ಯೆರೆಮೀಯ 15:16 - ಪರಿಶುದ್ದ ಬೈಬಲ್16 ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ ಹೃದಯಾನಂದವೂ ಆದವು; ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ! ಅಧ್ಯಾಯವನ್ನು ನೋಡಿ |