Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:20 - ಪರಿಶುದ್ದ ಬೈಬಲ್‌

20 ಜನರು ನಿಜವಾದ ದೇವರುಗಳನ್ನು ಮಾಡಬಲ್ಲರೇ? ಇಲ್ಲ, ಅವರು ವಿಗ್ರಹಗಳನ್ನು ಮಾಡಬಹುದು. ಆದರೆ ಆ ವಿಗ್ರಹಗಳು ನಿಜವಾದ ದೇವರುಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮನುಷ್ಯ ಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೆ? ಕಲ್ಪಿಸಿಕೊಂಡರೆ ಅವು ದೇವರುಗಳೇ ಅಲ್ಲ,’ ಎಂದು ನಿವೇದಿಸುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮನುಷ್ಯಮಾತ್ರದವನು ದೇವರುಗಳನ್ನು ಕಲ್ಪಿಸಿಕೊಳ್ಳಬಲ್ಲನೇ? ಇವು ದೇವರುಗಳೇ ಅಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಮನುಷ್ಯನು ದೇವರುಗಳನ್ನು ತನಗೆ ಮಾಡುವುದುಂಟೇ? ಹಾಗೆ ಮಾಡಿಕೊಂಡರೂ ಅವು ದೇವರುಗಳಲ್ಲ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:20
12 ತಿಳಿವುಗಳ ಹೋಲಿಕೆ  

ಅಶ್ಶೂರದ ಅರಸರು ಆ ಜನಾಂಗಗಳ ದೇವರುಗಳನ್ನು ಸುಟ್ಟುಹಾಕಿದರು. ಆದರೆ ಆ ದೇವರುಗಳು ಸತ್ಯವಾದುವುಗಳಲ್ಲ. ಅವುಗಳು ಮನುಷ್ಯರು ಕಲ್ಲಿನಿಂದ ಮತ್ತು ಮರದಿಂದ ಕೆತ್ತಿದ ವಿಗ್ರಹಗಳಾಗಿದ್ದವು. ಆದ್ದರಿಂದ ಅಶ್ಶೂರದ ಅರಸರು ಅವುಗಳನ್ನು ನಾಶಮಾಡಲು ಸಾಧ್ಯವಾಯಿತು.


ಪೂರ್ವಕಾಲದಲ್ಲಿ ನೀವು ದೇವರನ್ನು ತಿಳಿಯದೆ ಸುಳ್ಳು ದೇವರುಗಳಿಗೆ ಗುಲಾಮರಾಗಿದ್ದಿರಿ.


ಯಾವ ಜನಾಂಗವಾದರೂ ಎಂದಾದರೂ ತಮ್ಮ ಹಳೆಯ ದೇವರುಗಳನ್ನು ಬದಲಾಯಿಸಿ ಹೊಸ ದೇವರುಗಳನ್ನು ಪಡೆಯಿತೇ? ಇಲ್ಲ. (ಅವರ ದೇವರುಗಳು ನಿಜವಾದ ದೇವರುಗಳೇ ಅಲ್ಲ.) ಆದರೆ ನನ್ನ ಜನರು ತಮ್ಮ ಮಹಿಮಾಶಾಲಿಯಾದ ದೇವರನ್ನು ಅಪ್ರಯೋಜಕವಾದ ವಿಗ್ರಹಗಳೊಂದಿಗೆ ಬದಲಾಯಿಸಿಕೊಂಡಿದ್ದಾರೆ.


ನಾವು ನಿಮಗೆ ಸತ್ಯಸುವಾರ್ತೆಯನ್ನು ತಿಳಿಸಿದೆವು. ಆದ್ದರಿಂದ ನಾವೇ ಆಗಲಿ, ಪರಲೋಕದ ದೇವದೂತರೇ ಆಗಲಿ ಮತ್ತೊಂದು ಸುವಾರ್ತೆಯನ್ನು ತಿಳಿಸಿದರೆ ಶಾಪಗ್ರಸ್ತರಾಗಲಿ.


ಆದರೆ ಪೌಲ ಎಂಬುವನು ಏನು ಮಾಡುತ್ತಿದ್ದಾನೆಂಬುದನ್ನು ನೋಡಿರಿ! ಅವನು ಏನು ಹೇಳುತ್ತಿದ್ದಾನೆಂಬುದನ್ನು ಕೇಳಿರಿ! ಪೌಲನು ಅನೇಕ ಜನರ ಮೇಲೆ ಪ್ರಭಾವಬೀರಿ ಅವರನ್ನು ಪರಿವರ್ತಿಸಿದ್ದಾನೆ. ಅವನು ಎಫೆಸದಲ್ಲಿಯೂ ಏಷ್ಯಾ ದೇಶದ ಎಲ್ಲಾ ಕಡೆಗಳಲ್ಲಿಯೂ ಹೀಗೆಯೇ ಮಾಡಿದ್ದಾನೆ. ಮನುಷ್ಯರು ತಯಾರಿಸುವ ದೇವರುಗಳು ನಿಜವಾದ ದೇವರುಗಳಲ್ಲ ಎಂದು ಹೇಳುತ್ತಿದ್ದಾನೆ.


ಹಮಾತಿನ, ಅರ್ಪಾದಿನ ದೇವರೆಲ್ಲಿ? ಅವರು ಸೋತುಹೋದರು. ಸೆಫರ್ವಯಿಮಿನ ದೇವರುಗಳೆಲ್ಲಿ? ಅವರು ಸಮಾರ್ಯವನ್ನು ನನ್ನ ಬಲದಿಂದ ರಕ್ಷಿಸಿದರೋ? ಇಲ್ಲ!


“ಯೆಹೂದವೇ, ನಾನು ನಿನ್ನನ್ನು ಏಕೆ ಕ್ಷಮಿಸಬೇಕು? ಒಂದು ಕಾರಣವನ್ನಾದರೂ ಕೊಡು. ನಿನ್ನ ಮಕ್ಕಳು ನನ್ನನ್ನು ತೊರೆದಿದ್ದಾರೆ. ದೇವರುಗಳೇ ಅಲ್ಲದ ವಿಗ್ರಹಗಳಿಗೆ ಅವರು ಹರಕೆ ಹೊತ್ತಿದ್ದಾರೆ. ನಾನು ನಿನ್ನ ಮಕ್ಕಳಿಗೆ ಬೇಕಾದದ್ದನ್ನು ಕೊಟ್ಟೆ. ಆದರೂ ಅವರು ನನಗೆ ನಂಬಿಗಸ್ತರಾಗಿ ಉಳಿಯಲಿಲ್ಲ. ಅವರು ತಮ್ಮ ಹೆಚ್ಚಿನ ಸಮಯವನ್ನು ವೇಶ್ಯೆಯರ ಮನೆಗಳಲ್ಲಿ ಕಳೆದರು.


ಅರಸನಾದ ನೆಬೂಕದ್ನೆಚ್ಚರನು ಒಂದು ಬಂಗಾರದ ವಿಗ್ರಹವನ್ನು ಮಾಡಿಸಿದ್ದನು. ಆ ವಿಗ್ರಹವು ಅರವತ್ತು ಮೊಳ ಎತ್ತರವಾಗಿತ್ತು. ಆರು ಮೊಳ ಅಗಲವಾಗಿತ್ತು. ಆ ವಿಗ್ರಹವನ್ನು ಬಾಬಿಲೋನ್ ಪ್ರಾಂತ್ಯದ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.


ಅವರು ಆ ದೇಶಗಳ ದೇವರುಗಳನ್ನು ಬೆಂಕಿಯಲ್ಲಿ ಎಸೆದರು. ಆದರೆ ಅವು ನಿಜವಾದ ದೇವರುಗಳಲ್ಲ. ಅವುಗಳು ಮಾನವರಿಂದ ಮರ ಮತ್ತು ಕಲ್ಲುಗಳಿಂದ ನಿರ್ಮಿತವಾಗಿದ್ದವು. ಆದಕಾರಣವೇ ಅಶ್ಶೂರದ ರಾಜರುಗಳು ಅವುಗಳನ್ನು ನಾಶಗೊಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು