ಯೆರೆಮೀಯ 16:7 - ಪರಿಶುದ್ದ ಬೈಬಲ್7 ಸತ್ತವರಿಗಾಗಿ ಗೋಳಾಡುವವರ ಸಲುವಾಗಿ ಯಾರೂ ಆಹಾರವನ್ನು ತರುವದಿಲ್ಲ. ತಾಯಿಯನ್ನಾಗಲಿ ತಂದೆಯನ್ನಾಗಲಿ ಕಳೆದುಕೊಂಡವರಿಗೆ ಯಾರೂ ಸಮಾಧಾನವನ್ನು ಹೇಳುವದಿಲ್ಲ. ಸತ್ತವರಿಗಾಗಿ ಅಳುವವರನ್ನು ಸಮಾಧಾನಪಡಿಸಲು ಯಾರೂ ಪಾನಪಾತ್ರೆಯನ್ನು ನೀಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವುದಕ್ಕಾಗಿ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾನದಾಯಕ ಪಾನಪಾತ್ರೆಯನ್ನು ನೀಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸತ್ತವನಿಗಾಗಿ ದುಃಖಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗು ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಸತ್ತವನಿಗೋಸ್ಕರ ದುಃಖಪಡುವವರನ್ನು ಸಂತೈಸುವದಕ್ಕಾಗಿ ಯಾರೂ ಕಜ್ಜಾಯವನ್ನು ಮುರಿದುಕೊಡರು; ತಂದೆಯನ್ನಾಗಲಿ ತಾಯಿಯನ್ನಾಗಲಿ ಕಳಕೊಂಡವರಿಗೆ ಯಾರೂ ಸಮಾಧಾಯಕ ಪಾನಪಾತ್ರೆಯನ್ನು ನೀಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸತ್ತವನಿಗಾಗಿ ದುಃಖ ಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗೂ ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ. ಅಧ್ಯಾಯವನ್ನು ನೋಡಿ |