Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:8 - ಪರಿಶುದ್ದ ಬೈಬಲ್‌

8 ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟಕಾಲದಲ್ಲಿ ಇಸ್ರೇಲನ್ನು ನೀನು ಕಾಪಾಡುವೆ. ಆದರೆ ಈಗ ನೀನು ಈ ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸರ್ವೇಶ್ವರಾ, ಇಸ್ರಯೇಲರಿಗೆ ನೀವೇ ನಿರೀಕ್ಷೆ ಇಕ್ಕಟ್ಟಿನಲ್ಲಿ ಅವರಿಗೆ ನೀವೇ ರಕ್ಷೆ. ನಾಡಿನಲ್ಲಿ ಅನ್ಯದೇಶೀಯನಂತಿರುವಿರಿ, ಏಕೆ? ರಾತ್ರಿ ಕಳೆಯಲು ಗುಡಾರಹಾಕಿದ ಪ್ರಯಾಣಿಕನಂತಿರುವಿರಿ, ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇಸ್ರಾಯೇಲ್ಯರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ದೇಶದಲ್ಲಿ ಪರದೇಶಿಯಂತೆಯೂ ಇಳಿದುಕೊಳ್ಳುವದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೆಯೂ ಇದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಓ ಇಸ್ರಾಯೇಲಿನ ನಿರೀಕ್ಷೆಯೇ, ಇಕ್ಕಟ್ಟಿನ ಕಾಲದಲ್ಲಿ ಅವನನ್ನು ರಕ್ಷಿಸುವವರೇ, ನೀನು ಏಕೆ ದೇಶದಲ್ಲಿ ಅನ್ಯನ ಹಾಗೆಯೂ, ರಾತ್ರಿ ಕಳೆಯುವುದಕ್ಕೆ ಇಳಿದುಕೊಳ್ಳುವ ಪ್ರಯಾಣಸ್ಥನ ಹಾಗೆಯೂ ಇರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:8
25 ತಿಳಿವುಗಳ ಹೋಲಿಕೆ  

ಯೆಹೋವನೇ, ನೀನು ಇಸ್ರೇಲಿನ ಆಶಾಕಿರಣ, ಯೆಹೋವನೇ, ನೀನು ಜೀವಜಲದ ಬುಗ್ಗೆಯಂತಿರುವೆ, ಯಾರಾದರೂ ಯೆಹೋವನ ಅನುಸರಣೆಯನ್ನು ತ್ಯಜಿಸಿದರೆ ಅವರ ಜೀವನ ಬಹಳ ಮೊಟಕಾಗುತ್ತದೆ.


ನನ್ನ ಜನರನ್ನು ಕಂಡವರೆಲ್ಲ ಅವರನ್ನು ನೋಯಿಸಿದ್ದಾರೆ. ಆ ಶತ್ರುಗಳು, ‘ನಾವು ಮಾಡಿದ್ದು ತಪ್ಪಲ್ಲ. ಅವರು ಯೆಹೋವನ ವಿರುದ್ಧ ಪಾಪ ಮಾಡಿದ್ದಾರೆ. ಯೆಹೋವನು ಅವರ ನಿಜವಾದ ನಿವಾಸವಾಗಿದ್ದನು. ಯೆಹೋವನು ಅವರ ಪೂರ್ವಿಕರು ನಂಬಿದ್ದ ದೇವರಾಗಿದ್ದನು’ ಎಂದರು.


ಯಾಕೆಂದರೆ ಯೆಹೋವನಾದ ನಾನೇ ನಿನ್ನ ದೇವರು. ಇಸ್ರೇಲಿನ ಪರಿಶುದ್ಧನಾದ ನಾನೇ ನಿನ್ನ ರಕ್ಷಕನು. ಈಜಿಪ್ಟನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನ್ನನ್ನು ನನ್ನವನನ್ನಾಗಿ ಮಾಡಿಕೊಳ್ಳಲು ನಿನಗೆ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟೆನು.


ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”


ಚೀಯೋನಿನಿಂದ ದೇವರಾದ ಯೆಹೋವನು ಆರ್ಭಟಿಸುವನು. ಜೆರುಸಲೇಮಿನಿಂದ ಆತನು ಗರ್ಜಿಸುವನು. ಆಗ ಭೂಮ್ಯಾಕಾಶಗಳು ನಡುಗುವವು. ಆದರೆ ಯೆಹೋವನ ಜನರಿಗೆ ಆತನೇ ಆಶ್ರಯ ಸ್ಥಳವಾಗುವನು. ಆತನು ಇಸ್ರೇಲರಿಗೆ ಸುರಕ್ಷಿತ ಸ್ಥಳವಾಗುವನು.


ನನ್ನ ಬಳಿಗೆ ಬರಲು ಅವರಿಗೆ ಹೇಳು. ತಾವು ವಿಗ್ರಹಗಳನ್ನು ಯಾಕೆ ನಂಬುತ್ತಾರೆಂದು ನನ್ನೊಂದಿಗೆ ವಾದಿಸಲಿ.) “ಬಹಳ ಕಾಲದ ಹಿಂದೆ ನಡೆದ ಸಂಗತಿಗಳ ಬಗ್ಗೆ ನಿಮಗೆ ತಿಳಿಸಿದವರು ಯಾರು? ಬಹಳ ಕಾಲದಿಂದ ಈ ವಿಷಯಗಳನ್ನು ನಿಮಗೆ ತಿಳಿಸುತ್ತಾ ಬಂದವರು ಯಾರು? ನಾನೇ. ಯೆಹೋವನಾದ ನಾನೇ ನಿಮಗೆಲ್ಲವನ್ನು ತಿಳಿಸಿದೆನು. ನಾನೊಬ್ಬನೇ ದೇವರು. ನನ್ನಂಥ ದೇವರು ಬೇರೆ ಇದ್ದಾರೆಯೇ? ಕರುಣೆಯುಳ್ಳ ದೇವರು ಬೇರೆಲ್ಲಾದರೂ ಇರುವನೇ? ತನ್ನ ಜನರನ್ನು ವಿಮೋಚಿಸುವಂಥ ಬೇರೆ ದೇವರು ಇರುವನೇ? ಇಲ್ಲ! ಬೇರೆ ದೇವರು ಇಲ್ಲ!


ನಾನೇ, ನಾನೇ ಯೆಹೋವನು! ನನ್ನ ಹೊರತು ಬೇರೆ ರಕ್ಷಕನಿಲ್ಲ!


ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ತಿಮೊಥೆಯನಿಗೆ ಬರೆಯುವ ಪತ್ರ. ನಮ್ಮ ರಕ್ಷಕನಾದ ದೇವರು ಮತ್ತು ನಮ್ಮ ನಿರೀಕ್ಷೆಗೆ ಆಧಾರವಾದ ಕ್ರಿಸ್ತ ಯೇಸುವಿನ ಆಜ್ಞೆಗನುಸಾರವಾಗಿ ನಾನು ಅಪೊಸ್ತಲನಾದೆನು.


ಆದಕಾರಣವೇ ನಾನು ನಿಮ್ಮನ್ನು ನೋಡಲು ಮತ್ತು ನಿಮ್ಮ ಸಂಗಡ ಮಾತಾಡಲು ಬಯಸಿದೆ. ಇಸ್ರೇಲಿನ ನಿರೀಕ್ಷೆಯಲ್ಲಿ ನಾನು ನಂಬಿಕೆ ಇಟ್ಟಿರುವುದರಿಂದಲೇ ಈ ಸರಪಣಿಗಳಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.


ದೇವರೇ, ಜನರು ನಿನ್ನನ್ನು ಕಾಣಲಾರರು. ನೀನೇ ಇಸ್ರೇಲರ ವಿಮೋಚಕನು.


ಯೆಹೋವನೇ, ನಾನು ಆಪತ್ತಿನಲ್ಲಿದ್ದರೆ, ನನ್ನ ಪ್ರಾಣವನ್ನು ಕಾಪಾಡು. ನನ್ನ ವೈರಿಗಳು ನನ್ನ ಮೇಲೆ ಕೋಪಗೊಂಡಿದ್ದರೆ, ನನ್ನನ್ನು ಅವರಿಂದ ರಕ್ಷಿಸು.


ನನ್ನ ಭಕ್ತರು ಸಹಾಯಕ್ಕಾಗಿ ಮೊರೆಯಿಡುವಾಗ, ಸದುತ್ತರವನ್ನು ದಯಪಾಲಿಸುವೆನು. ಆಪತ್ತಿನಲ್ಲಿಯೂ ನಾನು ಅವರೊಂದಿಗಿರುವೆನು; ಅವರನ್ನು ತಪ್ಪಿಸಿ ಘನಪಡಿಸುವೆನು.


ದೇವರು ನಮಗೆ ಆಶ್ರಯವೂ ಬಲವೂ ಆಗಿದ್ದಾನೆ. ಆತನು ಆಪತ್ತಿನಲ್ಲಿ ನಮಗೆ ಸಹಾಯಮಾಡಲು ಸದಾ ಸಿದ್ಧನಾಗಿರುವನು.


ಯೆಹೋವನು ಕುಗ್ಗಿಹೋದವರಿಗೆ ಆಶ್ರಯಸ್ಥಾನವೂ ಇಕ್ಕಟ್ಟಿನಲ್ಲಿರುವವರಿಗೆ ಆಶ್ರಯದುರ್ಗವೂ ಆಗಿದ್ದಾನೆ.


ಯೆಹೋವನೇ, ನೀನು ಬಹುದೂರವಾಗಿರುವುದೇಕೆ? ಕಷ್ಟಕಾಲದಲ್ಲಿ ನೀನು ಮರೆಯಾಗಿರುವುದೇಕೆ?


ಆ ವೃದ್ಧನು ಬೀದಿಯ ಮುಖ್ಯಸ್ಥಳದಲ್ಲಿ ಪ್ರಯಾಣಿಕನನ್ನು (ಲೇವಿಯನ್ನು) ನೋಡಿದನು. ಆ ವೃದ್ಧನು, “ನೀನು ಎಲ್ಲಿಗೆ ಹೋಗಬೇಕು? ಎಲ್ಲಿಂದ ಬಂದಿರುವೆ?” ಎಂದು ಅವನನ್ನು ಕೇಳಿದನು.


ನನ್ನ ಒಡೆಯನೇ, ನನ್ನ ಬಾಲ್ಯದಿಂದಲೂ ನೀನೇ ನನ್ನ ನಿರೀಕ್ಷೆಯೂ ಭರವಸವೂ ಆಗಿರುವೆ.


ಯೆಹೋವನು ಹೇಳಿದ್ದೇನೆಂದರೆ: “ಇವರೇ ನನ್ನ ಜನರು. ಇವರೆಲ್ಲಾ ನನ್ನ ಸ್ವಂತ ಮಕ್ಕಳು.” ಆದ್ದರಿಂದ ಯೆಹೋವನು ಅವರನ್ನು ರಕ್ಷಿಸಿದ್ದಾನೆ.


“ಇದು ಯಾಕೋಬ್ಯರಿಗೆ ಬಹು ಮುಖ್ಯವಾದ ಸಮಯ. ಇದು ಬಹಳ ಕಷ್ಟದ ಸಮಯ. ಎಂದೂ ಇಂಥ ಕಷ್ಟದ ಸಮಯ ಬರುವದಿಲ್ಲ. ಆದರೆ ಯಾಕೋಬ್ ಇದರಿಂದ ಪಾರಾಗುವುದು.”


ಸೆರೆಹಿಡಿಯಲ್ಪಟ್ಟವರೇ, ಮನೆಗೆ ಹೋಗಿ. ಈಗ ನಿಮಗೊಂದು ನಿರೀಕ್ಷೆಯಿದೆ. ನಾನು ನಿಮಗೆ ಖಂಡಿತವಾಗಿ ಹೇಳುವುದೇನೆಂದರೆ, ನಾನು ತಿರುಗಿ ಬರುತ್ತೇನೆ.


ಆದ್ದರಿಂದ ಭೂಮಿಯು ನಡುಗಿದರೂ ಬೆಟ್ಟಗಳು ಸಮುದ್ರದೊಳಗೆ ಮುಳುಗಿಹೋದರೂ ನಮಗೇನೂ ಭಯವಿಲ್ಲ.


“ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿಮುಂಜಾನೆ ನಮಗೆ ಶಕ್ತಿ ದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು.


ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು