ಯೆರೆಮೀಯ 14:9 - ಪರಿಶುದ್ದ ಬೈಬಲ್9 ನೀನು ಸ್ತಬ್ಧನಾಗಿರುವೆ; ಯಾರನ್ನೂ ರಕ್ಷಿಸಲಾಗದ ಸೈನಿಕನಂತಾಗಿರುವೆ. ಯೆಹೋವನೇ, ನೀನಾದರೋ ನಮ್ಮ ಜೊತೆಯಲ್ಲಿರುವೆ. ನಾವು ನಿನ್ನ ಹೆಸರಿನವರಾಗಿದ್ದೇವೆ. ಆದ್ದರಿಂದ ನಮ್ಮನ್ನು ಕೈಬಿಡಬೇಡ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದಿಕ್ಕು ತೋಚದವನಂತೆ ನಿಶ್ಚಲರಾಗಿರುವಿರಿ, ಏಕೆ? ರಕ್ಷಿಸಲಾಗದ ರಣಧೀರನಂತಿರುವಿರಿ, ಏಕೆ? ಆದರೂ ಸರ್ವೇಶ್ವರಾ, ನೀವು ನಮ್ಮ ಮಧ್ಯೆ ಇರುವಿರಿ; ನಾವು ನಿಮ್ಮ ಹೆಸರಿನವರು, ನಮ್ಮನ್ನು ಕೈಬಿಡಬೇಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಏಕೆ ಸ್ತಬ್ಧನಂತೆಯೂ ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತೀ, ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವ ದೇವರೇ, ನೀವು ನಮ್ಮ ಮಧ್ಯದಲ್ಲಿರುತ್ತೀರಿ, ನಾವು ನಿಮ್ಮ ಹೆಸರನ್ನು ಹೊಂದಿದ್ದೇವೆ, ನಮ್ಮನ್ನು ಕೈಬಿಡಬೇಡಿರಿ. ಅಧ್ಯಾಯವನ್ನು ನೋಡಿ |
ನನ್ನ ಜನರ ಮೊರೆಯನ್ನು ಆಲಿಸು. ದೇಶದ ಎಲ್ಲೆಡೆಯಲ್ಲಿಯೂ ಅವರು ಸಹಾಯಕ್ಕಾಗಿ ಕೂಗುತ್ತಿದ್ದಾರೆ. “ಈಗಲೂ ಯೆಹೋವನು ಚೀಯೋನಿನಲ್ಲಿದ್ದಾನೆಯೇ? ಚೀಯೋನಿನ ರಾಜನು ಈಗಲೂ ಅಲ್ಲಿದ್ದಾನೆಯೇ?” ಎಂದು ಅವರು ಕೇಳುತ್ತಾರೆ. ದೇವರು ಹೀಗೆನ್ನುತ್ತಾನೆ: “ಯೆಹೂದದ ಜನರು ತಮ್ಮ ವಿಗ್ರಹಗಳನ್ನು ಪೂಜಿಸಿ ನನ್ನ ಕೋಪವನ್ನು ಏಕೆ ಕೆರಳಿಸುತ್ತಾರೆ? ಅವರು ನಿಷ್ಪ್ರಯೋಜಕವಾದ ಅನ್ಯದೇವರ ವಿಗ್ರಹಗಳನ್ನು ಪೂಜಿಸಿದರು.”