Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:19 - ಪರಿಶುದ್ದ ಬೈಬಲ್‌

19 ಆಗ ಯೆಹೋವನು ಹೇಳಿದನು: “ಯೆರೆಮೀಯನೇ, ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನಾನು ನಿನ್ನನ್ನು ದಂಡಿಸುವುದಿಲ್ಲ. ನೀನು ಬದಲಾವಣೆ ಹೊಂದಿ ನನ್ನಲ್ಲಿಗೆ ಬಂದರೆ ನೀನು ನನ್ನ ಸೇವೆ ಮಾಡಬಹುದು. ಹುರುಳಿಲ್ಲದ ಮಾತುಗಳನ್ನು ಬಿಟ್ಟು ಮುಖ್ಯವಾದ ವಿಷಯಗಳನ್ನು ಕುರಿತು ಮಾತನಾಡುವದಾದರೆ ನೀನು ನನ್ನ ಪರವಾಗಿ ಮಾತನಾಡಬಹುದು. ಯೆರೆಮೀಯನೇ, ಯೆಹೂದದ ಜನರು ಬದಲಾವಣೆ ಹೊಂದಿ ನಿನ್ನಲ್ಲಿಗೆ ಬರಬೇಕು. ಆದರೆ ನೀನು ಬದಲಾವಣೆ ಹೊಂದಿ ಅವರಂತೆ ಆಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದರಿಂದ ಯೆಹೋವನು ಹೀಗಂದಿದ್ದಾನೆ - ನೀನು [ನನ್ನ ಕಡೆಗೆ] ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು; ನೀನು ತುಚ್ಫವಾದದ್ದನ್ನು ನಿರಾಕರಿಸಿ ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆದಕಾರಣ ಯೆಹೋವ ದೇವರು ಹೀಗೆನ್ನುತ್ತಾರೆ: ನೀನು ಮಾನಸಾಂತರಪಟ್ಟರೆ, ನೀನು ನನಗೆ ಸೇವೆಮಾಡುವಂತೆ ನಾನು ನಿನ್ನನ್ನು ಪುನಃಸ್ಥಾಪಿಸುವೆನು. ನೀನು ತುಚ್ಛವಾದವುಗಳಿಗೆ ಬದಲಾಗಿ ಅಮೂಲ್ಯವಾದವುಗಳನ್ನೇ ಮಾತನಾಡುತ್ತಿದ್ದರೆ, ನೀನು ನನ್ನ ಬಾಯಿಯ ಹಾಗಿರುವೆ. ಅವರು ನಿನ್ನ ಕಡೆಗೆ ತಿರುಗಲಿ, ಆದರೆ ನೀನು ಅವರ ಕಡೆಗೆ ಹಿಂದಿರುಗಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:19
34 ತಿಳಿವುಗಳ ಹೋಲಿಕೆ  

ಸರ್ವಶಕ್ತನಾದ ಯೆಹೋವನು ಹೀಗೆನ್ನುತ್ತಾನೆ, “ನಾನು ಹೇಳುವ ರೀತಿಯಲ್ಲಿ ಜೀವಿಸು. ನಾನು ಹೇಳುವ ರೀತಿಯಲ್ಲಿ ನಡೆ. ನೀನು ನನ್ನ ಆಲಯದ ಮುಖ್ಯಾಧಿಕಾರಿಯಾಗುವೆ. ಅದರ ಅಂಕಣಗಳನ್ನು ನೀನು ನೋಡಿಕೊಳ್ಳುವೆ. ಇಲ್ಲಿ ನಿಂತಿರುವವರೊಂದಿಗೆ ನೀನು ಪ್ರವೇಶಿಸಬಹುದು.


ಏಕೆಂದರೆ ನಾನೇ ನಿಮಗೆ ಜ್ಞಾನವನ್ನು ಕೊಡುತ್ತೇನೆ. ಆದ್ದರಿಂದ ನಿಮ್ಮ ವೈರಿಗಳಲ್ಲಿ ಯಾರೂ ನಿಮ್ಮ ಮಾತಿಗೆ ಪ್ರತ್ಯುತ್ತರವನ್ನು ಕೊಡಲು ಸಾಧ್ಯವಿಲ್ಲ.


ನೀವು ಪವಿತ್ರವಾದವುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಕುರಿತಾಗಿಯೂ ಶುದ್ಧವಾದವುಗಳ ಮತ್ತು ಅಶುದ್ಧವಾದವುಗಳ ಕುರಿತಾಗಿಯೂ ಸ್ಪಷ್ಟವಾಗಿ ವಿವೇಚನೆಯುಳ್ಳವರಾಗಿರಬೇಕು.


“ಯಾಜಕರು ಜನರಿಗೆ ಪವಿತ್ರ ವಸ್ತುಗಳ ಮತ್ತು ಪವಿತ್ರವಲ್ಲದ ವಸ್ತುಗಳ ಬಗ್ಗೆ ಉಪದೇಶಿಸಬೇಕು. ಒಬ್ಬನನ್ನು ಅಶುದ್ಧನನ್ನಾಗಿ ಮಾಡುವಂಥವುಗಳ ಬಗ್ಗೆ ಇರುವ ನಿಯಮಗಳನ್ನು ಅವರು ಜನರಿಗೆ ಉಪದೇಶಿಸಬೇಕು.


“ಯಾಜಕರು ನನ್ನ ಉಪದೇಶವನ್ನು ನಿರಾಕರಿಸಿರುತ್ತಾರೆ; ಪರಿಶುದ್ಧ ವಸ್ತುಗಳನ್ನು ಸರಿಯಾಗಿ ಲಕ್ಷ್ಯ ಮಾಡುತ್ತಿಲ್ಲ; ಅವುಗಳಿಗೆ ಮಹತ್ವವನ್ನು ಕೊಡುತ್ತಿಲ್ಲ. ಅವರು ಪವಿತ್ರ ವಸ್ತುಗಳನ್ನು ಅಪವಿತ್ರ ವಸ್ತುಗಳಂತೆ ನೋಡುತ್ತಿದ್ದಾರೆ. ಯಾವುದು ಶುದ್ಧ, ಯಾವುದು ಅಶುದ್ಧ ಎಂಬುದರ ಬಗ್ಗೆ ಅವರು ಜನರಿಗೆ ಸರಿಯಾಗಿ ಉಪದೇಶಿಸುತ್ತಿಲ್ಲ. ನನ್ನ ವಿಶೇಷ ವಿಶ್ರಾಂತಿ ದಿವಸಗಳನ್ನು ಮಾನ್ಯ ಮಾಡುತ್ತಿಲ್ಲ. ನಾನು ಏನೂ ಅಲ್ಲವೆಂಬಂತೆ ನನ್ನನ್ನು ಅವರು ನೋಡುತ್ತಾರೆ.


ಆತನು (ದೇವರು) ಬಲಶಾಲಿಯಾಗಿದ್ದಾನೆ. ನೀವು ಬೀಳದಂತೆ ಆತನು ನಿಮಗೆ ಸಹಾಯ ಮಾಡಬಲ್ಲನು. ಆತನು ನಿಮ್ಮಲ್ಲಿ ಯಾವ ತಪ್ಪೂ ಇಲ್ಲದಂತೆ ಮಾಡಿ, ತನ್ನ ಮಹಿಮಾ ಸನ್ನಿಧಿಗೆ ತರುವುದಕ್ಕೂ ನಿಮಗೆ ಮಹಾಸಂತೋಷವನ್ನು ಕೊಡುವುದಕ್ಕೂ ಶಕ್ತನಾಗಿದ್ದಾನೆ.


ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ.


ಆದರೆ ಗಟ್ಟಿಯಾದ ಆಹಾರವು ಜ್ಞಾನದಲ್ಲಿ ಬೆಳವಣಿಗೆ ಹೊಂದಿರುವವರಿಗೇ ಹೊರತು ಮಕ್ಕಳಿಗಲ್ಲ. ಇವರು ಅನುಭವದಿಂದ ತಮ್ಮ ಮನಸ್ಸುಗಳನ್ನು ಹಿಡಿತದಲ್ಲಿ ಇಟ್ಟುಕೊಂಡಿರುವುದರಿಂದ ಒಳಿತು ಕೆಡುಕುಗಳಿಗಿರುವ ಭೇದವನ್ನು ತಿಳಿದುಕೊಳ್ಳಬಲ್ಲವರಾಗಿದ್ದಾರೆ.


ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.


“ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನೇ ಕೇಳುವವನಾಗಿದ್ದಾನೆ. ನಿಮ್ಮನ್ನು ಅಂಗೀಕರಿಸದವನು ನನ್ನನ್ನೇ ಅಂಗಿಕರಿಸದವನಾಗಿದ್ದಾನೆ. ನನ್ನನ್ನು ನಿರಾಕರಿಸುವವನು ನನ್ನನ್ನು ಕಳುಹಿಸಿದಾತನನ್ನೇ (ದೇವರು) ನಿರಾಕರಿಸುವವನಾಗಿದ್ದಾನೆ” ಎಂದು ಹೇಳಿದನು.


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ಈಗ ಹೋಗು. ನೀನು ಮಾತಾಡುವಾಗ ನಾನೇ ನಿನ್ನೊಂದಿಗಿರುವೆನು. ನೀನು ಹೇಳಬೇಕಾದ ಮಾತುಗಳನ್ನು ನಾನು ನಿನಗೆ ಕೊಡುವೆನು” ಎಂದು ಹೇಳಿದನು.


ಅವರು ಕೇಳಲಿ, ಕೇಳದಿರಲಿ, ನಾನು ಹೇಳುವದನ್ನು ಅವರಿಗೆ ತಿಳಿಸು; ಯಾಕೆಂದರೆ ಅವರು ದಂಗೆಕೋರರು.


ಆ ಸಮಯದಲ್ಲಿ ನೀವು ಹೇಳಬೇಕಾದುದನ್ನು ಪವಿತ್ರಾತ್ಮನೇ ನಿಮಗೆ ತಿಳಿಸುವನು.”


ದೇವದೂತನು, “ನನ್ನ ಹೆಸರು ಗಬ್ರಿಯೇಲ. ನಾನು ದೇವರ ಸನ್ನಿಧಿಯಲ್ಲಿ ನಿಂತುಕೊಂಡಿರುವವನು. ನಿನಗೆ ಈ ಶುಭಸಮಾಚಾರವನ್ನು ತಿಳಿಸಲು ದೇವರು ನನ್ನನ್ನು ಕಳುಹಿಸಿದ್ದಾನೆ.


ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.


ಆದರೆ ಆ ಸುಳ್ಳುಸಹೋದರರು ಬಯಸಿದ ಯಾವುದಕ್ಕೂ ನಾವು ಒಂದು ಕ್ಷಣವಾದರೂ ಒಪ್ಪಿಗೆ ಕೊಡಲಿಲ್ಲ. ಸುವಾರ್ತೆಯ ಸತ್ಯವು ನಿಮ್ಮಲ್ಲಿ ಸ್ಥಿರವಾಗಿರಬೇಕೆಂಬುದೇ ನಮ್ಮ ಅಪೇಕ್ಷೆಯಾಗಿತ್ತು.


ಆದ್ದರಿಂದ ಎಲ್ಲಾ ಸಮಯದಲ್ಲಿಯೂ ಸಿದ್ಧರಾಗಿರಿ. ನಡೆಯಲಿರುವ ಈ ಎಲ್ಲಾ ಸಂಗತಿಗಳನ್ನು ಎದುರಿಸಿ ಸುರಕ್ಷಿತವಾಗಿ ಮುಂದುವರಿಯಲು ಮತ್ತು ಮನುಷ್ಯಕುಮಾರನ ಮುಂದೆ ನಿಲ್ಲಲು ಬೇಕಾದ ಶಕ್ತಿಗಾಗಿ ಪ್ರಾರ್ಥಿಸಿರಿ.”


ಚತುರ ಕೆಲಸಗಾರನು ರಾಜರ ಸೇವೆಗೆ ಯೋಗ್ಯನಾಗಿದ್ದಾನೆ. ಅವನು ಸಾಮಾನ್ಯರ ಸೇವೆ ಮಾಡಬೇಕಿಲ್ಲ.


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಹೀಗಿರಲಾಗಿ, ಲೋಕವು ಜನರ ವಿಷಯವಾಗಿ ಯೋಚಿಸುವಂತೆ ಇಂದಿನಿಂದ ನಾವು ಯಾರ ಬಗ್ಗೆಯೂ ಯೋಚಿಸುವುದಿಲ್ಲ. ಲೋಕವು ಯೋಚಿಸುವಂತೆ ಹಿಂದಿನ ಕಾಲದಲ್ಲಿ ನಾವು ಕ್ರಿಸ್ತನ ಬಗ್ಗೆ ಯೋಚಿಸಿಕೊಂಡಿದ್ದೆವು. ಆದರೆ ಈಗ ನಾವು ಆ ರೀತಿಯಲ್ಲಿ ಯೋಚಿಸುವುದಿಲ್ಲ.


“ಮಹಾನಗರವಾದ ನಿನೆವೆಗೆ ನೀನು ಎದ್ದುಹೋಗಿ ಅಲ್ಲಿ ನಾನು ಹೇಳಿದ್ದನ್ನು ಅವರಿಗೆ ಸಾರು.”


ಇದು ಯೆಹೋವನ ಸಂದೇಶ: “ಇಸ್ರೇಲೇ, ನೀನು ಹಿಂತಿರುಗಿ ಬರಲು ಇಚ್ಛಿಸಿದರೆ ನನ್ನಲ್ಲಿಗೆ ಹಿಂತಿರುಗಿ ಬಾ. ನಿನ್ನ ವಿಗ್ರಹಗಳನ್ನು ಎಸೆದುಬಿಡು. ನನ್ನಿಂದ ದೂರಸರಿದು ಅಲೆದಾಡಬೇಡ.


ಅವರನ್ನು ತಿದ್ದುವದು ಬೆಳ್ಳಿಯನ್ನು ಪವಿತ್ರಗೊಳಿಸಲು ಪ್ರಯತ್ನ ಮಾಡಿದ ಅಕ್ಕಸಾಲಿಗನಂತಾಗುವುದು. ತಿದಿಗಳು ಭರದಿಂದ ಬೀಸಲು ಬೆಂಕಿಯು ಧಗಧಗಿಸಿತು. ಆದರೆ ಆ ಬೆಂಕಿಯಿಂದ ಕೇವಲ ಸೀಸವು ಹೊರಬಂದಿತು. ಬೆಳ್ಳಿಯನ್ನು ಶುದ್ಧೀಕರಿಸಲು ಮಾಡಿದ ಪ್ರಯತ್ನ ಕೇವಲ ವ್ಯರ್ಥವಾಯಿತು. ಅದರಂತೆಯೇ ನನ್ನ ಜನರಿಂದ ದುಷ್ಟತನವನ್ನು ತೆಗೆಯಲಾಗಲಿಲ್ಲ.


ಆದ್ದರಿಂದ ಇಸ್ರೇಲಿನ ದೇವರಾದ ಸರ್ವಶಕ್ತನಾದ ಯೆಹೋವನು ‘ರೇಕಾಬನ ಮಗನಾದ ಯೋನಾದಾಬನ ಸಂತಾನದವರು ಯಾವಾಗಲೂ ನನ್ನ ಸೇವೆಯಲ್ಲಿರುವರು’ ಎಂದು ನುಡಿದನು.”


ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.


ಅವು ಶುದ್ಧಾಶುದ್ಧ ಬೇಧವನ್ನು ತಿಳಿಸುವ ನಿಯಮಗಳಾಗಿವೆ. ಅವು ಆ ರೀತಿಯ ರೋಗಗಳ ಶುದ್ಧಾಚಾರದ ನಿಯಮಗಳಾಗಿವೆ.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಯೆರೆಮೀಯನೇ, ಇಗೋ, ನಾನು ನನ್ನ ಮಾತುಗಳನ್ನು ನಿನ್ನ ಬಾಯಲ್ಲಿ ಇಡುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು