ಯೆರೆಮೀಯ 16:4 - ಪರಿಶುದ್ದ ಬೈಬಲ್4 “ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.” ಅಧ್ಯಾಯವನ್ನು ನೋಡಿ |
“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.
ಯೆಹೂದದಲ್ಲಿ ಅಳಿದುಳಿದ ಕೆಲವು ಜನರಿದ್ದರು. ಆ ಜನರು ಈಜಿಪ್ಟಿನಲ್ಲಿ ನೆಲೆಸಲು ಬಂದರು. ಆದರೆ ನಾನು ಯೆಹೂದಕುಲದ ಆ ಕೆಲವು ಅಳಿದುಳಿದವರನ್ನು ನಾಶಮಾಡುವೆನು. ಅವರು ಕತ್ತಿಗಳಿಂದ ಕೊಲ್ಲಲ್ಪಡುವರು; ಹಸಿವಿನಿಂದ ಸತ್ತುಹೋಗುವರು. ಬೇರೆ ಜನಾಂಗಗಳ ಜನರು ಅವರ ಬಗ್ಗೆ ನಿಂದಿಸುವಂತೆ ಅವರ ಸ್ಥಿತಿ ಆಗುವುದು. ಅವರಿಗೆ ಉಂಟಾದ ದುರ್ಗತಿಯನ್ನು ನೋಡಿ ಬೇರೆ ಜನಾಂಗದ ಜನರು ಭಯಪಡುವರು. ಆ ಜನರು ಶಾಪದ ಶಬ್ಧವಾಗುವರು. ಬೇರೆ ಜನಾಂಗದವರು ಯೆಹೂದದ ಆ ಜನರಿಗೆ ಅಪಮಾನ ಮಾಡುವರು.
ಆತನು ಹೇಳಿದ್ದೇನೆಂದರೆ: ಇಸ್ರೇಲ್ ಜನರಿಗೆ ಹೇಳು: ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: ‘ಇಗೋ, ನನ್ನ ಪವಿತ್ರಾಲಯವನ್ನು ಹಾಳುಮಾಡುವೆನು. ನೀವು ಆ ಸ್ಥಳದ ಬಗ್ಗೆ ಹೆಮ್ಮೆಯುಳ್ಳವರಾಗಿದ್ದು ಸ್ತುತಿಗೀತೆಗಳನ್ನು ಹಾಡುತ್ತೀರಿ. ಅದು ಶಕ್ತಿ ದೊರಕುವ ಸ್ಥಳ. ನೀವು ಆ ಆಲಯವನ್ನು ನೋಡುತ್ತಾ ಆನಂದಿಸುತ್ತೀರಿ; ಅದನ್ನು ಬಹಳವಾಗಿ ಪ್ರೀತಿಸುತ್ತೀರಿ. ಆದರೆ ನಾನು ಅದನ್ನು ಕೆಡವಿಬಿಡುವೆನು. ನೀವು ಬಿಟ್ಟುಹೋಗುವ ನಿಮ್ಮ ಮಕ್ಕಳು ಯುದ್ಧದಲ್ಲಿ ಸಾಯುವರು.