Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:21 - ಪರಿಶುದ್ದ ಬೈಬಲ್‌

21 “ವಿಗ್ರಹಗಳನ್ನು ಮಾಡುವ ಜನರಿಗೆ ನಾನು ಪಾಠ ಕಲಿಸುತ್ತೇನೆ. ಈಗಲೇ ನಾನು ಅವರಿಗೆ ನನ್ನ ಶಕ್ತಿಯ ಬಗ್ಗೆ ಮತ್ತು ನನ್ನ ಬಲದ ಬಗ್ಗೆ ಕಲಿಸುವೆನು. ಆಗ ನಾನು ದೇವರೆಂಬುದು ಅವರಿಗೆ ತಿಳಿಯುವುದು. ನಾನೇ ಯೆಹೋವನು ಎಂಬುದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಈ ನಿಮಿತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು “ಯೆಹೋವ” ಎಂದು ಅವರಿಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಸರ್ವೇಶ್ವರ : “ಆದುದರಿಂದ ಇಗೋ, ಇಂದೊಮ್ಮೆ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು. ಚೆನ್ನಾಗಿ ಗ್ರಹಿಸುವಂತೆ ಮಾಡುವೆನು. ನನ್ನ ನಾಮಧೇಯ ಸರ್ವೇಶ್ವರ ಎಂದೇ ಅವರು ಗುರುತು ಹಚ್ಚುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಈ ನಿವಿುತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು ಯೆಹೋವನೆಂದೇ ಅವರಿಗೆ ಗೊತ್ತಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಆದ್ದರಿಂದ ಇಗೋ, ನಾನು ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ, ನನ್ನ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಯೆಹೋವ ದೇವರೇ, ಎಂದು ಅವರು ತಿಳಿದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:21
13 ತಿಳಿವುಗಳ ಹೋಲಿಕೆ  

ಯೆಹೋವನು ಅವರನ್ನು ಅವರ ಕುಯುಕ್ತಿಯಲ್ಲಿಯೇ ಸಿಕ್ಕಿಸಿದ್ದರಿಂದ ಆತನ ನೀತಿಯು ಪ್ರಖ್ಯಾತವಾಯಿತು.


“ಯೆಹೋವನು ಭೂಮಿಯನ್ನು ಸೃಷ್ಟಿಸಿದನು. ಆತನೇ ಅದನ್ನು ಸುರಕ್ಷಿತವಾಗಿಡುವನು. ಯೆಹೋವನು ಹೀಗೆನ್ನುತ್ತಾನೆ:


ಆಗ ಅವರು ನೀನೊಬ್ಬನೇ ದೇವರೆಂದೂ ನಿನ್ನ ಹೆಸರು ಯೆಹೋವನೆಂದೂ ತಿಳಿದುಕೊಳ್ಳುವರು. ಭೂಲೋಕಕ್ಕೆಲ್ಲಾ ಮಹೋನ್ನತನಾದ ದೇವರೊಬ್ಬನೇ ದೇವರೆಂದು ಅವರು ಅರಿತುಕೊಳ್ಳುವರು.


ಯಾಕೆಂದರೆ ಯೆಹೋವನಾದ ನಾನೇ ನಿನ್ನ ದೇವರು. ಇಸ್ರೇಲಿನ ಪರಿಶುದ್ಧನಾದ ನಾನೇ ನಿನ್ನ ರಕ್ಷಕನು. ಈಜಿಪ್ಟನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ; ನಿನ್ನನ್ನು ನನ್ನವನನ್ನಾಗಿ ಮಾಡಿಕೊಳ್ಳಲು ನಿನಗೆ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟೆನು.


ಯೆಹೋವನೇ ಯುದ್ಧವೀರನು. ಆತನ ನಾಮಧೇಯವು ಯೆಹೋವನೇ.


ನಾನು ನನ್ನ ಇಸ್ರೇಲ್ ಜನರನ್ನು ಉಪಯೋಗಿಸಿ ಎದೋಮ್ಯರಿಗೆ ಮುಯ್ಯಿ ತೀರಿಸುವೆನು. ಈ ರೀತಿಯಾಗಿ ಎದೋಮಿನ ಮೇಲಿರುವ ನನ್ನ ಕೋಪವನ್ನು ಇಸ್ರೇಲರು ಅವರಿಗೆ ತೋರಿಸುವರು. ಆಗ ಎದೋಮ್ಯರು ನಾನು ಅವರನ್ನು ಶಿಕ್ಷಿಸಿದ್ದೇನೆಂದು ತಿಳಿದುಕೊಳ್ಳುವರು.” ಇದು ನನ್ನ ಒಡೆಯನಾದ ಯೆಹೋವನ ವಾಕ್ಯ.


ಆ ಸಮಯದಲ್ಲಿ ನಿನಗೆ ಆ ಮನುಷ್ಯನೊಂದಿಗೆ ಮಾತನಾಡಲಾಗುವುದು. ನೀನು ಆಮೇಲೆ ಎಂದಿಗೂ ಮೌನವಾಗಿರುವುದಿಲ್ಲ. ಈ ರೀತಿಯಾಗಿ ನೀನು ಅವರಿಗೆ ಒಂದು ಮಾದರಿಯಾಗುವೆ. ನಾನು ಯೆಹೋವನೆಂದು ಆಗ ಅವರು ತಿಳಿಯುವರು.”


ಯೆಹೆಜ್ಕೇಲನು ನಿಮಗೆ ಒಬ್ಬ ಮಾದರಿಯಾಗಿದ್ದಾನೆ. ಆತನು ಮಾಡಿದ ಹಾಗೆ ನೀವೂ ಮಾಡುವಿರಿ. ನಿಮ್ಮ ಶಿಕ್ಷಾ ಸಮಯವು ಹತ್ತಿರ ಬಂದಿದೆ. ನಾನು ಒಡೆಯನಾದ ಯೆಹೋವನೆಂದು ಆಗ ನೀವು ತಿಳಿಯುವಿರಿ.’”


ಜನರು ನಿಮ್ಮ ಮಧ್ಯದಲ್ಲಿ ಕೊಲ್ಲಲ್ಪಟ್ಟು ಬೀಳುವರು. ಆಗ ನೀನು, ನಾನು ಯೆಹೋವನೆಂದು ತಿಳಿಯುವಿ.’”


ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.


“ನಾನು ಯೆಹೋವನೇ. ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕಾಣಿಸಿಕೊಂಡೆನು. ಅವರು ನನ್ನನ್ನು ‘ಎಲ್ ಶದ್ದಾಯ್’ (ಸರ್ವಶಕ್ತನಾದ ದೇವರು) ಎಂದು ಕರೆದರು. ಆದರೆ ನಾನು ನನ್ನನ್ನು ಯೆಹೋವ ಎಂಬ ನನ್ನ ಹೆಸರಿನಲ್ಲಿ ಅವರಿಗೆ ಗೊತ್ತುಪಡಿಸಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು