ಯೆರೆಮೀಯ 15:1 - ಪರಿಶುದ್ದ ಬೈಬಲ್1 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರ ಸ್ವಾಮಿ ನನಗೆ ಹೀಗೆಂದರು : “ಮೋಶೆ ಮತ್ತು ಸಮುವೇಲನು ನನ್ನ ಮುಂದೆ ನಿಂತು ವಿಜ್ಞಾಪಿಸಿದರೂ ನಾನು ಈ ಜನರ ಬಗ್ಗೆ ನನ್ನ ಮನಸ್ಸನ್ನು ಬದಲಾಯಿಸೆನು. ಇವರನ್ನು ನನ್ನ ಸಮ್ಮುಖದಿಂದ ತಳ್ಳಿಬಿಡು; ತೊಲಗಿಹೋಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನು ನನಗೆ ಹೀಗೆ ಹೇಳಿದನು - ಮೋಶೆಯೂ ಸಮುವೇಲನೂ ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗದು; ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿಹೋಗಲಿ! ಅವರು - ನಾವು ಎಲ್ಲಿಗೆ ಹೋಗೋಣ ಎಂದು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ. ಅಧ್ಯಾಯವನ್ನು ನೋಡಿ |
ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.
ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.