ಯೆರೆಮೀಯ 16:5 - ಪರಿಶುದ್ದ ಬೈಬಲ್5 ಯೆಹೋವನು ಹೇಳಿದನು: “ಯೆರೆಮೀಯನೇ, ಜನರು ಶವಸಂಸ್ಕಾರದ ಊಟಮಾಡುತ್ತಿರುವ ಮನೆಯೊಳಗೆ ನೀನು ಹೋಗಬೇಡ. ಸತ್ತವರ ಸಂಗಡ ಅಳುವದಕ್ಕಾಗಲಿ ಅಥವಾ ನಿನ್ನ ದುಃಖವನ್ನು ಸೂಚಿಸುವದಕ್ಕಾಗಲಿ, ನೀನು ಅಲ್ಲಿಗೆ ಹೋಗಬೇಡ. ಏಕೆಂದರೆ ನಾನು ಅವರ ಮೇಲಿನ ನನ್ನ ಕೃಪೆಯನ್ನು ಹಿಂತೆಗೆದುಕೊಂಡಿದ್ದೇನೆ. ನಾನು ಯೆಹೂದದ ಈ ಜನರಿಗೆ ಕರುಣೆಯನ್ನು ತೋರಿಸುವದಿಲ್ಲ. ನಾನು ಅವರಿಗೋಸ್ಕರ ವ್ಯಥೆಪಡುವದಿಲ್ಲ.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ನನಗೆ, “ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡಿದುಕೊಳ್ಳಲೂ ಬೇಡ. ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಹಾಗು ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರ ಮತ್ತೆ ನನಗೆ ಹೀಗೆಂದರು : “ನೀನು ಸಾವು ಜರುಗಿದ ಮನೆಗಳಿಗೆ ಹೋಗಬೇಡ. ಅಲ್ಲಿ ನಡೆಯುವ ಗೋಳಾಟದಲ್ಲಿ ಸೇರಬೇಡ. ಎದೆಬಡಿದುಕೊಂಡು ಸಂತಾಪ ಸೂಚಿಸಬೇಕಾಗಿಲ್ಲ. ಏಕೆಂದರೆ, ನಾನು ದಯಪಾಲಿಸಿದ ಶಾಂತಿಯನ್ನೂ ಪ್ರೀತಿಯನ್ನೂ ಕೃಪೆಯನ್ನೂ ಆ ಜನರಿಂದ ತೆಗೆದುಬಿಟ್ಟಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು [ನನಗೆ] ಹೀಗೆ ಹೇಳಿದ್ದಾನೆ - ಗೋಳಾಟದ ಮನೆಯಲ್ಲಿ ಸೇರಬೇಡ, ಪ್ರಲಾಪಿಸಲಿಕ್ಕೆ ಹೋಗಬೇಡ, ಅವರಿಗಾಗಿ ಎದೆ ಬಡುಕೊಳ್ಳಲೂಬೇಡ; ನಾನು ದಯಪಾಲಿಸಿದ ಸಮಾಧಾನವನ್ನು, ಅಂದರೆ ನನ್ನ ಪ್ರೀತಿಯನ್ನೂ ಕೃಪೆಯನ್ನೂ ಈ ಜನರಿಂದ ತೆಗೆದುಬಿಟ್ಟಿದ್ದೇನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ದುಃಖದ ಮನೆಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡುವುದಕ್ಕೂ, ದುಃಖ ಪಡುವುದಕ್ಕೂ ಹೋಗಬೇಡ. ಏಕೆಂದರೆ ನಾನು ನನ್ನ ಸಮಾಧಾನವನ್ನೂ, ಪ್ರೀತಿಯನ್ನೂ, ಕನಿಕರವನ್ನೂ ಈ ಜನರಿಂದ ತೆಗೆದುಹಾಕಿದ್ದೇನೆ. ಅಧ್ಯಾಯವನ್ನು ನೋಡಿ |