ಯೆರೆಮೀಯ 15:5 - ಪರಿಶುದ್ದ ಬೈಬಲ್5 “ಜೆರುಸಲೇಮ್ ನಗರವೇ, ನಿನಗಾಗಿ ಯಾರೂ ವ್ಯಥೆಪಡುವದಿಲ್ಲ. ನಿನಗಾಗಿ ದುಃಖಪಡುವುದಿಲ್ಲ ಮತ್ತು ಆಳುವುದಿಲ್ಲ. ಯಾರೂ ತಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಬಿಟ್ಟು ನಿನ್ನ ಯೋಗಕ್ಷೇಮವನ್ನು ವಿಚಾರಿಸಲು ಬರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ಜೆರುಸಲೇಮೆ, ನಿನಗೆ ಕರುಣೆ ತೋರುವವರಾರು? ನಿನ್ನ ಪರಿಸ್ಥಿತಿಯನ್ನು ಕಂಡು ಪ್ರಲಾಪಿಸುವವರಾರು? ತಿರುಗಿ ನೋಡಿ ನಿನ್ನ ಕ್ಷೇಮವನ್ನು ವಿಚಾರಿಸುವವರಾರು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಬಡುಕೊಳ್ಳುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ಯೆರೂಸಲೇಮೇ, ನಿನ್ನ ಮೇಲೆ ಯಾರು ಕನಿಕರಪಡುವರು, ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವುದಕ್ಕೆ ಯಾರು ಹೋಗುವರು? ಅಧ್ಯಾಯವನ್ನು ನೋಡಿ |
“‘ಇದಾದ ಮೇಲೆ ನಾನು ಯೆಹೂದದ ರಾಜನಾದ ಚಿದ್ಕೀಯನನ್ನು ಮತ್ತು ಅಧಿಪತಿಗಳನ್ನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನಿಗೆ ಒಪ್ಪಿಸುತ್ತೇನೆ. ಜೆರುಸಲೇಮಿನ ಕೆಲವು ಜನರು ಭಯಂಕರವಾದ ರೋಗದಿಂದ ಸಾಯುವುದಿಲ್ಲ; ಕೆಲವು ಜನರು ಖಡ್ಗಗಳಿಗೆ ಆಹುತಿಯಾಗುವದಿಲ್ಲ; ಕೆಲವರು ಹಸಿವಿನಿಂದ ಸಾಯುವುದಿಲ್ಲ. ಅಂಥವರನ್ನು ನಾನು ನೆಬೂಕದ್ನೆಚ್ಚರನಿಗೆ ಕೊಡುತ್ತೇನೆ. ಯೆಹೂದದ ವೈರಿಯು ಗೆಲ್ಲುವಂತೆ ನಾನು ಮಾಡುತ್ತೇನೆ. ನೆಬೂಕದ್ನೆಚ್ಚರನ ಸೈನಿಕರು ಯೆಹೂದ್ಯರನ್ನು ಕೊಲ್ಲಬಯಸುತ್ತಾರೆ. ಆದ್ದರಿಂದ ಯೆಹೂದ ಮತ್ತು ಜೆರುಸಲೇಮಿನ ಜನರು ಖಡ್ಗಗಳಿಗೆ ಬಲಿಯಾಗುವರು. ನೆಬೂಕದ್ನೆಚ್ಚರನು ಸ್ವಲ್ಪವೂ ದಯೆ ತೋರುವದಿಲ್ಲ. ಆ ಜನರ ಸಲುವಾಗಿ ಅವನು ಮರುಗುವದಿಲ್ಲ.’
ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.