ಯೆರೆಮೀಯ 16:6 - ಪರಿಶುದ್ದ ಬೈಬಲ್6 “ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಈ ನಾಡಿನಲ್ಲಿ ದೊಡ್ಡವರು ಹಾಗುಚಿಕ್ಕವರು ಸಾಯುವರು. ಅವರನ್ನು ಯಾರು ಹೂಣಿಡುವುದಿಲ್ಲ. ಅವರಿಗಾಗಿ ಯಾರೂ ಗೋಳಾಡುವುದಿಲ್ಲ. ದೇಹವನ್ನು ಹುಣ್ಣಾಗಿಸಿಕೊಳ್ಳುವುದಿಲ್ಲ. ತಲೆ ಬೋಳಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಈ ದೇಶದಲ್ಲಿನ ದೊಡ್ಡವರೂ ಅಲ್ಪರೂ ಸಾಯುವರು; ಅವರನ್ನು ಯಾರೂ ಹೂಣಿಡರು, ಅವರಿಗಾಗಿ ಯಾರೂ ಗೋಳಾಡರು, ಗಾಯ ಮಾಡಿಕೊಳ್ಳರು, ತಲೆಬೋಳಿಸಿಕೊಳ್ಳರು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ. ಅಧ್ಯಾಯವನ್ನು ನೋಡಿ |
ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ನಾಶಮಾಡಲು ಬಾಬಿಲೋನಿನ ಅರಸನನ್ನು ಕಳುಹಿಸಿದನು. ಬಾಬಿಲೋನಿನ ಅರಸನು ದೇವಾಲಯದೊಳಗಿದ್ದ ಯುವಜನರನ್ನು ಕೊಂದುಹಾಕಿದನು. ಅವನಿಗೆ ಯೆಹೂದದ ಮತ್ತು ಜೆರುಸಲೇಮಿನ ಜನರ ಮೇಲೆ ಕರುಣೆಯೇ ಇರಲಿಲ್ಲ. ಅವನು ಚಿಕ್ಕವರನ್ನೂ ದೊಡ್ಡವರನ್ನೂ ಗಂಡಸರನ್ನೂ ಹೆಂಗಸರನ್ನೂ ಬಿಡದೆ ಸಂಹರಿಸಿದನು. ರೋಗಿಗಳನ್ನೂ ಆರೋಗ್ಯವಂತರನ್ನೂ ಸಂಹರಿಸಿದನು; ಯೆಹೂದದ ಮತ್ತು ಜೆರುಸಲೇಮಿನ ಜನರನ್ನು ಶಿಕ್ಷಿಸಲು ದೇವರು ನೆಬೂಕದ್ನೆಚ್ಚರನನ್ನು ಉಪಯೋಗಿಸಿದನು.