Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:19 - ಪರಿಶುದ್ದ ಬೈಬಲ್‌

19 ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:19
26 ತಿಳಿವುಗಳ ಹೋಲಿಕೆ  

ನೀನು ನಮ್ಮನ್ನು ಸಂಪೂರ್ಣವಾಗಿ ತಿರಸ್ಕರಿಸಿರುವಿಯಾ? ನೀನು ನಮ್ಮ ಮೇಲೆ ಬಹಳವಾಗಿ ಕೋಪಗೊಂಡಿರುವೆ.


ನಾವು ಶಾಂತಿಯನ್ನು ನಿರೀಕ್ಷಿಸಿದ್ದೆವು. ಆದರೆ ಒಳ್ಳೆಯದೇನೂ ಆಗಲಿಲ್ಲ. ಅವನು ನಮ್ಮನ್ನು ಗುಣಪಡಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು. ಆದರೆ ಕೇವಲ ವಿನಾಶ ಮಾತ್ರ ಬಂದಿತು.


“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ನನ್ನ ಜನರನ್ನು ‘ತಿರಸ್ಕರಿಸಲಾದ ಬೆಳ್ಳಿ’ ಎಂದು ಕರೆಯಲಾಗುವದು. ಏಕೆಂದರೆ ಯೆಹೋವನು ಅವರನ್ನು ಸ್ವಿಕರಿಸಲಿಲ್ಲ.”


ನಿಮ್ಮನ್ನು ನೋಡಿಕೊಳ್ಳಲು ಯಾರೂ ಇಲ್ಲ. ಆದ್ದರಿಂದ ನಿಮ್ಮ ಗಾಯಗಳು ವಾಸಿಯಾಗುವದಿಲ್ಲ.


ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.


ನನ್ನ ‘ಸ್ವಾಸ್ತ್ಯವಾದ ಜನರು’ ನನಗೊಂದು ಅರಣ್ಯದ ಸಿಂಹದಂತಾಗಿದ್ದಾರೆ. ಅವರು ನನ್ನನ್ನು ಕಂಡು ಗರ್ಜಿಸುತ್ತಾರೆ. ಆದ್ದರಿಂದಲೇ ನಾನು ಅವರಿಗೆ ವಿಮುಖನಾದೆನು.


ದೇವರು ಇದನ್ನು ತಿಳಿದು ಬಹು ಕೋಪಗೊಂಡನು, ಆತನು ಇಸ್ರೇಲರನ್ನು ಸಂಪೂರ್ಣವಾಗಿ ತಿರಸ್ಕರಿಸಿದನು!


ಆದರೆ ನಾನು ಒಳ್ಳೆಯವುಗಳನ್ನು ನಿರೀಕ್ಷಿಸುತ್ತಿದ್ದಾಗ ನನಗೆ ಕೇಡುಗಳೇ ಆದವು. ನಾನು ಬೆಳಕಿಗಾಗಿ ಎದುರುನೋಡುತ್ತಿದ್ದಾಗ ನನಗೆ ಕತ್ತಲಾಯಿತು.


ಸಹಾಯಕ್ಕಾಗಿ ಎದುರುನೋಡುತ್ತಾ ನಮ್ಮ ಕಣ್ಣುಗಳು ಮೊಬ್ಬಾದವು. ಆದರೆ ಯಾವ ಸಹಾಯವೂ ಬರಲಿಲ್ಲ. ಯಾವ ಜನಾಂಗವಾದರೂ ಬಂದು ನಮ್ಮನ್ನು ರಕ್ಷಿಸುವುದೇನೋ ಎಂದು ಕೋವರದಲ್ಲಿ ನೋಡುತ್ತಲೇ ಇದ್ದೆವು, ಆದರೆ ಯಾವ ಜನಾಂಗವೂ ಬರಲಿಲ್ಲ.


ನನ್ನ ಪ್ರಿಯ ಜೆರುಸಲೇಮೇ, ನಾನು ನಿನ್ನ ಬಗ್ಗೆ ಏನು ಹೇಳಲಿ? ನಾನು ನಿನ್ನನ್ನು ಯಾವುದಕ್ಕೆ ಹೋಲಿಸಲಿ? ನೀನು ಎಂಥವಳೆಂದು ಹೇಳಲಿ? ನನ್ನ ಚೀಯೋನೇ, ನಾನು ನಿನ್ನನ್ನು ಹೇಗೆ ಸಂತೈಸಲಿ. ನಿನ್ನ ವಿನಾಶವು ಸಾಗರದಷ್ಟು ಅಪಾರ. ಯಾರೂ ನಿನ್ನನ್ನು ಸ್ವಸ್ಥ ಮಾಡಲಾರರು ಎಂದೆನಿಸುತ್ತದೆ.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಗಿಲ್ಯಾದಿನಲ್ಲಿ ಖಂಡಿತವಾಗಿಯೂ ಔಷಧವಿದೆ. ಖಂಡಿತವಾಗಿಯೂ ಅಲ್ಲಿ ಒಬ್ಬ ವೈದ್ಯನಿದ್ದಾನೆ. ಆದರೆ ನನ್ನ ಜನರ ಗಾಯಗಳು ಗುಣವಾಗಲಿಲ್ಲವೇಕೆ?


“ಯೆರೆಮೀಯನೇ, ನಿನ್ನ ಕೂದಲನ್ನು ಕತ್ತರಿಸಿ ಎಸೆದುಬಿಡು. ಬೋಳುಶಿಖರಕ್ಕೆ ಹೋಗಿ ರೋಧಿಸು. ಏಕೆಂದರೆ ಯೆಹೋವನು ಈ ತಲೆಮಾರಿನ ಜನರನ್ನು ತಿರಸ್ಕರಿಸಿದ್ದಾನೆ; ಆತನು ಇವರಿಗೆ ವಿಮುಖನಾಗಿದ್ದಾನೆ. ಆತನು ಕೋಪದಿಂದ ಅವರನ್ನು ದಂಡಿಸುವನು.


ಆದರೆ ನೀನು ಅಭಿಷೇಕಿಸಿದ ರಾಜನ ಮೇಲೆ ನೀನು ಕೋಪಗೊಂಡಿದ್ದರಿಂದಲೇ ಅವನನ್ನು ಒಬ್ಬಂಟಿಗನನ್ನಾಗಿ ಬಿಟ್ಟುಬಿಟ್ಟೆ.


ಆದರೆ ಆತನ ಜನರು ಪ್ರವಾದಿಗಳನ್ನು ಹಾಸ್ಯಮಾಡಿದರು; ಅವರ ಮಾತುಗಳನ್ನು ಕೇಳಲು ನಿರಾಕರಿಸಿದರು; ದೇವರ ಸಂದೇಶವನ್ನು ದ್ವೇಷಿಸಿದರು. ಆಗ ದೇವರ ಕೋಪವು ಅವರ ಮೇಲೆ ಉರಿಯತೊಡಗಿತು. ಅದನ್ನು ನಿಲ್ಲಿಸಲು ಯಾರಿಗೂ ಸಾಧ್ಯವಾಗಲಿಲ್ಲ.


“ನಾನು (ಯೆಹೋವನು) ನನ್ನ ಮನೆಯನ್ನು ತ್ಯಜಿಸಿದ್ದೇನೆ. ನಾನು ನನ್ನ ಆಸ್ತಿಯನ್ನು ಬಿಟ್ಟುಬಿಟ್ಟಿದ್ದೇನೆ. ನಾನು ನನ್ನ ಪ್ರಿಯತಮೆಯನ್ನು (ಯೆಹೂದ) ಅವಳ ಶತ್ರುಗಳಿಗೆ ಕೊಟ್ಟಿದ್ದೇನೆ.


ಮಾರೊತ್‌ನಲ್ಲಿ ವಾಸಿಸುವ ಜನರು ಬಲಹೀನರಾಗಿದ್ದಾರೆ. ಅವರು ಶುಭವಾರ್ತೆಗಾಗಿ ಕಾಯುತ್ತಿದ್ದಾರೆ. ಯಾಕೆಂದರೆ ಜೆರುಸಲೇಮಿನ ನಗರ ದ್ವಾರದ ಬಳಿಗೆ ಯೆಹೋವನಿಂದ ಆಪತ್ತು ಬಂದಿದೆ.


ಪದೇಪದೇ ಎಚ್ಚರಿಸಿದರೂ ಮೊಂಡನಾಗಿರುವವನು ಪಕ್ಕನೆ ಏಳದ ಹಾಗೆ ನಾಶವಾಗುವನು.


ಯೆಹೋವನು ಹೀಗೆನ್ನುತ್ತಾನೆ: “ಇಸ್ರೇಲಿನ ಮತ್ತು ಯೆಹೂದದ ಜನರಾದ ನಿಮಗೆ ಗುಣವಾಗದ ಗಾಯವಾಗಿದೆ. ನಿಮಗೆ ವಾಸಿಯಾಗದ ನೋವಾಗಿದೆ.


ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ಮತ್ತು ಯೆಹೂದವನ್ನು ವಿಧವೆಯಾಗಿ ಮಾಡಿಲ್ಲ. ಆತನು ಅವರ ಕೈಬಿಟ್ಟಿಲ್ಲ. ಅವರು ಇಸ್ರೇಲಿನ ಪರಿಶುದ್ಧನನ್ನು ತೊರೆದು ಅಪರಾಧ ಮಾಡಿದರು. ಅವರು ಆತನನ್ನು ತ್ಯಜಿಸಿದರು. ಆದರೆ ಆತನು ಅವರನ್ನು ತ್ಯಜಿಸಲಿಲ್ಲ.


ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು