Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:13 - ಪರಿಶುದ್ದ ಬೈಬಲ್‌

13 ಆದ್ದರಿಂದ ನಾನು ನಿಮ್ಮನ್ನು ಈ ದೇಶದ ಹೊರಗೆ ಎಸೆಯುತ್ತೇನೆ. ನೀವು ಪರದೇಶಕ್ಕೆ ಸೆರೆಹೋಗುವಂತೆ ಮಾಡುತ್ತೇನೆ. ನೀವು ಮತ್ತು ನಿಮ್ಮ ಪೂರ್ವಿಕರು ಎಂದೂ ನೋಡದ ಪ್ರದೇಶಕ್ಕೆ ನೀವು ಹೋಗುವಿರಿ. ಆ ಪ್ರದೇಶದಲ್ಲಿ ನೀವು ನಿಮ್ಮ ಮನಸ್ಸಿಗೆ ಬಂದಷ್ಟು ಸುಳ್ಳುದೇವತೆಗಳ ಸೇವೆಮಾಡಬಹುದು. ನಾನು ನಿಮಗೆ ಸಹಾಯವನ್ನೂ ಮಾಡುವದಿಲ್ಲ, ಯಾವ ರೀತಿಯ ಒಲವನ್ನೂ ತೋರುವದಿಲ್ಲ.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಈ ಕಾರಣಗಳ ನಿಮಿತ್ತ ನೀವಾಗಲಿ ನಿಮ್ಮ ಪೂರ್ವಜರಾಗಲಿ ನೋಡದ ನಾಡಿಗೆ ನಿಮ್ಮನ್ನು ಇಲ್ಲಿಂದ ಎಸೆದುಬಿಡುವೆನು. ಅಲ್ಲಿ ಹಗಲಿರುಳೂ ಅನ್ಯದೇವತೆಗಳಿಗೆ ಸೇವೆಮಾಡುವಿರಿ, ನನ್ನ ದಯೆ ದಾಕ್ಷಿಣ್ಯ ಮಾತ್ರ ನಿಮಗೆ ದೊರಕದು".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನೀವಾಗಲಿ ನಿಮ್ಮ ಪಿತೃಗಳಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದ್ದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ, ನಿಮಗೂ, ನಿಮ್ಮ ಪಿತೃಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು. ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆ ಮಾಡುವಿರಿ ಮತ್ತು ನಾನು ನಿಮಗೆ ಕನಿಕರ ತೋರಿಸುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:13
21 ತಿಳಿವುಗಳ ಹೋಲಿಕೆ  

“ಯೆಹೋವನು ನಿಮ್ಮನ್ನೂ ನಿಮ್ಮ ಅರಸನನ್ನೂ ನೀವು ಅರಿಯದ ದೇಶಕ್ಕೆ ಅಟ್ಟಿಬಿಡುವನು. ನೀವಾಗಲಿ ನಿಮ್ಮ ಪೂರ್ವಿಕರಾಗಲಿ ಆ ದೇಶವನ್ನು ಎಂದೂ ನೋಡಲಿಲ್ಲ. ಅಲ್ಲಿ ಮರ, ಕಲ್ಲುಗಳಿಂದ ಮಾಡಿದ ಸುಳ್ಳುದೇವರನ್ನು ಆರಾಧಿಸುವಿರಿ.


ಯೆಹೂದದ ಜನರೇ, ನಾನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವೆನು. ಅವರು ನೀವೆಂದೂ ತಿಳಿಯದ ಪ್ರದೇಶದಿಂದ ಬಂದು ನಿಮ್ಮನ್ನು ಅಲ್ಲಿಗೆ ಸಾಗಿಸುವರು. ನನಗೆ ಅತಿಕೋಪ ಬಂದಿದೆ. ನನ್ನ ಕೋಪವು ಜ್ವಾಲೆಯಂತಿದೆ. ಆ ಜ್ವಾಲೆಯಿಂದ ನೀವು ಸುಟ್ಟುಹೋಗುವಿರಿ.”


ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. ಏಕೆಂದರೆ ನನಗೆ ತುಂಬಾ ಕೋಪ ಬಂದಿದೆ. ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.”


ನಾನು ಇಸ್ರೇಲರನ್ನು ಅವರಿಗೆ ಕೊಟ್ಟಿರುವ ದೇಶದಿಂದ ತೆಗೆದುಹಾಕುವೆನು; ನನ್ನ ಹೆಸರಿಗೋಸ್ಕರ ಪವಿತ್ರ ಮಾಡಿದ ಈ ದೇವಾಲಯವನ್ನು ತೊರೆದುಬಿಡುವೆನು. ಈ ದೇವಾಲಯದ ಬಗ್ಗೆ ಲೋಕದ ಜನರು ಗೇಲಿಮಾಡುವಂತೆ ಮಾಡುವೆನು.


ಯೆಹೋಯಾಚೀನನು ಎಸೆಯಲ್ಪಟ್ಟ ಒಡೆದ ಮಡಕೆಯಂತಿದ್ದಾನೆ. ಅವನು ಯಾರಿಗೂ ಬೇಡವಾಗದ ಮಡಕೆಯಂತಿದ್ದಾನೆ. ಯೆಹೋಯಾಚೀನನು ಮತ್ತು ಅವನ ಮಕ್ಕಳು ಏಕೆ ಹೊರಗೆ ಎಸೆಯಲ್ಪಡುವರು? ಅವರು ಪರದೇಶಕ್ಕೆ ಏಕೆ ಒಯ್ಯಲ್ಪಡುವರು?


ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’


ಯೆಹೋವನೇ, ನೀನು ಇಸ್ರೇಲರ ಆಶಾಕಿರಣ, ಕಷ್ಟಕಾಲದಲ್ಲಿ ಇಸ್ರೇಲನ್ನು ನೀನು ಕಾಪಾಡುವೆ. ಆದರೆ ಈಗ ನೀನು ಈ ದೇಶದಲ್ಲಿ ಪರದೇಶಿಯಂತೆ ಕಾಣುವೆ. ಕೇವಲ ಒಂದು ರಾತ್ರಿ ಮಾತ್ರ ಉಳಿಯುವ ಪ್ರಯಾಣಿಕನಂತೆ ಕಾಣುವೆ.


ಪ್ರವಾದಿಗಳು ಮತ್ತು ಯಾಜಕರು ತಾವು ಮಾಡುವ ದುಷ್ಕೃತ್ಯಗಳಿಗಾಗಿ ನಾಚಿಕೆಪಡಬೇಕು. ಆದರೆ ಅವರು ನಾಚಿಕೆಪಡುವದೇ ಇಲ್ಲ. ತಮ್ಮ ಪಾಪಕಾರ್ಯಗಳಿಗಾಗಿ ಸಂಕೋಚಪಡುವುದು ಸಹ ಅವರಿಗೆ ಗೊತ್ತಿಲ್ಲ. ಆದ್ದರಿಂದ ಬೇರೆಯವರಂತೆ ಅವರನ್ನೂ ಶಿಕ್ಷಿಸಲಾಗುವುದು. ನಾನು ಅವರನ್ನು ಶಿಕ್ಷಿಸಿದಾಗ ಅವರನ್ನು ನೆಲಕ್ಕೆ ಎಸೆಯಲಾಗುವದು” ಎಂದು ಯೆಹೋವನು ಅನ್ನುತ್ತಾನೆ.


ಯೆಹೂದದ ಜನರು ನಿನ್ನನ್ನು, ‘ಯೆರೆಮೀಯನೇ, ನಮ್ಮ ದೇವರಾದ ಯೆಹೋವನು ನಮಗೆ ಇಂಥಾ ಕೇಡನ್ನು ಏಕೆ ಮಾಡಿದನು’ ಎಂದು ಕೇಳಬಹುದು. ಆಗ ಅವರಿಗೆ ಹೀಗೆ ಉತ್ತರಕೊಡು: ‘ಯೆಹೂದದ ಜನರಾದ ನೀವು ಯೆಹೋವನನ್ನು ತೊರೆದಿದ್ದೀರಿ, ನಿಮ್ಮ ದೇಶದಲ್ಲಿ ನೀವು ಅನ್ಯರ ವಿಗ್ರಹಗಳ ಸೇವೆ ಮಾಡುತ್ತಿದ್ದೀರಿ. ಆದ್ದರಿಂದಲೇ ನೀವು ಪರದೇಶದಲ್ಲಿ ಪರದೇಶಿಯರ ಸೇವೆಯನ್ನು ಮಾಡುವಿರಿ.’”


ಆದ್ದರಿಂದ ತಮ್ಮ ಇಷ್ಟಾನುಸಾರ ಮಾಡಲೆಂದು ಅವರನ್ನು ಬಿಟ್ಟುಕೊಟ್ಟೆ. ಇಸ್ರೇಲ್ ತನ್ನ ಇಷ್ಟಾನುಸಾರ ಮಾಡಿತು.


ದೇವರು ಅವರ ಮೇಲೆ ಬಹಳವಾಗಿ ಸಿಟ್ಟುಗೊಂಡದ್ದರಿಂದ ಅವರ ದೇಶದಿಂದ ಅವರನ್ನು ಕಿತ್ತು ಅವರು ಈಗ ವಾಸಿಸುವ ಮತ್ತೊಂದು ದೇಶದಲ್ಲಿ ಅವರನ್ನಿರಿಸಿದನು.’


ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ಯೆಹೂದದ ಜನರಿಗಾಗಿ ಪ್ರಾರ್ಥಿಸಿ, ಬೇಡಿಕೊಳ್ಳಲು ಮೋಶೆಯೂ ಸಮುವೇಲನೂ ಇದ್ದಿದ್ದರೂ ನಾನು ಈ ಜನರ ಬಗ್ಗೆ ಮರುಕಪಡುತ್ತಿರಲಿಲ್ಲ. ಯೆಹೂದದ ಜನರನ್ನು ನನ್ನಿಂದ ದೂರ ಕಳುಹಿಸು. ಅವರಿಗೆ ಹೋಗಲು ಹೇಳು.


ನಾನು ನಿನ್ನನ್ನೂ ನಿನ್ನ ತಾಯಿಯನ್ನೂ ನಿಮ್ಮಿಬ್ಬರ ಜನ್ಮಸ್ಥಳವಲ್ಲದ ಬೇರೆ ದೇಶದಲ್ಲಿ ಎಸೆದುಬಿಡುತ್ತೇನೆ. ನೀನು ಮತ್ತು ನಿನ್ನ ತಾಯಿ ಆ ದೇಶದಲ್ಲಿ ಸತ್ತುಹೋಗುವಿರಿ.


ಬಾಬಿಲೋನ್ ರಾಜನು ಹಮಾತ್ ದೇಶದ ರಿಬ್ಲದಲ್ಲಿ ಅವರನ್ನೆಲ್ಲ ಕೊಂದುಹಾಕಿದನು. ಹೀಗೆ ಯೆಹೂದದ ಜನರನ್ನೆಲ್ಲ ಅವರ ದೇಶದಿಂದ ಸೆರೆಯಾಳುಗಳನ್ನಾಗಿಸಿ ಹಿಡಿದೊಯ್ದರು.


ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”


ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು