Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:17 - ಪರಿಶುದ್ದ ಬೈಬಲ್‌

17 ಅವರು ಮಾಡುವ ಪಾಪಕೃತ್ಯಗಳು ನನಗೆ ಕಾಣಿಸುತ್ತಿವೆ. ಯೆಹೂದದ ಜನರು ತಾವು ಮಾಡುವದನ್ನು ನನ್ನಿಂದ ಮುಚ್ಚಿಡಲು ಸಾಧ್ಯವಿಲ್ಲ. ಅವರ ಪಾಪವು ನನಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಾಗಿ ಇಲ್ಲ, ಪ್ರತ್ಯಕ್ಷವಾಗೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅವರ ನಡತೆಯನ್ನೆಲ್ಲಾ ದೃಷ್ಟಿಸುತ್ತೇನೆ, ಅದು ನನ್ನ ಮುಖಕ್ಕೆ ಮರೆಯಾಗಿಲ್ಲ; ಅವರ ಅಧರ್ಮವು ನನಗೆ ಗುಟ್ಟಲ್ಲ, ಪ್ರತ್ಯಕ್ಷದಲ್ಲೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಇವೆ. ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ, ಅವರ ಅಕ್ರಮವು ನನ್ನ ದೃಷ್ಟಿಗೆ ಅಡಗಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:17
25 ತಿಳಿವುಗಳ ಹೋಲಿಕೆ  

ಯೆಹೋವನ ದೃಷ್ಟಿಗೆ ಪ್ರತಿಯೊಂದೂ ಕಾಣುತ್ತದೆ. ಆತನು ಕೆಡುಕರನ್ನೂ ಒಳ್ಳೆಯವರನ್ನೂ ಗಮನಿಸುತ್ತಿದ್ದಾನೆ.


ಒಬ್ಬನು ನನಗೆ ಕಾಣದಂತೆ ಗುಪ್ತವಾದ ಸ್ಥಳದಲ್ಲಿ ಅಡಗಿಕೊಳ್ಳಲು ಪ್ರಯತ್ನಿಸಿದರೂ ನಾನು ಅವನನ್ನು ಸರಾಗವಾಗಿ ನೋಡಬಲ್ಲೆನು. ನಾನು ಭೂಮ್ಯಾಕಾಶಗಳ ಎಲ್ಲಾ ಕಡೆಗಳಲ್ಲೂ ಇದ್ದೇನೆ.” ಯೆಹೋವನೇ ಇವುಗಳನ್ನು ಹೇಳಿದ್ದಾನೆ.


ಮನುಷ್ಯನ ಮಾರ್ಗಗಳು ಯೆಹೋವನಿಗೆ ಕಾಣುತ್ತಲೇ ಇವೆ; ಯೆಹೋವನು ಅವುಗಳನ್ನು ಪರೀಕ್ಷಿಸುತ್ತಾನೆ.


ನಮ್ಮ ಪಾಪಗಳೆಲ್ಲಾ ನಿನಗೆ ತಿಳಿದಿವೆ. ದೇವರೇ, ನಮ್ಮ ರಹಸ್ಯಪಾಪಗಳೆಲ್ಲಾ ನಿನ್ನ ಮುಂದೆ ಬಟ್ಟಬಯಲಾಗಿವೆ.


ದೇವರ ದೃಷ್ಟಿಗೆ ಯಾವುದೂ ಮುಚ್ಚುಮರೆಯಾಗಿಲ್ಲ. ಆತನ ಕಣ್ಣೆದುರಿನಲ್ಲಿ ಪ್ರತಿಯೊಂದೂ ತೆರೆಯಲ್ಪಟ್ಟು ಬಟ್ಟಬಯಲಾಗಿವೆ. ನಾವು ನಮ್ಮ ಜೀವಿತದ ಬಗ್ಗೆ ಲೆಕ್ಕ ಒಪ್ಪಿಸಬೇಕಾಗಿರುವುದು ಆತನಿಗೇ.


ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.


ನೀನು ಮಹತ್ತರವಾದ ಯೋಜನೆಗಳನ್ನು ಹಾಕಿ ಮಹತ್ಕಾರ್ಯಗಳನ್ನು ಮಾಡುವೆ. ಜನರು ಮಾಡುವ ಎಲ್ಲವನ್ನೂ ನೀನು ನೋಡುವೆ. ಒಳ್ಳೆಯದನ್ನು ಮಾಡುವವರಿಗೆ ನೀನು ಪ್ರತಿಫಲಗಳನ್ನು ಕೊಡುವೆ. ಕೆಟ್ಟದ್ದನ್ನು ಮಾಡುವವರನ್ನು ನೀನು ದಂಡಿಸುವೆ. ಅವರು ಯಾವುದಕ್ಕೆ ಅರ್ಹರೊ ಅದನ್ನು ಕೊಡುವೆ.


ದೇವರು ಲೋಕವನ್ನೆಲ್ಲಾ ದೃಷ್ಟಿಸಿ ನೋಡಿ ತನ್ನ ನಂಬಿಗಸ್ತರನ್ನು ಕಂಡುಕೊಂಡು ಅವರನ್ನು ಬಲಿಷ್ಠರನ್ನಾಗಿ ಮಾಡುವನು. ಆಸನೇ, ನೀನು ಮೂರ್ಖ ಕೆಲಸ ಮಾಡಿದೆ. ಇಂದಿನಿಂದ ಯಾವಾಗಲೂ ನಿನಗೆ ಯುದ್ಧಗಳಿರುತ್ತವೆ.”


ಅದಕ್ಕೆ ದೇವರು, “ಇಸ್ರೇಲ್ ಮತ್ತು ಯೆಹೂದ ಜನರ ದೋಷವು ಬಹಳ ಹೆಚ್ಚಾಗಿದೆ. ಈ ದೇಶದಲ್ಲಿ ಎಲ್ಲೆಲ್ಲಿಯೂ ಕೊಲೆಗಳು ನಡೆಯುತ್ತಿವೆ. ಈ ನಗರವು ಅಪರಾಧಗಳಿಂದ ತುಂಬಿಹೋಗಿದೆ. ಯಾಕೆಂದರೆ ಜನರು ಹೀಗೆಂದುಕೊಳ್ಳುತ್ತಿದ್ದಾರೆ, ‘ಯೆಹೋವನು ಈ ದೇಶವನ್ನು ಬಿಟ್ಟುಹೋಗಿದ್ದಾನೆ. ನಾವು ಮಾಡುತ್ತಿರುವಂಥದ್ದನ್ನು ಅವನು ನೋಡುವುದಿಲ್ಲ.’


ಯೆಹೋವನಿಗೆ ತಮ್ಮ ಆಲೋಚನೆಗಳು ತಿಳಿಯಬಾರದೆಂದು ಕುತಂತ್ರೋಪಾಯಗಳನ್ನು ಮಾಡಿ, ಕತ್ತಲೆಯಲ್ಲಿ ದುಷ್ಕೃತ್ಯಗಳನ್ನು ಮಾಡುತ್ತಾ, “ನಮ್ಮನ್ನು ಯಾರು ನೋಡಬಲ್ಲರು, ನಮ್ಮನ್ನು ಯಾರು ಗುರುತಿಸಬಲ್ಲರು?” ಎಂದುಕೊಳ್ಳುವವರ ಗತಿಯನ್ನು ಏನು ಹೇಳಲಿ.


ನಾನು ಎಲ್ಲಿಗೇ ಹೋಗುತ್ತಿದ್ದರೂ ಎಲ್ಲೇ ಮಲಗಿದ್ದರೂ ನಿನಗೆ ತಿಳಿದಿರುತ್ತದೆ. ನನ್ನ ಕಾರ್ಯಗಳೆಲ್ಲಾ ನಿನಗೆ ತಿಳಿದಿದೆ.


ಆಗ ದೇವರು ನನಗೆ, “ನರಪುತ್ರನೇ, ಇಸ್ರೇಲಿನ ಹಿರಿಯರು ಕತ್ತಲೆಯಲ್ಲಿ ಮಾಡುತ್ತಿರುವುದು ನಿನಗೆ ಕಾಣುತ್ತಿದೆಯೋ? ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ವಿಶೇಷ ಕೋಣಿಯಿದೆ. ಅದರೊಳಗೆ ಅವರ ದೇವರ ವಿಗ್ರಹಗಳನ್ನಿಟ್ಟುಕೊಂಡಿದ್ದಾರೆ. ಅವರು, ‘ಯೆಹೋವನು ನಮ್ಮನ್ನು ನೋಡುವದಿಲ್ಲ. ಆತನು ಈ ದೇಶವನ್ನು ತೊರೆದುಬಿಟ್ಟಿದ್ದಾನೆ’ ಎಂದು ತಮ್ಮೊಳಗೆ ಹೇಳಿಕೊಳ್ಳುತ್ತಿದ್ದಾರೆ” ಎಂದನು.


ನನ್ನ ಪಾಪಗಳನ್ನು ನೋಡಬೇಡ! ಅವುಗಳನ್ನೆಲ್ಲ ಅಳಿಸಿಬಿಡು!


ಆ ಪಾಪಗಳನ್ನು ಯೆಹೋವನು ಯಾವಾಗಲೂ ಜ್ಞಾಪಕಮಾಡಿಕೊಳ್ಳಲಿ; ಭೂಮಿಯ ಮೇಲೆ ಅವರ ನೆನಪೇ ಉಳಿಯದಂತೆ ಯೆಹೋವನು ಮಾಡಲಿ.


ನೀನು ಚೌಳನಿಂದ ತೊಳೆದುಕೊಂಡರೂ ಹೆಚ್ಚು ಸೋಪನ್ನು ಉಪಯೋಗಿಸಿದರೂ ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನುತ್ತಾನೆ ಯೆಹೋವನು.


ಆ ಪ್ರವಾದಿಗಳಿಬ್ಬರು ಇಸ್ರೇಲಿನಲ್ಲಿ ಹೆಚ್ಚಿನ ದುರಾಚಾರವನ್ನು ನಡೆಸಿದರು. ಅವರು ತಮ್ಮ ನೆರೆಯವರ ಹೆಂಡತಿಯರೊಂದಿಗೆ ವ್ಯಭಿಚಾರ ಮಾಡಿದರು. ಅವರು ಸುಳ್ಳುಗಳನ್ನು ಹೇಳಿದರು. ಆ ಸುಳ್ಳುಗಳನ್ನು ಯೆಹೋವನಾದ ನನ್ನ ಸಂದೇಶವೆಂದು ಹೇಳಿದರು. ಹಾಗೆ ಮಾಡಲು ನಾನು ಅವರಿಗೆ ಹೇಳಿಲ್ಲ, ಅವರು ಏನು ಮಾಡಿದ್ದಾರೆಂಬುದನ್ನು ನಾನು ಬಲ್ಲೆ. ಅದಕ್ಕೆ ನಾನೇ ಸಾಕ್ಷಿ.” ಇದು ಯೆಹೋವನ ಸಂದೇಶ.


“ಆ ಸಮಯಗಳಲ್ಲಿ ನಾನು ದೀಪವನ್ನು ಹಚ್ಚಿ ಜೆರುಸಲೇಮಿನಲ್ಲಿ ಹುಡುಕಾಡುವೆನು. ತಮ್ಮ ಸ್ವಂತ ರೀತಿಯಲ್ಲಿ ನಡೆದು ತೃಪ್ತಿಯಾಗಿರುವ ಜನರನ್ನು ಕಂಡುಕೊಳ್ಳುವೆನು. ಅವರು ಹೇಳುವುದೇನೆಂದರೆ, ‘ಯೆಹೋವನು ಏನೂ ಮಾಡುವುದಿಲ್ಲ. ಅವನು ಸಹಾಯವನ್ನೂ ಮಾಡುವುದಿಲ್ಲ. ಜನರಿಗೆ ಕೆಡುಕನ್ನೂ ಮಾಡುವುದಿಲ್ಲ.’ ಅಂಥವರನ್ನು ನಾನು ಹಿಡಿದು ಶಿಕ್ಷಿಸುವೆನು.


ಒಂದು ಸಣ್ಣ ರೀತಿಯ ಪ್ರಾರಂಭಕ್ಕೆ ಜನರು ನಾಚುವುದಿಲ್ಲ. ಜೆರುಬ್ಬಾಬೆಲನು ನೂಲುಗುಂಡು ಹಿಡಿದುಕೊಂಡು ಸಂಪೂರ್ಣವಾದ ಆಲಯವನ್ನು ಅಳತೆ ಮಾಡುವಾಗ ಜನರು ಅತಿಯಾಗಿ ಸಂತೋಷಿಸುವರು. ಈಗ ಆ ಕಲ್ಲಿನ ಏಳು ಬದಿಗಳು ಯೆಹೋವನ ಕಣ್ಣುಗಳು ಎಲ್ಲಾ ದಿಕ್ಕುಗಳನ್ನು ನೋಡುತ್ತಿರುವುದನ್ನು ಸೂಚಿಸುತ್ತವೆ. ಅವು ಭೂಲೋಕದಲ್ಲಿರುವ ಎಲ್ಲಾ ಸಂಗತಿಗಳನ್ನು ನೋಡುತ್ತಿವೆ.”


ನಾನು ಪಾಪ ಮಾಡಿದರೆ ನೀನು ನನ್ನನ್ನು ಗಮನಿಸುವೆ; ನಾನು ಮಾಡಿದ ತಪ್ಪಿಗಾಗಿ ನನ್ನನ್ನು ಶಿಕ್ಷಿಸುವೆ.


ನಾನು ಮಾಡುವ ಪ್ರತಿಯೊಂದು ದೇವರಿಗೆ ಗೊತ್ತು ಮತ್ತು ನಾನಿಡುವ ಪ್ರತಿಯೊಂದು ಹೆಜ್ಜೆಯನ್ನೂ ಆತನು ಗಮನಿಸುವನು.


ಅವರೆಲ್ಲರ ಮನುಸ್ಸುಗಳನ್ನು ಸೃಷ್ಟಿಸಿದವನು ಆತನೇ. ಅವರೆಲ್ಲರ ಆಲೋಚನೆಗಳು ಆತನಿಗೆ ತಿಳಿದಿವೆ.


“ಆ ಜನರಲ್ಲಿ ಕೆಟ್ಟ ಯೋಜನೆಗಳು ಇದ್ದು ಕೆಟ್ಟದ್ದನ್ನೇ ಮಾಡುವವರಾಗಿದ್ದಾರೆ. ಅದಕ್ಕಾಗಿ ನಾನು ಅವರನ್ನು ಶಿಕ್ಷಿಸಲು ಬರುತ್ತಿದ್ದೇನೆ. ನಾನು ಎಲ್ಲಾ ಜನಾಂಗಗಳನ್ನೂ ಎಲ್ಲಾ ಜನರನ್ನೂ ಒಟ್ಟುಗೂಡಿಸುವೆನು. ಎಲ್ಲಾ ಜನರು ಒಟ್ಟುಗೂಡಿ ನನ್ನ ಸಾಮರ್ಥ್ಯವನ್ನು ನೋಡುವರು.


ಈ ಪವಿತ್ರ ಆಲಯವನ್ನು ನನ್ನ ಹೆಸರಿನಿಂದ ಕರೆಯಲಾಗಿದೆ. ಈ ಆಲಯವು ನಿಮ್ಮ ದೃಷ್ಟಿಯಲ್ಲಿ ಕೇವಲ ಕಳ್ಳರು ಅಡಗುವ ಸ್ಥಳವಾಯಿತೇ? ನಾನು ನಿಮ್ಮ ವ್ಯವಹಾರವನ್ನೆಲ್ಲಾ ನೋಡುತ್ತಿದ್ದೇನೆ’” ಎಂಬುದು ಯೆಹೋವನಾದ ನನ್ನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು