ಯೆರೆಮೀಯ 15:2 - ಪರಿಶುದ್ದ ಬೈಬಲ್2 ‘ನಾವು ಎಲ್ಲಿಗೆ ಹೋಗಬೇಕು’ ಎಂದು ಅವರು ಕೇಳಬಹುದು. ಯೆಹೋವನು ಹೀಗೆ ಹೇಳಿದ್ದಾನೆ ಎಂದು ನೀನು ಅವರಿಗೆ ಹೇಳು. “‘ಕೆಲವು ಜನರು ಮರಣಹೊಂದಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಮರಣಹೊಂದುತ್ತಾರೆ. ಕೆಲವು ಜನರು ಖಡ್ಗಗಳಿಂದ ಕೊಲ್ಲಲ್ಪಡಬೇಕೆಂದು ನಾನು ಗೊತ್ತುಮಾಡಿದ್ದೇನೆ. ಅವರು ಖಡ್ಗಗಳಿಗೆ ಬಲಿಯಾಗುತ್ತಾರೆ. ಕೆಲವು ಜನರು ಹೊಟ್ಟೆಗೆ ಅನ್ನವಿಲ್ಲದೆ ಸಾಯಬೇಕು ಎಂದು ನಾನು ಗೊತ್ತುಮಾಡಿದ್ದೇನೆ. ಅವರು ಹಸಿವಿನಿಂದ ಸಾಯುತ್ತಾರೆ. ಕೆಲವು ಜನರನ್ನು ಶತ್ರುಗಳು ಸೆರೆಹಿಡಿದು ಪರದೇಶಕ್ಕೆ ತೆಗೆದುಕೊಂಡು ಹೋಗಲಿ ಎಂದು ಗೊತ್ತುಮಾಡಿದ್ದೇನೆ. ಅವರು ಪರದೇಶದಲ್ಲಿ ಸೆರೆಯಾಳುಗಳಾಗಿ ಇರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ‘ನಾವೆಲ್ಲಿಗೆ ಹೋಗಬೇಕು?’ ಎಂದು ಕೇಳಿಯಾರು. ಆಗ ನೀನು ಅವರಿಗೆ : ‘ಇದು ಸರ್ವೇಶ್ವರನ ಸಂದೇಶ: ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಸಾಯುವರು’ ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಅವರಿಗೆ - ಮರಣವ್ಯಾಧಿಗೆ ಗೊತ್ತಾದವರು ಮರಣವ್ಯಾಧಿಗೆ, ಖಡ್ಗಕ್ಕೆ ಗೊತ್ತಾದವರು ಖಡ್ಗಕ್ಕೆ, ಕ್ಷಾಮಕ್ಕೆ ಗೊತ್ತಾದವರು ಕ್ಷಾಮಕ್ಕೆ, ಸೆರೆಗೆ ಗೊತ್ತಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ ಎಂದು ಹೇಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ; ಖಡ್ಗಕ್ಕೆ ಇರುವವರು ಖಡ್ಗಕ್ಕೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು. ಅಧ್ಯಾಯವನ್ನು ನೋಡಿ |
ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು.
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.