ಯೆರೆಮೀಯ 15:6 - ಪರಿಶುದ್ದ ಬೈಬಲ್6 ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ” ಇದು ಯೆಹೋವನ ನುಡಿ. “ಮತ್ತೆಮತ್ತೆ ನೀನು ನನ್ನನ್ನು ತ್ಯಜಿಸಿದೆ. ಆದ್ದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. ನಿನಗೆ ಸಲ್ಲಬೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಣಿದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು : ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನ ಈ ಮಾತನ್ನು ಕೇಳು - ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದೀ; ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ಕ್ಷವಿುಸಿ ಕ್ಷವಿುಸಿ ಸಾಕಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” ಎಂದು ಯೆಹೋವ ದೇವರು ಹೇಳುತ್ತಾರೆ. “ನೀನು ಹಿಂಜಾರಿದೆ. ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ. ಅಧ್ಯಾಯವನ್ನು ನೋಡಿ |
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.