15 ಆಗ ಅವರು ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಎಲ್ಲಾ ದೇಶಗಳಿಂದಲೂ ಹೊರತಂದ ಯೆಹೋವನ ಜೀವದಾಣೆ.’ ಇಸ್ರೇಲರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ದೇಶಕ್ಕೆ ಮತ್ತೆ ಕರೆದುಕೊಂಡು ಬರುವೆನು. ಆದ್ದರಿಂದಲೇ ಜನರು ಹೀಗೆ ಹೇಳುವರು.”
15 ‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ.
15 ಬದಲಿಗೆ, ‘ಇಸ್ರಯೇಲರನ್ನು ಉತ್ತರ ದೇಶದಿಂದ ಹಾಗು ಅವರನ್ನು ತಾನು ತಳ್ಳಿಬಿಟ್ಟಿದ್ದ ಎಲ್ಲ ಸೀಮೆಗಳಿಂದ ಬಿಡಿಸಿ ಬರಮಾಡಿದ ಸರ್ವೇಶ್ವರನ ಜೀವದಾಣೆ’ ಎಂದು ಪ್ರಮಾಣ ಮಾಡುವರು. ನಾನು ಅವರ ಪೂರ್ವಜರಿಗೆ ದಯಪಾಲಿಸಿದ ನಾಡಿಗೆ ಅವರನ್ನು ಮರಳಿ ಬರಮಾಡುವೆನು.
15 ಇಸ್ರಾಯೇಲ್ಯರನ್ನು ಬಡಗಣ ದೇಶದಿಂದಲೂ ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು; ನಾನು ಅವರ ಪಿತೃಗಳಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ.
15 ‘ಆದರೆ ಯೆಹೋವ ದೇವರ ಜೀವದಾಣೆ, ಇಸ್ರಾಯೇಲರನ್ನು ಉತ್ತರ ದೇಶದಿಂದಲೂ, ನಾನು ಅವರನ್ನು ಅಟ್ಟಿಬಿಟ್ಟಿದ್ದ ಸಮಸ್ತ ದೇಶಗಳಿಂದಲೂ ಬರಮಾಡಿ, ನಾನು ಅವರ ಪಿತೃಗಳಿಗೆ ಕೊಟ್ಟಂಥ ಅವರ ದೇಶಕ್ಕೆ ಅವರನ್ನು ತಿರುಗಿ ಬರಮಾಡುವೆನು,’ ಎಂದು ಹೇಳುವ ದಿನಗಳು ಬರುವುವು.
‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
ನಾನು ಅವರನ್ನು ರಕ್ಷಿಸುವೆನು. ನಾನು ಅವರನ್ನು ಪುನಃ ಯೆಹೂದಕ್ಕೆ ಕರೆತರುವೆನು. ನಾನು ಅವರನ್ನು ಬೀಳಿಸುವದಿಲ್ಲ. ನಾನು ಅವರನ್ನು ಅಭಿವೃದ್ಧಿಪಡಿಸುತ್ತೇನೆ. ನಾನು ಅವರನ್ನು ಕೀಳುವದಿಲ್ಲ. ಅವರನ್ನು ನೆಟ್ಟು ಬೆಳೆಯುವದಕ್ಕೆ ಅವಕಾಶ ಮಾಡಿಕೊಡುವೆನು.
ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು ಹಿಂದಕ್ಕೆ ಕರೆತರುವೆನು. ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ ಅದರಲ್ಲಿ ವಾಸಿಸುವರು. ದ್ರಾಕ್ಷಿತೋಟವನ್ನು ಮಾಡಿ ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು. ತೋಟಗಳನ್ನು ಮಾಡಿ ಅದರ ಫಲಗಳನ್ನು ಭೋಗಿಸುವರು.
ನಾನು ಅವರ ಒಡೆಯನಾದ ಯೆಹೋವನೆಂದು ತಿಳಿಯುವರು. ಯಾಕೆಂದರೆ ನಾನು, ಅವರನ್ನು ಅವರ ಸ್ವದೇಶವನ್ನು ಬಿಟ್ಟು ಸೆರೆಹಿಡಿಯಲ್ಪಟ್ಟವರಾಗಿ ಬೇರೆ ದೇಶಗಳಿಗೆ ಹೋಗುವಂತೆ ಮಾಡಿದೆನು. ಆಮೇಲೆ ತಿರುಗಿ ಅವರನ್ನು ಒಟ್ಟುಗೂಡಿಸಿ ಅವರ ದೇಶಕ್ಕೆ ಹಿಂದಕ್ಕೆ ಕರೆಸಿದೆನು.
ನಮ್ಮ ದೇವರಾದ ಯೆಹೋವನು ನಮ್ಮನ್ನು ರಕ್ಷಿಸಿದನು! ಅನ್ಯಜನಾಂಗಗಳಿಂದ ನಮ್ಮನ್ನು ಬಿಡಿಸಿಕೊಂಡು ಬಂದನು. ಆಗ ನಾವು ಆತನ ಪವಿತ್ರ ಹೆಸರನ್ನು ಕೊಂಡಾಡುವುದಕ್ಕೂ ಆತನನ್ನು ಸಂಕೀರ್ತಿಸುವುದಕ್ಕೂ ಸಾಧ್ಯವಾಯಿತು.
ನಾನು ಇಸ್ರೇಲರನ್ನು ಉತ್ತರದ ದೇಶದಿಂದ ತರುವೆನು. ನಾನು ಜಗತ್ತಿನ ದೂರದೂರದ ಸ್ಥಳಗಳಿಂದ ಇಸ್ರೇಲರನ್ನು ಒಟ್ಟುಗೂಡಿಸುವೆನೆಂದು ತಿಳಿದುಕೊಳ್ಳಿರಿ. ಅವರಲ್ಲಿ ಕೆಲವರು ಕುರುಡರಾಗಿರುವರು; ಕುಂಟರಾಗಿರುವರು, ಕೆಲವು ಸ್ತ್ರೀಯರು ಗರ್ಭಿಣಿಯರಾಗಿದ್ದು ಹೆರಿಗೆಯ ದಿನಗಳು ತುಂಬಿದವರಾಗಿರುತ್ತಾರೆ. ಬಹಳಷ್ಟು ಜನರು ಹಿಂತಿರುಗಿಬರುತ್ತಾರೆ.
ಯೆಹೋವನು ಹೀಗೆಂದನು: “ನನ್ನ ಸೇವಕನಾದ ಯಾಕೋಬನೇ, ಭಯಪಡಬೇಡ! ಇಸ್ರೇಲೇ, ಅಂಜಬೇಡ, ನಾನು ನಿಮ್ಮನ್ನು ಆ ದೂರಪ್ರದೇಶದಿಂದ ರಕ್ಷಿಸುವೆನು. ಆ ದೂರದೇಶದಲ್ಲಿ ನೀವು ಬಂಧಿಗಳಾಗಿದ್ದೀರಿ, ಆದರೆ ನಾನು ನಿಮ್ಮ ವಂಶದವರನ್ನು ರಕ್ಷಿಸುತ್ತೇನೆ. ಅವರನ್ನು ಆ ನಾಡಿನಿಂದ ಮತ್ತೆ ಕರೆದುತರುತ್ತೇನೆ. ಯಾಕೋಬು ಮತ್ತೆ ನೆಮ್ಮದಿಯಿಂದ ಇರುವುದು. ಜನರು ಯಾಕೋಬನನ್ನು ಪೀಡಿಸುವದಿಲ್ಲ; ನನ್ನ ಜನರನ್ನು ಹೆದರಿಸುವ ಶತ್ರುಗಳಿರುವದಿಲ್ಲ.” ಇದು ಯೆಹೋವನ ನುಡಿ.
ಏಕೆಂದರೆ ನಾನು ನನ್ನ ಜನರಾದ ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ಸೆರೆವಾಸದಿಂದ ಕರೆದುಕೊಂಡು ಬರುವ ದಿನಗಳು ಬರುತ್ತಿವೆ.” ಈ ಸಂದೇಶವು ಯೆಹೋವನಿಂದ ಬಂದದ್ದು. “ಆ ಜನರನ್ನು ನಾನು ಅವರ ಪೂರ್ವಿಕರಿಗೆ ಕೊಟ್ಟ ಪ್ರದೇಶದಲ್ಲಿ ನೆಲಸುವಂತೆ ಮಾಡುತ್ತೇನೆ. ಆಗ ನನ್ನ ಜನರು ಆ ಪ್ರದೇಶದ ಒಡೆತನ ಪಡೆಯುವರು.”
ಮುಂದಿನ ದಿವಸಗಳಲ್ಲಿ ಯೆಹೋವನು ಯಾಕೋಬನ ಮೇಲೆ ಮತ್ತೆ ಪ್ರೀತಿತೋರುವನು. ಯೆಹೋವನು ಮತ್ತೆ ಇಸ್ರೇಲರನ್ನು ಆರಿಸುವನು. ಆ ಸಮಯದಲ್ಲಿ ಅವರ ದೇಶವನ್ನು ಅವರಿಗೆ ಹಿಂತಿರುಗಿಸುವನು. ಆಗ ಯೆಹೂದ್ಯರಲ್ಲದವರು ಯೆಹೂದ್ಯರೊಂದಿಗೆ ಸೇರಿಕೊಳ್ಳುವರು. ಅವರೆಲ್ಲರೂ ಒಂದೇ ವಂಶದವರಾಗುವರು. ಅದು ಯಾಕೋಬನ ವಂಶ.
“‘ಆದರೆ ಇಸ್ರೇಲನ್ನು ಪುನಃ ಅದರ ಹುಲ್ಲುಗಾವಲಿಗೆ ತರುವೆನು. ಅದು ಕರ್ಮೆಲ್ ಬೆಟ್ಟದ ಮೇಲೆ ಮತ್ತು ಬಾಷಾನಿನ ಪ್ರದೇಶದಲ್ಲಿ ಮೇಯುವದು. ಅದು ತಿಂದು ತೇಗುವದು. ಅದು ಎಫ್ರಾಯೀಮಿನ ಮತ್ತು ಗಿಲ್ಯಾದಿನ ಬೆಟ್ಟಗಳಲ್ಲಿ ತಿಂದು ತೃಪ್ತಿಪಡುವದು.’”
ಆದರೆ ಹೊಸ ಕಾಲ ಬರಲಿದೆ. ಆಗ, ‘ಇಸ್ರೇಲರನ್ನು ಉತ್ತರದ ನಾಡಿನಿಂದಲೂ ಅವರನ್ನು ಚದರಿಸಿಬಿಟ್ಟಿದ್ದ ಎಲ್ಲ ದೇಶಗಳಿಂದಲೂ ಹೊರತಂದ ಯೆಹೋವನಾಣೆ’ ಎಂದು ಹೇಳುವರು. ಆಗ ಇಸ್ರೇಲರು ಸ್ವದೇಶದಲ್ಲಿ ನೆಲಸುವರು.”
ಇದು ಯೆಹೋವನಿಂದ ಬಂದ ಸಂದೇಶ: “ಜನರು ಇನ್ನು ಮೇಲೆ ದೇವರ ಆಣೆಯನ್ನು ಹಳೆಯ ರೀತಿಯಲ್ಲಿ ಹೇಳಲಾರದ ಕಾಲ ಬರುತ್ತಿದೆ. ‘ಇಸ್ರೇಲರನ್ನು ಈಜಿಪ್ಟಿನಿಂದ ಹೊರತಂದ ಯೆಹೋವನ ಆಣೆ’ ಎಂಬುದು ದೇವರ ಆಣೆಯ ಹಳೆಯ ರೀತಿಯಾಗಿತ್ತು.
ನಾನು ನಿಮಗೆ ದೊರೆಯುವೆನು.” ಇದು ಯೆಹೋವನ ನುಡಿ. “ನಾನು ನಿಮ್ಮನ್ನು ನಿಮ್ಮ ಬಂಧನದಿಂದ ಬಿಡಿಸಿ ಕರೆದುತರುವೆನು. ನಾನು ಈ ಸ್ಥಳವನ್ನು ಬಿಡಲು ನಿಮಗೆ ಒತ್ತಾಯಿಸಿದೆ. ಆದರೆ ನಾನು ನಿಮ್ಮನ್ನು ಕಳುಹಿಸಿದ್ದ ಎಲ್ಲಾ ಜನಾಂಗಗಳಿಂದ ಮತ್ತು ಎಲ್ಲಾ ಸ್ಥಳಗಳಿಂದ ನಿಮ್ಮನ್ನು ಒಟ್ಟುಗೂಡಿಸಿ ಈ ಸ್ಥಳಕ್ಕೆ ಕರೆದು ತರುವೆನು.” ಇದು ಯೆಹೋವನ ನುಡಿ.
“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.
“ನಾನು ನನ್ನ ಕುರಿಗಳನ್ನು ಬೇರೆ ದೇಶಗಳಿಗೆ ಕಳುಹಿಸಿದೆ. ಆದರೆ ಉಳಿದ ನನ್ನ ಕುರಿಗಳನ್ನು ಒಂದೆಡೆ ಸೇರಿಸುವೆನು. ಅವುಗಳನ್ನು ಅವುಗಳ ಹುಲ್ಲುಗಾವಲಿಗೆ ತರುವೆನು. ಅವುಗಳಿಗೆ ಅನೇಕ ಮಕ್ಕಳಾಗಿ ಅವುಗಳ ಸಂಖ್ಯೆ ಬೆಳೆಯುವುದು.