ಯೆರೆಮೀಯ 14:21 - ಪರಿಶುದ್ದ ಬೈಬಲ್21 ಯೆಹೋವನೇ, ನಿನ್ನ ಹೆಸರಿನ ಒಳ್ಳೆಯತನ ಉಳಿಸಿಕೊಳ್ಳುವದಕ್ಕಾದರೂ ನಮ್ಮನ್ನು ದೂರ ತಳ್ಳಬೇಡ. ನಿನ್ನ ಮಹಿಮೆಯ ಸಿಂಹಾಸನದ ಗೌರವವನ್ನು ಕುಂದಿಸಬೇಡ. ನೀನು ನಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿಕೊ. ಆ ಒಡಂಬಡಿಕೆಯನ್ನು ಮುರಿಯಬೇಡ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿಮ್ಮ ನಾಮವನ್ನು ಮುಂದಿಟ್ಟು, ನಮಗೆ ಅವಮಾನ ಮಾಡಬೇಡಿ ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ ನಮ್ಮೊಡನೆ ಮಾಡಿದ ಒಡಂಬಡಿಕೆಯನ್ನು ನೆನೆಯಿರಿ. ಅದನ್ನು ಭಂಗಪಡಿಸಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ, ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನಿಮ್ಮ ನಾಮದ ಮೇಲೆ ದೃಷ್ಟಿಯಿಡಿ, ನಿಮ್ಮ ಮಹಿಮೆಯ ಸಿಂಹಾಸನವನ್ನು ಅಸಡ್ಡೆ ಮಾಡಬೇಡಿ, ಅವಮಾನಪಡಿಸಬೇಡಿ. ನೀವು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರಿ. ಅಧ್ಯಾಯವನ್ನು ನೋಡಿ |
“ಯೆಹೋವನೇ, ನೀನು ಒಳ್ಳೆಯವನು, ಒಳ್ಳೆಯತನ ನಿನ್ನ ಪಾಲಾಗಿದೆ. ಆದರೆ ಈಗ ನಮ್ಮದು ನಾಚಿಕೆಪಡುವ ಸ್ಥಿತಿಯಾಗಿದೆ. ಯೆಹೂದ ಮತ್ತು ಜೆರುಸಲೇಮಿನ ಜನರು ನಾಚಿಕೆಪಡುವಂತಾಗಿದೆ. ಹತ್ತಿರದಲ್ಲಿದ್ದವರು ಹಾಗೂ ದೂರದಲ್ಲಿದ್ದವರು, ಒಟ್ಟಿನಲ್ಲಿ ಇಸ್ರೇಲಿನ ಎಲ್ಲ ಜನರು ನಾಚಿಕೆಪಡುವಂತಾಗಿದೆ. ಯೆಹೋವನೇ, ನೀನು ಆ ಜನರನ್ನು ಎಲ್ಲಾ ದೇಶಗಳಲ್ಲಿ ಚದರಿಸಿಬಿಟ್ಟಿರುವೆ. ಆ ಎಲ್ಲಾ ದೇಶಗಳಲ್ಲಿರುವ ಇಸ್ರೇಲರು ನಾಚಿಕೆಪಡಬೇಕಾಗಿದೆ. ಯೆಹೋವನೇ, ನಿನ್ನ ವಿರುದ್ಧ ಮಾಡಿದ ಎಲ್ಲಾ ಹೀನಕೃತ್ಯಗಳಿಗಾಗಿ ಅವರು ನಾಚಿಕೆಪಡಬೇಕಾಗಿದೆ.
ಆಲಯದೊಳಗಿಂದ ಬಂದ ಸ್ವರವು ನನಗೆ ಹೇಳಿದ್ದೇನೆಂದರೆ, “ನರಪುತ್ರನೇ, ಇದು ನನ್ನ ಸಿಂಹಾಸನವೂ ಪಾದಪೀಠವೂ ಇರುವ ಸ್ಥಳ. ನಾನು ಇಲ್ಲಿ ನನ್ನ ಜನರಾದ ಇಸ್ರೇಲರ ಮಧ್ಯದಲ್ಲಿ ನಿರಂತರವೂ ವಾಸಿಸುವೆನು. ಇಸ್ರೇಲ್ ಜನಾಂಗವು ಇನ್ನು ಮುಂದೆ ನನ್ನ ಪವಿತ್ರವಾದ ಹೆಸರನ್ನು ಹಾಳುಮಾಡುವದಿಲ್ಲ. ರಾಜರೂ ಅವರ ಜನರೂ ಲೈಂಗಿಕ ಪಾಪಗಳನ್ನು ಮಾಡಿ ನನ್ನನ್ನು ಅವಮಾನಪಡಿಸರು. ಅವರ ರಾಜರುಗಳ ಮೃತಶರೀರವನ್ನು ಇಲ್ಲಿ ಸಮಾಧಿ ಮಾಡುವದಿಲ್ಲ.
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.
ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.
ನಿನ್ನ ಸೇವೆಮಾಡಿದ ಅಬ್ರಹಾಮನನ್ನು, ಇಸಾಕನನ್ನು, ಯಾಕೋಬನನ್ನು ಜ್ಞಾಪಿಸಿಕೊ. ನೀನು ನಿನ್ನ ಹೆಸರನ್ನು ಉಪಯೋಗಿಸಿ ಆ ಜನರಿಗೆ ವಾಗ್ದಾನವನ್ನು ಮಾಡಿದೆ. ‘ನಾನು ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಷ್ಟು ಮಾಡುವೆನು. ನಾನು ವಾಗ್ದಾನ ಮಾಡಿದಂತೆ ಈ ದೇಶವನ್ನೆಲ್ಲಾ ನಿನ್ನ ಸಂತತಿಗಳವರಿಗೆ ಕೊಡುವೆನು. ಈ ದೇಶ ಎಂದೆಂದಿಗೂ ಅವರದಾಗಿರುವುದು’ ಎಂದು ನೀನು ನಿನ್ನ ಹೆಸರಿನಲ್ಲಿ ವಾಗ್ದಾನ ಮಾಡಿದೆಯಲ್ಲಾ” ಅಂದನು.