Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:12 - ಪರಿಶುದ್ದ ಬೈಬಲ್‌

12 ನೀವು ನಿಮ್ಮ ಪೂರ್ವಿಕರಿಗಿಂತ ಭಯಂಕರವಾದ ಪಾಪವನ್ನು ಮಾಡಿದ್ದೀರಿ. ನೀವು ಬಹಳ ಮೊಂಡರಾಗಿದ್ದೀರಿ. ನೀವು ನಿಮ್ಮ ಮನಸ್ಸಿಗೆ ಬಂದಂತೆ ಮಾಡುತ್ತಿದ್ದೀರಿ. ನೀವು ನನ್ನ ಆಜ್ಞೆಯನ್ನು ಪಾಲಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪೂರ್ವಿಕರಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನೀವಾದರೊ ನಿಮ್ಮ ಪೂರ್ವಜರಿಗಿಂತ ಹೆಚ್ಚು ಕೇಡನ್ನು ಮಾಡಿದ್ದೀರಿ. ನೀವೆಲ್ಲರು ನನ್ನ ಮಾತನ್ನು ಕೇಳದೆ ದುಷ್ಟ ಹೃದಯವುಳ್ಳ ಹಟಮಾರಿಗಳಂತೆ ನಡೆಯುತ್ತಾ ಬಂದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಗೋ, ನೀವೆಲ್ಲರೂ ನಿಮ್ಮ ದುಷ್ಟಹೃದಯದ ಹಟದಂತೆ ನಡೆಯುತ್ತಾ ನನ್ನನ್ನು ಕೇಳದೆ ನಿಮ್ಮ ಪಿತೃಗಳಿಗಿಂತ ಹೆಚ್ಚು ಕೇಡನ್ನು ಮಾಡಿದ್ದರಿಂದಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ. ಏಕೆಂದರೆ ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:12
22 ತಿಳಿವುಗಳ ಹೋಲಿಕೆ  

ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.


ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಅತಿ ಮೊಂಡರಾಗಿದ್ದು ಅವರ ತಂದೆಗಳಿಗಿಂತ ಹೆಚ್ಚಿನ ದುಷ್ಕೃತ್ಯಗಳನ್ನು ಮಾಡಿದರು.


ಯೆಹೂದದ ಜನರು ತಮ್ಮದೇ ಆದ ರೀತಿಯಲ್ಲಿ ಜೀವಿಸಿದರು. ಅವರು ಹಟಮಾರಿಗಳಾಗಿದ್ದರು. ಅವರು ಸುಳ್ಳುದೇವರಾದ ಬಾಳನನ್ನು ಅನುಸರಿಸಿದರು. ಅವರ ಪೂರ್ವಿಕರು ಸುಳ್ಳುದೇವರುಗಳ ಸೇವೆ ಮಾಡುವದನ್ನು ಅವರಿಗೆ ಕಲಿಸಿದರು.”


ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನೆಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ.


ಒಬ್ಬ ವ್ಯಕ್ತಿಯ ಅಂತರಂಗದಲ್ಲಿ ಈ ಕೆಟ್ಟ ಆಲೋಚನೆಗಳೆಲ್ಲವೂ ಆರಂಭವಾಗುತ್ತವೆ: ದುರಾಲೋಚನೆ, ಲೈಂಗಿಕಪಾಪ, ಕಳ್ಳತನ, ಕೊಲೆ,


“ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ನನ್ನ ಕಡೆಗೆ ಗಮನ ಕೊಡಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ಮನಸ್ಸಿಗೆ ಬಂದಂತೆ ನಡೆದುಕೊಂಡರು. ಅವರು ಒಳ್ಳೆಯವರಾಗಲಿಲ್ಲ. ಅವರು ಇನ್ನೂ ಕೆಟ್ಟವರಾದರು. ಅವರು ಹಿಂದಕ್ಕೆ ಸರಿದರು, ಮುಂದಕ್ಕೆ ಬರಲಿಲ್ಲ.


ಅವಿಧೇಯತೆಯು ಮಾಟಮಂತ್ರಗಳಷ್ಟೇ ಪಾಪಪೂರಿತವಾದುದು. ಮೊಂಡುತನದಿಂದ ತನ್ನ ಇಷ್ಟದಂತೆ ಮಾಡುವುದು ವಿಗ್ರಹಾರಾಧನೆಯಷ್ಟೇ ಪಾಪಪೂರಿತವಾದುದು. ನೀನು ಯೆಹೋವನ ಆಜ್ಞೆಗಳಿಗೆ ವಿಧೇಯನಾಗಲಿಲ್ಲ. ಈ ಕಾರಣದಿಂದ ಈಗ ಯೆಹೋವನು ನಿನ್ನನ್ನು ರಾಜನನ್ನಾಗಿ ಸ್ವೀಕರಿಸಿಕೊಳ್ಳುವುದಿಲ್ಲ” ಎಂದು ಸೌಲನಿಗೆ ಉತ್ತರಿಸಿದನು.


ಆದರೆ ಪ್ರತಿಯೊಬ್ಬ ನ್ಯಾಯಾಧೀಶನು ಮರಣಹೊಂದಿದಾಗ ಇಸ್ರೇಲರು ಪುನಃ ಪಾಪ ಮಾಡುತ್ತಿದ್ದರು ಮತ್ತು ತಮ್ಮ ಪೂರ್ವಿಕರಿಗಿಂತಲೂ ಭ್ರಷ್ಠರಾಗಿ ಸುಳ್ಳುದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬೀಳಲಾರಂಭಿಸುತ್ತಿದ್ದರು. ಇಸ್ರೇಲರು ತುಂಬ ಮೊಂಡರಾಗಿದ್ದು ತಮ್ಮ ದುರ್ನಡತೆಗಳನ್ನು ಬಿಡಲು ಸಿದ್ಧರಾಗಿರಲಿಲ್ಲ.


ಆದ್ದರಿಂದ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಯಾರೂ ಕೆಟ್ಟಬುದ್ಧಿಯುಳ್ಳವರಾಗದಂತೆ, ನಂಬದವರಾಗದಂತೆ, ಜೀವಸ್ವರೂಪನಾದ ದೇವರನ್ನು ತೊರೆಯದಂತೆ ಎಚ್ಚರಿಕೆಯಿಂದಿರಿ.


ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.


“ಮನುಷ್ಯನ ಬುದ್ಧಿಯು ವಂಚನೆ ಮಾಡುತ್ತದೆ. ಆ ಬುದ್ಧಿಯು ಅತೀ ವ್ಯಾಧಿಗ್ರಸ್ತವಾಗಿರಬಹುದು, ಯಾರಿಂದಲೂ ಬುದ್ಧಿಯ ನಿಜವಾದ ಸ್ವರೂಪವನ್ನರಿಯಲಾಗುವದಿಲ್ಲ.


ಒಬ್ಬ ಪಾಪಿಯು ನೂರು ದುಷ್ಕೃತ್ಯಗಳನ್ನು ಮಾಡಿ ಬಹುಕಾಲ ಬದುಕಬಹುದು. ಆದರೆ ದೇವರಲ್ಲಿ ಭಯಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು.


“ನಾನು ತಿಳಿಸಿದ ಶಾಪವನ್ನೆಲ್ಲಾ ಕೇಳಿಸಿಕೊಂಡು, ‘ನಾನು ನನ್ನ ಇಷ್ಟ ಬಂದಂತೆ ಮಾಡುತ್ತೇನೆ. ನನಗೆ ಯಾವ ಕೇಡೂ ಆಗುವುದಿಲ್ಲ’ ಎಂದು ಯಾವನಾದರೂ ಹೇಳಿಕೊಂಡು ತನ್ನನ್ನು ತಾನೇ ಸಮಾಧಾನಪಡಿಸಿಕೊಂಡರೆ, ಅವನು ತನಗೆ ಮಾತ್ರವಲ್ಲ ಎಲ್ಲಾ ಒಳ್ಳೆಯ ಜನರಿಗೂ ಕೇಡಾಗುವಂತೆ ಮಾಡುತ್ತಾನೆ.


ಯೆಹೋವನೇ, ನೀನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಮಾಡಿದ ವಾಗ್ದಾನವನ್ನು ನಿನ್ನ ನೆನಪಿಗೆ ತಂದುಕೋ. ಇವರು ಎಷ್ಟು ಹಠಮಾರಿಗಳೆಂಬುದನ್ನು ಮರೆತುಬಿಡು. ಅವರ ಪಾಪಮಾರ್ಗವನ್ನಾಗಲಿ ಪಾಪಗಳನ್ನಾಗಲಿ ನೋಡಬೇಡ.


ಈ ಯಜ್ಞಗಳ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಯಿತು. ಆಗ ಯೆಹೋವನು ತನ್ನೊಳಗೆ, “ಜನರನ್ನು ದಂಡಿಸುವುದಕ್ಕಾಗಿ ನಾನು ಇನ್ನೆಂದೂ ಭೂಮಿಯನ್ನು ಶಪಿಸುವುದಿಲ್ಲ. ಜನರು ಚಿಕ್ಕಂದಿನಿಂದಲೇ ಕೆಟ್ಟವರು. ಆದ್ದರಿಂದ ನಾನು ಇನ್ನೆಂದೂ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯನ್ನು ನಾಶಮಾಡುವುದಿಲ್ಲ; ಮತ್ತೆಂದೂ ನಾನು ಹೀಗೆ ಮಾಡುವುದಿಲ್ಲ.


ಭೂಮಿಯ ಮೇಲಿರುವ ಜನರು ತುಂಬ ದುಷ್ಟರಾಗಿದ್ದು ಯಾವಾಗಲೂ ಕೆಟ್ಟವಿಷಯಗಳ ಬಗ್ಗೆ ಆಲೋಚಿಸುತ್ತಿರುವುದನ್ನು ಯೆಹೋವನು ನೋಡಿದನು.


ಆದರೆ ಯೆಹೂದದ ಜನರು, ‘ಪ್ರಯತ್ನ ಮಾಡುವದರಿಂದ ಏನೂ ಪ್ರಯೋಜನವಿಲ್ಲ. ನಮ್ಮ ಮನಸ್ಸಿಗೆ ಬಂದಂತೆ ನಾವು ಮಾಡುತ್ತಿದ್ದೇವೆ. ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ದುಷ್ಟ ಮತ್ತು ಮೊಂಡುಮನಸ್ಸು ಹೇಳಿದಂತೆ ನಡೆಯುವೆವು’ ಎಂಬುದಾಗಿ ಉತ್ತರಿಸುವರು” ಎಂದನು.


ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ.


ದೇವರು ಹೇಳಿದ್ದೇನೆಂದರೆ, “ಇಸ್ರೇಲ್ ಜನರು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಆದ್ದರಿಂದ ನೀನು ಹೋಗಿ ಅವರಿಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಪೂರ್ವಿಕರು ಮಾಡಿದಂತೆಯೇ ನೀವು ನಿಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುತ್ತಿದ್ದೀರಿ. ನೀವು ಸೂಳೆಯರ ಹಾಗೆ ವರ್ತಿಸಿರುತ್ತೀರಿ. ನಿಮ್ಮ ಪೂರ್ವಿಕರು ಪೂಜಿಸಿದ ಆ ಭಯಂಕರವಾದ ವಿಗ್ರಹಗಳೊಂದಿಗೆ ಇರುವದಕ್ಕಾಗಿ ನನ್ನನ್ನು ನೀವು ತೊರೆದುಬಿಟ್ಟಿರಿ.


ಯೆಹೋವನು ಹೇಳುವುದೇನೆಂದರೆ, “ಯೆಹೂದ ಜನರ ಅನೇಕ ಅಪರಾಧಗಳಿಗಾಗಿ ಅವರನ್ನು ಖಂಡಿತವಾಗಿಯೂ ದಂಡಿಸುವೆನು. ಯಾಕೆಂದರೆ ಅವರು ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ. ನನ್ನ ಕಟ್ಟಳೆಗಳಿಗೆ ವಿಧೇಯರಾಗಲಿಲ್ಲ. ಅವರ ಪೂರ್ವಿಕರು ಸುಳ್ಳನ್ನು ನಂಬಿದರು. ಆ ಸುಳ್ಳುಗಳಿಂದ ಅವರು ನನ್ನನ್ನು ಹಿಂಬಾಲಿಸಲಿಲ್ಲ.


ನೀವು ನನ್ನ ಆಜ್ಞೆಗಳಿಗೆ ವಿಧೇಯರಾಗಲಿಲ್ಲ. ನಿಮ್ಮ ಪೂರ್ವಿಕರು ನನ್ನನ್ನು ಅನುಸರಿಸುವದನ್ನು ನಿಲ್ಲಿಸಿಬಿಟ್ಟಿದ್ದರು. ನೀವು ಹಿಂತಿರುಗಿ ನನ್ನ ಬಳಿಗೆ ಬಂದರೆ ನಾನು ನಿಮ್ಮ ಬಳಿಗೆ ಬರುವೆನು.” ಇದು ಸರ್ವಶಕ್ತನಾದ ಯೆಹೋವನ ನುಡಿ. “ನಾವು ಹೇಗೆ ಹಿಂತಿರುಗಿ ಬರಬಹುದು?” ಎಂದು ನೀವು ಕೇಳುತ್ತೀರೋ?


ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು