ಯೆರೆಮೀಯ 15:12 - ಪರಿಶುದ್ದ ಬೈಬಲ್12 “ಯೆರೆಮೀಯನೇ, ಕಬ್ಬಿಣದ ತುಂಡನ್ನು ಪುಡಿ ಮಾಡಲು ಯಾರಿಗೂ ಸಾಧ್ಯವಿಲ್ಲವೆಂಬುದು ನಿನಗೆ ಗೊತ್ತು. ಉತ್ತರದಿಂದ ಬರುವವನು ಕಬ್ಬಿಣದಂತಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ತಾಮ್ರವನ್ನು ಮುರಿಯುವುದು ಯಾರಿಂದಾದೀತು?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಕಬ್ಬಿಣವನ್ನು ಅದೂ ಉತ್ತರದಿಂದ ಬಂದ ಕಬ್ಬಿಣವನ್ನು ಹಾಗು ಕಂಚನ್ನು ಬಗ್ಗಿಸಲು ಯಾರಿಂದಾದೀತು?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ತಾಮ್ರವನ್ನು ಮುರಿಯುವದು ಯಾರಿಂದಾದೀತು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು? ಕಂಚನ್ನು ಮುರಿಯುವುದು ಯಾರಿಂದಾದೀತು? ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
“ಈ ಜನರನ್ನು ನೋಡು. ತಮ್ಮನ್ನು ಸೃಷ್ಟಿದಾತನೊಂದಿಗೆ ವಾದಿಸುತ್ತಿದ್ದಾರೆ. ನನ್ನೊಂದಿಗೆ ವಾದಿಸುವದನ್ನು ನೋಡಿರಿ! ಅವರು ಒಡೆಯಲ್ಪಟ್ಟ ಮಣ್ಣಿನ ಮಡಿಕೆಯ ತುಂಡುಗಳಂತಿದ್ದಾರೆ. ಒಬ್ಬನು ಮೃದುವಾದ ಜೇಡಿಮಣ್ಣಿನಿಂದ ಮಡಿಕೆಯನ್ನು ಮಾಡುತ್ತಾನೆ. ಆ ಮಡಿಕೆಯು ಕುಂಬಾರನಿಗೆ, ‘ನೀನು ಮಾಡುತ್ತಿರುವುದೇನು?’ ಎಂದು ಪ್ರಶ್ನಿಸುವದಿಲ್ಲ. ತಯಾರಿಸಲ್ಪಟ್ಟ ವಸ್ತುಗಳಿಗೆ ತಯಾರಿಸಿದವನನ್ನು ಪ್ರಶ್ನಿಸುವ ಅಧಿಕಾರವಿಲ್ಲ. ಜನರು ಈ ಜೇಡಿಮಣ್ಣಿನಂತೆ ಇದ್ದಾರೆ.