ಯೆರೆಮೀಯ 15:8 - ಪರಿಶುದ್ದ ಬೈಬಲ್8 ಅನೇಕ ಹೆಂಗಸರು ತಮ್ಮ ಗಂಡಂದಿರನ್ನು ಕಳೆದುಕೊಳ್ಳುವರು. ಸಮುದ್ರದಡದಲ್ಲಿದ್ದ ಮರಳು ಕಣಗಳಿಗಿಂತ ವಿಧವೆಯರ ಸಂಖ್ಯೆ ಹೆಚ್ಚಾಗುವುದು. ಮಧ್ಯಾಹ್ನದಲ್ಲಿಯೇ ನಾನು ಬಾತುಕನನ್ನು ತರುವೆನು. ಆ ಘಾತುಕನು ಯೆಹೂದದ ತಾಯಂದಿರ ಮೇಲೆರಗುವನು. ನಾನು ಯೆಹೂದದ ಜನರಿಗೆ ನೋವನ್ನು ಮತ್ತು ಭಯವನ್ನು ತರುವೆನು; ಅತೀ ಶೀಘ್ರದಲ್ಲಿಯೇ ಹೀಗಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು. ಯುವಕರ ಮತ್ತು ತಾಯಂದಿರ ಮೇಲೆ ಕೊಳ್ಳೆ ಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು. ಅವರ ಮೇಲೆ ಕಳವಳವನ್ನು ಮತ್ತು ದಿಗಿಲನ್ನು ತಟ್ಟನೆ ಬೀಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರ ವಿಧವೆಯರು ನನ್ನ ಭಾಗಕ್ಕೆ ಕಡಲ ಮರಳಿನಂತೆ ಯುವಜನರಿಗೆ ಸಾವು ಬರಮಾಡಿದೆ ನಡುಜೀವನದಲ್ಲೆ. ಅವರ ತಾಯಂದಿರನ್ನು ದುಃಖಕ್ಕೆ ಈಡುಮಾಡಿದೆ ತಟ್ಟನೆ ಅವರನ್ನು ಕಳವಳಕ್ಕೂ ದಿಗಿಲಿಗೂ ಗುರಿಪಡಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು; ಯುವಕರ ತಾಯಿಗಳ ಮೇಲೆ ಕೊಳ್ಳೆಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು; ಅವರ ಮೇಲೆ ಕಳವಳವನ್ನೂ ದಿಗಿಲನ್ನೂ ತಟ್ಟನೆ ಬೀಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಕಿಗಿಂತ ಹೆಚ್ಚಾಗಿರುವರು, ಯುವಕರ ತಾಯಿಗಳ ಮೇಲೆ ನಾಶ ಮಾಡುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು, ಅವರ ಮೇಲೆ ಕಳವಳವನ್ನೂ, ದಿಗಿಲನ್ನೂ ತಟ್ಟನೆ ಬೀಳಿಸುವೆನು. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಗಂಡಸನ್ನು ಹಿಡಿದುಕೊಂಡು, “ನಮ್ಮ ಆಹಾರವನ್ನು ನಾವೇ ಸಂಪಾದಿಸಿಕೊಳ್ಳುತ್ತೇವೆ. ನಮ್ಮ ಬಟ್ಟೆಬರೆಗಳನ್ನು ನಾವೇ ಮಾಡಿಕೊಳ್ಳುತ್ತೇವೆ, ನಮ್ಮ ಕೆಲಸಗಳನ್ನೆಲ್ಲಾ ನಾವೇ ಮಾಡಿಕೊಳ್ಳುತ್ತೇವೆ. ನೀನು ನಮ್ಮನ್ನು ಮದುವೆಯಾಗು, ನಿನ್ನ ಹೆಸರನ್ನು ನಾವು ಇಟ್ಟುಕೊಳ್ಳುವಂತೆ ಮಾಡು. ದಯಮಾಡಿ ನಮ್ಮ ನಾಚಿಕೆಯನ್ನು ನಮ್ಮಿಂದ ತೊಲಗಿಸು” ಎಂದು ಹೇಳುವರು.