ಕೊಲ್ಲುವವು.


“ಯೆಹೋವನೇ, ನನ್ನ ಕಡೆ ನೋಡು, ನಾನು ತೊಂದರೆಯಲ್ಲಿದ್ದೇನೆ. ನನ್ನ ಮನಸ್ಸು ಕ್ಷೋಭೆಗೊಂಡಿದೆ. ನನ್ನ ಮನಸ್ಸಿಗೆ ತಲೆ ಕೆಳಗಾದಂತೆ ಭಾಸವಾಗುತ್ತಿದೆ. ನಾನು ದುರಹಂಕಾರಿಯಾಗಿದ್ದುದರಿಂದ ನನ್ನ ಮನಸ್ಸಿಗೆ ಹಾಗೆ ಭಾಸವಾಗುತ್ತಿದೆ. ಕಾರಣವೇನೆಂದರೆ, ನಾನು ದಂಗೆಕೋರಳಾಗಿದ್ದೆ. ಬೀದಿಗಳಲ್ಲಿ ನನ್ನ ಮಕ್ಕಳು ಖಡ್ಗಕ್ಕೆ ಆಹುತಿಯಾದರು. ಮನೆಯಲ್ಲಿಯೂ ಸಹ ಸಾವಿತ್ತು.


ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.


“ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಲಾಭಕ್ಕಾಗಿ ಆಸೆಪಡುತ್ತಾರೆ. ಪ್ರವಾದಿಗಳು ಮತ್ತು ಯಾಜಕರು ಸಹ ಮೋಸಗಾರರಾಗಿದ್ದಾರೆ.


ಪ್ರವಾದಿಗಳು ಸುಳ್ಳು ಹೇಳುತ್ತಿದ್ದಾರೆ. ಯಾಜಕರು ಅಧಿಕಾರವನ್ನು ತಮ್ಮ ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ನನ್ನ ಜನರು ಇದನ್ನೇ ಮೆಚ್ಚಿಕೊಳ್ಳುತ್ತಿದ್ದಾರೆ. ಆದರೆ ದಂಡನೆಯ ಸಮಯ ಬಂದಾಗ ನೀವು ಏನು ಮಾಡುವಿರಿ?” ಎಂದನು.


“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


ಆ ಸುಳ್ಳುಬೋಧಕರಿಗೆ ಬೇಕಾಗಿರುವುದು ಕೇವಲ ನಿಮ್ಮ ಹಣವಷ್ಟೆ. ಆದ್ದರಿಂದ ಅವರು ನಿಜವಲ್ಲದ ಸಂಗತಿಗಳನ್ನು ನಿಮಗೆ ಹೇಳಿ ನಿಮ್ಮನ್ನು ಬಳಸಿಕೊಳ್ಳುತ್ತಾರೆ. ಆದರೆ ಬಹಳ ಹಿಂದಿನಿಂದಲೇ ಆ ಸುಳ್ಳುಬೋಧಕರ ವಿರುದ್ಧವಾದ ತೀರ್ಪು ಸಿದ್ಧವಾಗಿದೆ. ಅವರನ್ನು ನಾಶಪಡಿಸುವಾತನಿಂದ (ದೇವರಿಂದ) ಅವರು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.


ಜೆರುಸಲೇಮಿನ ನ್ಯಾಯಾಧೀಶರು ಲಂಚ ತೆಗೆದುಕೊಂಡು ಅನ್ಯಾಯವಾದ ತೀರ್ಪುಕೊಡುವರು. ಜನರಿಗೆ ಬೋಧಿಸುವ ಮೊದಲು ಜೆರುಸಲೇಮಿನ ಯಾಜಕರು ಹಣವನ್ನು ವಸೂಲಿ ಮಾಡುವರು. ಜನರು ತಮ್ಮ ಭವಿಷ್ಯದ ಬಗ್ಗೆ ಕೇಳಲು ಪ್ರವಾದಿಗಳಿಗೆ ಮುಂಗಡವಾಗಿ ಹಣ ಕೊಡುವರು. ಆಮೇಲೆ ಆ ನಾಯಕರು, “ಯೆಹೋವನು ನಮ್ಮಲ್ಲಿ ವಾಸಮಾಡುತ್ತಿದ್ದಾನೆ. ಆದ್ದರಿಂದ ನಮಗೆ ಕೆಟ್ಟದ್ದು ಏನೂ ಸಂಭವಿಸುವದಿಲ್ಲ” ಎಂದು ಹೇಳುವರು.


ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತುಹೋದರು.


ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಆದರೂ ಅವರು ತಮ್ಮ ಸಂದೇಶವನ್ನು ಕೊಡಲು ಆತುರಪಟ್ಟರು. ನಾನು ಅವರೊಂದಿಗೆ ಮಾತನಾಡಲಿಲ್ಲ ಆದರೂ ಅವರು ನನ್ನ ಹೆಸರು ಹೇಳಿ ಉಪದೇಶ ಮಾಡಿದರು.


“‘ಯೆಹೋವನು ಎಲ್ಲಿ?’ ಎಂದು ಯಾಜಕರು ಕೇಳಲಿಲ್ಲ. ಧರ್ಮಶಾಸ್ತ್ರವನ್ನು ಬಲ್ಲವರು ನನ್ನನ್ನು ತಿಳಿಯಬಯಸಲಿಲ್ಲ. ಇಸ್ರೇಲರ ಜನನಾಯಕರು ನನ್ನ ವಿರೋಧಿಗಳಾದರು. ಪ್ರವಾದಿಗಳು ಸುಳ್ಳುದೇವರಾದ ಬಾಳನ ಹೆಸರಿನಿಂದ ಭವಿಷ್ಯವಾಣಿಯನ್ನು ನುಡಿದರು. ಅವರು ನಿಷ್ಪ್ರಯೋಜಕವಾದ ವಿಗ್ರಹಗಳನ್ನು ಪೂಜಿಸಿದರು.”


ಆದರೆ ಈಗ ಆ ನಾಯಕರುಗಳು ಮತ್ತರಾಗಿದ್ದಾರೆ. ಯಾಜಕರೂ ಪ್ರವಾದಿಗಳೂ ಮದ್ಯಸೇವನೆಯಿಂದ ಮತ್ತರಾಗಿದ್ದಾರೆ. ಅವರು ಎಡವಿಬೀಳುತ್ತಾರೆ. ಪ್ರವಾದಿಗಳು ದರ್ಶನಗಳನ್ನು ಕಾಣುವಾಗ ಅಮಲೇರಿದವರಾಗಿರುತ್ತಾರೆ; ನ್ಯಾಯಾಧೀಶರು ತೀರ್ಪುಕೊಡುವಾಗ ಅಮಲೇರಿದವರಾಗಿರುತ್ತಾರೆ.


ಯೆಹೋವನು ನಿಮ್ಮನ್ನು ಲೋಕದ ಎಲ್ಲಾ ದೇಶಗಳಿಗೆ ಚದರಿಸಿಬಿಡುವನು. ಆತನು ಪ್ರಪಂಚದ ಒಂದು ಕಡೆಯಿಂದ ಇನ್ನೊಂದು ಕಡೆಯ ತನಕ ನಿಮ್ಮನ್ನು ಚದರಿಸುವನು. ಅಲ್ಲಿ ನೀವು ಕಲ್ಲುಮರಗಳಿಂದ ಮಾಡಿದ ದೇವರುಗಳನ್ನು ಪೂಜಿಸುವಿರಿ. ಆ ಸುಳ್ಳುದೇವರುಗಳನ್ನು ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಎಂದೂ ಪೂಜಿಸಿರಲಿಲ್ಲ.


ಹಿಂದಿನ ಕಾಲದಲ್ಲಿ ಈ ನಗರವು ಅತ್ಯಂತ ಜನಸಂದಣಿಯಿಂದ ಕೂಡಿತ್ತು. ಈ ನಗರದಲ್ಲಿ ಗದ್ದಲವೂ ಜನರ ಸಂತಸದ ಧ್ವನಿಯೂ ತುಂಬಿತ್ತು. ಆದರೆ ಈಗ ಎಲ್ಲವೂ ಬದಲಾಯಿತು. ನಿಮ್ಮ ಜನರು ಸತ್ತದ್ದು ಖಡ್ಗದಿಂದಲ್ಲ. ಯುದ್ಧದಲ್ಲಿ ಸಾಯದೆ ಬೇರೆ ರೀತಿಯಲ್ಲಿ ಸತ್ತರು.


ಊರ ಹೊರಗೆ ಹೋಗಬೇಡಿರಿ. ರಸ್ತೆಗಳ ಮೇಲೆ ಹೋಗಬೇಡಿರಿ. ಏಕೆಂದರೆ ಶತ್ರುವಿನ ಕೈಯಲ್ಲಿ ಖಡ್ಗವಿದೆ. ಎಲ್ಲಾ ಕಡೆಗೂ ಅಪಾಯವಿದೆ.


“ನೀವು ನನ್ನ ಬಳಿಗೆ ಬರುವಂತೆ ಅನೇಕ ಕಾರ್ಯಗಳನ್ನು ಮಾಡಿದೆನು. ನಿಮಗೆ ನಾನು ಊಟಕ್ಕೆ ಕೊಡಲಿಲ್ಲ. ನಿಮ್ಮ ಯಾವ ಪಟ್ಟಣದಲ್ಲಿಯೂ ಆಹಾರವಿಲ್ಲ. ಆದರೂ ನೀವು ನನ್ನ ಬಳಿಗೆ ಹಿಂದಿರುಗಿ ಬರಲಿಲ್ಲ.” ಇದು ಯೆಹೋವನ ನುಡಿ.


ರಾತ್ರಿಯ ಒಂದೊಂದು ಜಾವದ ಆರಂಭದಲ್ಲಿ ಎದ್ದೆದ್ದು ಗೋಳಾಡಿರಿ. ನಿಮ್ಮ ಹೃದಯವು ನೀರಿನಂತೆ ಹರಿಯಲಿ. ನಿಮ್ಮ ಹೃದಯಸಾರವನ್ನು ಯೆಹೋವನ ಸಮ್ಮುಖದಲ್ಲಿ ಹೊಯ್ದುಬಿಡಿರಿ. ನಿಮ್ಮ ಕೈಗಳನ್ನು ಮೇಲೆತ್ತಿ ಯೆಹೋವನಿಗೆ ಪ್ರಾರ್ಥಿಸಿರಿ. ನಿಮ್ಮ ಮಕ್ಕಳು ಬದುಕಲಿ ಎಂದು ಆತನನ್ನು ಕೇಳಿಕೊಳ್ಳಿರಿ. ಹಸಿವೆಯಿಂದ ಮೂರ್ಛೆಹೋಗುತ್ತಿದ್ದ ನಿಮ್ಮ ಮಕ್ಕಳ ಪ್ರಾಣ ಉಳಿಯಲಿ ಎಂದು ಆತನನ್ನು ಪ್ರಾರ್ಥಿಸಿರಿ. ಹಸಿವೆಯಿಂದ ಅವರು ನಗರದ ಎಲ್ಲ ಬೀದಿಗಳಲ್ಲಿ ಮೂರ್ಛೆಹೋಗುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು