Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:2 - ಪರಿಶುದ್ದ ಬೈಬಲ್‌

2 “ಯೆರೆಮೀಯನೇ, ನೀನು ಮದುವೆ ಮಾಡಿಕೊಳ್ಳಬಾರದು. ನೀನು ಇಲ್ಲಿ ಮಕ್ಕಳನ್ನು ಹೊಂದಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಮದುವೆಯಾಗಬೇಡ, ಗಂಡು ಮತ್ತು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ಹುಟ್ಟದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಮದುವೆಯಾಗಬೇಡ, ಗಂಡು ಅಥವಾ ಹೆಣ್ಣು ಮಕ್ಕಳು ನಿನಗೆ ಈ ಸ್ಥಳದಲ್ಲಿ ಹುಟ್ಟದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಮದುವೆಯಾಗಬೇಡ, ಗಂಡು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ನಿನಗೆ ಹುಟ್ಟದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಮದುವೆಯಾಗಬೇಡ. ನಿನಗೆ ಪುತ್ರರಾಗಲಿ, ಪುತ್ರಿಯರಾಗಲಿ ಈ ಸ್ಥಳದಲ್ಲಿ ಹುಟ್ಟದಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:2
9 ತಿಳಿವುಗಳ ಹೋಲಿಕೆ  

‘ಬಂಜೆಯರೇ ಭಾಗ್ಯವಂತರು! ಹೆರದವಳೇ ಹಾಲುಕುಡಿಸದವಳೇ ಭಾಗ್ಯವಂತಳು’ ಎಂದು ಜನರು ಹೇಳುವ ಸಮಯ ಬರುತ್ತದೆ.


ಆ ಕಾಲದಲ್ಲಿ, ಗರ್ಭಿಣಿ ಸ್ತ್ರೀಯರಿಗೂ ಚಿಕ್ಕ ಕೂಸುಗಳಿರುವವರಿಗೂ ಬಹಳ ಗೋಳಾಟ ಇರುವುದು. ಏಕೆಂದರೆ ಈ ದೇಶವು ಮಹಾವಿಪತ್ತಿಗೆ ಈಡಾಗುವುದು. ದೇವರು ಈ ಜನರ (ಯೆಹೂದ್ಯರ) ವಿಷಯದಲ್ಲಿ ಕೋಪಗೊಂಡಿರುವುದರಿಂದ


ಆದ್ದರಿಂದ ಲೋಟನು ಹೊರಗೆ ಹೋಗಿ, ತನ್ನ ಹೆಣ್ಣುಮಕ್ಕಳೊಡನೆ ನಿಶ್ಚಿತಾರ್ಥವಾಗಿದ್ದ ಅಳಿಯಂದಿರೊಡನೆ ಮಾತಾಡಿ, “ಬೇಗನೆ ಈ ಪಟ್ಟಣವನ್ನು ಬಿಟ್ಟು ಹೊರಡಿರಿ; ಯೆಹೋವನು ಈ ಪಟ್ಟಣವನ್ನು ನಾಶಮಾಡುವನು” ಎಂದು ಹೇಳಿದನು. ಲೋಟನ ಈ ಮಾತು ಅವರಿಗೆ ತಮಾಷೆಯಂತೆ ಕಂಡಿತು.


“ಆ ಸಮಯದಲ್ಲಿ ಗರ್ಭಿಣಿಯರಿಗೂ ಮೊಲೆಕೂಸುಗಳಿರುವ ಸ್ತ್ರೀಯರಿಗೂ ಎಂಥಾ ಗೋಳಾಟ!


ನನಗೆ ಯೆಹೋವನಿಂದ ಈ ಸಂದೇಶ ಬಂದಿತು:


ಯೆಹೂದ ಪ್ರದೇಶದಲ್ಲಿ ಹುಟ್ಟಿದ ಮಕ್ಕಳ ಕುರಿತಾಗಿಯೂ ಅದರ ತಂದೆತಾಯಿಗಳ ಕುರಿತಾಗಿಯೂ ಯೆಹೋವನು ಹೀಗೆ ಹೇಳುತ್ತಾನೆ.


ಮದುವೆ ಮಾಡಿಕೊಳ್ಳಿರಿ; ಗಂಡು ಮತ್ತು ಹೆಣ್ಣುಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೂ ನಿಮ್ಮ ಹೆಣ್ಣುಮಕ್ಕಳಿಗೂ ಮದುವೆ ಮಾಡಿರಿ. ಅವರಿಗೂ ಗಂಡು ಮತ್ತು ಹೆಣ್ಣು ಮಕ್ಕಳಾಗಲಿ. ಅನೇಕ ಮಕ್ಕಳನ್ನು ಹೆತ್ತು ಬಾಬಿಲೋನಿನಲ್ಲಿ ಬಹುಸಂಖ್ಯಾತರಾಗಿ. ಅಲ್ಪಸಂಖ್ಯಾತರಾಗಬೇಡಿ.


ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು