Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:10 - ಪರಿಶುದ್ದ ಬೈಬಲ್‌

10 ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ನನ್ನ ಹೆತ್ತತಾಯೇ, ನನ್ನ ಗತಿಯನ್ನು ಏನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಎಲ್ಲರು ಶಪಿಸುವವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ಬಯ್ಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:10
32 ತಿಳಿವುಗಳ ಹೋಲಿಕೆ  

“ನೀವು ಮನುಷ್ಯಕುಮಾರನಿಗೆ ಸೇರಿದವರಾಗಿರುವುದರಿಂದ ಜನರು ನಿಮ್ಮನ್ನು ದ್ವೇಷಿಸಿದರೆ, ತುಚ್ಛೀಕರಿಸಿದರೆ, ಅವಮಾನ ಮಾಡಿದರೆ, ನಿಮ್ಮನ್ನು ಕೆಟ್ಟವರೆಂದು ಹೇಳಿದರೆ ನೀವು ಧನ್ಯರು.


“ನನ್ನ ಜನರಲ್ಲಿ ಬಡವನಾಗಿರುವವನಿಗೆ ನೀವು ಹಣವನ್ನು ಸಾಲಕೊಟ್ಟರೆ, ನೀವು ಆ ಹಣಕ್ಕೆ ಬಡ್ಡಿ ಕೇಳಬಾರದು. ಬೇಗನೆ ಮರುಪಾವತಿ ಮಾಡುವಂತೆ ಅವನನ್ನು ಬಲವಂತಪಡಿಸಬಾರದು.


ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.


“ಆಗ ಜನರು ನಿಮ್ಮನ್ನು ಹಿಂಸಿಸಿ, ಮರಣದಂಡನೆ ವಿಧಿಸಲು ಅಧಿಕಾರಿಗಳಿಗೆ ಒಪ್ಪಿಸಿಕೊಡುವರು. ಜನರೆಲ್ಲರೂ ನಿಮ್ಮನ್ನು ವಿರೋಧಿಸುವರು. ನೀವು ನನ್ನಲ್ಲಿ ನಂಬಿಕೆ ಇಟ್ಟದ್ದಕ್ಕಾಗಿ ಇವುಗಳೆಲ್ಲಾ ನಿಮಗೆ ಸಂಭವಿಸುವವು.


ಆದರೆ ನಾನು ನಿಮಗೆ ಹೇಳುವುದೇನೆಂದರೆ, ನಿಮ್ಮ ಶತ್ರುಗಳನ್ನು ಪ್ರೀತಿಸಿರಿ. ನಿಮಗೆ ಕೆಟ್ಟದ್ದನ್ನು ಮಾಡುವ ಜನರಿಗಾಗಿ ಪ್ರಾರ್ಥಿಸಿರಿ.


ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ ಎಂದು ಆ ಜನರು ತಿಳಿದುಕೊಳ್ಳುವರು. ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. ಆದರೆ ಅವರು ನಿನ್ನನ್ನು ಸೋಲಿಸಲಾರರು. ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ.” ಇದು ಯೆಹೋವನಿಂದ ಬಂದ ನುಡಿ.


ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಆ ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.


ಆ ದುಷ್ಟರು ನನ್ನನ್ನು ಶಪಿಸುತ್ತಾರೆ; ಯೆಹೋವನೇ, ನೀನಾದರೋ ನನ್ನನ್ನು ಆಶೀರ್ವದಿಸುವೆ. ನನಗೆ ವಿರೋಧವಾಗಿ ಎದ್ದಿರುವ ಅವರನ್ನು ಸೋಲಿಸು. ಆಗ, ನಿನ್ನ ಸೇವಕನಾದ ನಾನು ಸಂತೋಷವಾಗಿರುವೆನು.


ಅವನು ಕೊಟ್ಟ ಸಾಲಕ್ಕೆ ಬಡ್ಡಿ ಕೇಳದವನೂ ನಿರಪರಾಧಿಗೆ ಕೇಡುಮಾಡಲು ಲಂಚ ತೆಗೆದುಕೊಳ್ಳದವನೂ ಆಗಿರಬೇಕು. ಹೀಗೆ ಜೀವಿಸುವವನು ದೇವರಿಗೆ ಸಮೀಪವಾಗಿಯೇ ಇರುತ್ತಾನೆ.


ರಾಜನಾದ ಅಹಾಬನು, “ಬೇರೊಬ್ಬ ಪ್ರವಾದಿಯು ಇಲ್ಲಿದ್ದಾನೆ. ಅವನು ಇಮ್ಲನ ಮಗನಾದ ಮೀಕಾಯೆಹು ಎಂಬ ಹೆಸರಿನವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯೆಹೋವನ ಪ್ರತಿನಿಧಿಯಾಗಿ ಅವನು ಮಾತನಾಡುವಾಗ ಅವನೆಂದೂ ನನಗೆ ಒಳ್ಳೆಯವುಗಳನ್ನು ಪ್ರವಾದಿಸುವುದಿಲ್ಲ. ಅವನು ಯಾವಾಗಲೂ ನನಗೆ ಕೆಟ್ಟವುಗಳನ್ನೇ ಪ್ರವಾದಿಸುತ್ತಾನೆ” ಎಂದು ಉತ್ತರಿಸಿದನು. ಯೆಹೋಷಾಫಾಟನು, “ರಾಜನಾದ ಅಹಾಬನೇ, ನೀನು ಆ ಸಂಗತಿಗಳನ್ನು ಹೇಳಲೇಬಾರದು!” ಎಂದು ಹೇಳಿದನು.


ಎಲೀಯನು ಅಹಾಬನ ಹತ್ತಿರಕ್ಕೆ ಹೋದನು. ಅಹಾಬನು ಎಲೀಯನನ್ನು ಕಂಡು, “ನೀನು ನನ್ನನ್ನು ಮತ್ತೆ ಕಂಡುಹಿಡಿದೆ. ನೀನು ಯಾವಾಗಲೂ ನನಗೆ ವಿರೋಧವಾಗಿರುವೆ” ಎಂದನು. ಎಲೀಯನು, “ಹೌದು, ನಾನು ನಿನ್ನನ್ನು ಮತ್ತೆ ಕಂಡುಹಿಡಿದೆ. ಯೆಹೋವನ ವಿರುದ್ಧ ಪಾಪಮಾಡಲು ನೀನು ನಿನ್ನ ಜೀವನವನ್ನು ಯಾವಾಗಲೂ ಉಪಯೋಗಿಸುತ್ತಿರುವೆ.


ಅವನಿಗೆ ನೀವು ಸಾಲ ಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ದೇವರನ್ನು ಗೌರವಿಸಿರಿ. ನಿಮ್ಮ ಸ್ವಂತ ದೇಶದವನು ನಿಮ್ಮ ಸಂಗಡ ವಾಸಿಸಲಿ.


ನೀವು ಅವನಿಗೆ ಸಾಲಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ನೀವು ಅವನಿಗೆ ಮಾರುವ ಆಹಾರಪದಾರ್ಥಗಳಿಂದ ಲಾಭವನ್ನು ಗಳಿಸಲು ಪ್ರಯತ್ನಿಸಬಾರದು.


ಶತ್ರುಗಳು ನನ್ನ ತಲೆಕೂದಲುಗಳಿಗಿಂತ ಹೆಚ್ಚಾಗಿದ್ದಾರೆ. ಅವರು ನಿಷ್ಕಾರಣವಾಗಿ ನನ್ನನ್ನು ದ್ವೇಷಿಸುತ್ತಾರೆ; ನನ್ನನ್ನು ನಾಶಮಾಡಲು ಬಹು ಪ್ರಯತ್ನ ಮಾಡುತ್ತಿದ್ದಾರೆ. ನನ್ನ ಶತ್ರಗಳು ನನ್ನ ಬಗ್ಗೆ ಸುಳ್ಳು ಹೇಳುವರು. ನಾನು ಕದ್ದಿಲ್ಲದಿದ್ದರೂ ಸುಳ್ಳು ಅಪವಾದ ಹೊರಿಸಿ ನನ್ನಿಂದ ದಂಡ ವಸೂಲಿ ಮಾಡಿದರು.


ಜನರು ವಸ್ತುಗಳನ್ನು ಕದ್ದುಕೊಂಡು ಇತರರನ್ನು ಗಾಯಗೊಳಿಸುತ್ತಿದ್ದಾರೆ. ಜನರು ಜಗಳ ಮಾಡುತ್ತಾ ಕಾದಾಡುತ್ತಿದ್ದಾರೆ. ಇಂಥಾ ಭಯಂಕರ ಸಂಗತಿಗಳನ್ನು ನೋಡುವಂತೆ ಯಾಕೆ ಮಾಡುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು