ಯೆರೆಮೀಯ 15:18 - ಪರಿಶುದ್ದ ಬೈಬಲ್18 ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ [ಎಂದು ಅರಿಕೆಮಾಡಿಕೊಂಡೆನು.] ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣ ಹೋಗಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ? ಎಂದು ಅರಿಕೆಮಾಡಿಕೊಂಡೆನು. ಅಧ್ಯಾಯವನ್ನು ನೋಡಿ |
ಯೆಹೋವನೇ, ನೀನು ಯೆಹೂದ ಜನಾಂಗವನ್ನು ಸಂಪೂರ್ಣವಾಗಿ ತಿರಸ್ಕರಿಸಿರುವೆಯಾ? ಯೆಹೋವನೇ, ನೀನು ಚೀಯೋನನ್ನು ದ್ವೇಷಿಸುವೆಯಾ? ನಾವು ಪುನಃ ಗುಣಹೊಂದಲಾರದ ಹಾಗೆ ನಮ್ಮನ್ನು ಹೊಡೆದು ಗಾಯಗೊಳಿಸಿರುವೆಯಲ್ಲ. ನೀನು ಹೀಗೇಕೆ ಮಾಡಿದೆ? ನಾವು ನೆಮ್ಮದಿಯನ್ನು ನಿರೀಕ್ಷಿಸಿದೆವು, ಆದರೆ ಒಳ್ಳೆಯದೇನೂ ಆಗಲಿಲ್ಲ. ನಾವು ಕ್ಷೇಮವನ್ನು ಎದುರುನೋಡುತ್ತಿದ್ದೆವು. ಆದರೆ ಕೇವಲ ಭಯ ನಮ್ಮೆದುರಿಗೆ ಬಂದಿತು.