Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:9 - ಪರಿಶುದ್ದ ಬೈಬಲ್‌

9 ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ‘ಉಲ್ಲಾಸಪಡುತ್ತಿದ್ದ ಜನರ ಧ್ವನಿಯನ್ನು ನಾನು ಬೇಗನೆ ನಿಲ್ಲಿಸಿಬಿಡುತ್ತೇನೆ. ಮದುವೆಯ ಸಮಾರಂಭಗಳಲ್ಲಿ ಜನರು ಮಾಡುವ ಸಂತೋಷ ಸಂಭ್ರಮದ ಧ್ವನಿಯನ್ನು ನಾನು ನಿಲ್ಲಿಸಿಬಿಡುತ್ತೇನೆ. ಇದು ನಿನ್ನ ಜೀವನಕಾಲದಲ್ಲಿಯೇ ಸಂಭವಿಸುತ್ತದೆ. ಇದೆಲ್ಲವನ್ನು ನಾನು ಬೇಗ ಮಾಡುತ್ತೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗೆಂದಿದ್ದಾನೆ, ‘ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ಮತ್ತು ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಏಕೆಂದರೆ ಇಸ್ರಯೇಲಿನ ದೇವರೂ ಸರ್ವಶಕ್ತ ಸರ್ವೇಶ್ವರನೂ ಆದ ನಾನು ಹೇಳುತ್ತೇನೆ, ಕೇಳು : ನಿಮ್ಮ ಕಾಲದಲ್ಲೆ, ನಿಮ್ಮ ಕಣ್ಣೆದುರಿಗೆ, ಸಂತೋಷ ಸಂಭ್ರಮದ ಧ್ವನಿಯನ್ನು ನಿಲ್ಲಿಸಿಬಿಡುವೆನು. ವಧೂವರರ ಸದ್ದೂ ಇಲ್ಲವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಇಸ್ರಾಯೇಲಿನ ದೇವರೂ ಸೇನಾಧೀಶ್ವರನಾದ ಯೆಹೋವನೂ ಆಗಿರುವಾತನು ಹೀಗಂದಿದ್ದಾನೆ - ಇಗೋ, ನಿಮ್ಮ ಕಾಲದಲ್ಲಿ ನಿಮ್ಮ ಕಣ್ಣೆದುರಿಗೆ ಹರ್ಷಸಂಭ್ರಮಗಳ ಧ್ವನಿಯನ್ನೂ ವಧೂವರರ ಸ್ವರವನ್ನೂ ಈ ಸ್ಥಳದೊಳಗೆ ನಿಲ್ಲಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸದ ಸ್ವರವನ್ನೂ, ಸಂತೋಷದ ಸ್ವರವನ್ನೂ, ಮದುಮಗನ ಸ್ವರವನ್ನೂ, ಮದುಮಗಳ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:9
8 ತಿಳಿವುಗಳ ಹೋಲಿಕೆ  

ನಾನು (ದೇವರು) ಆಕೆಯ ಉಲ್ಲಾಸಗಳನ್ನು ಅವಳಿಂದ ತೆಗೆಯುವೆನು. ಆಕೆಯ ಹಬ್ಬದ ದಿನಗಳು, ಅಮಾವಾಸ್ಯೆಯ ಹಬ್ಬ, ಸಬ್ಬತ್ ದಿನಗಳನ್ನು ಆಕೆಯಿಂದ ತೆಗೆದುಬಿಡುವೆನು.


ನಿನ್ನ ಸಂತಸದ ಹಾಡುಗಳನ್ನು ನಾನು ನಿಲ್ಲಿಸಿಬಿಡುವೆನು. ನಿನ್ನ ಕಿನ್ನರಿ ಸ್ವರವನ್ನು ಜನರು ಇನ್ನೆಂದೂ ಕೇಳರು.


ಜೆರುಸಲೇಮಿನ ಬೀದಿಗಳಲ್ಲಿಯೂ ಯೆಹೂದದ ಪಟ್ಟಣಗಳಲ್ಲಿಯೂ ಸಂತೋಷ ಮತ್ತು ಸಂಭ್ರಮದ ಧ್ವನಿಯನ್ನೂ ವಧುವರರ ಸ್ವರವನ್ನೂ ಬರದಂತೆ ಮಾಡುತ್ತೇನೆ. ಈ ಪ್ರದೇಶವು ಬರಿದಾದ ಮರಳುಗಾಡಾಗುವದು.”


ಆ ಸ್ಥಳಗಳಲ್ಲಿ ನಾನು ಸಂತೋಷದ ಮತ್ತು ಸಂಭ್ರಮದ ಧ್ವನಿಗಳು ಕೇಳಿಬರದಂತೆ ಮಾಡುವೆನು. ವಧುವರರ ಸಂತೋಷದ ಧ್ವನಿಗಳು ಇನ್ನು ಮೇಲೆ ಕೇಳಿಬರುವದಿಲ್ಲ. ನಾನು ಬೀಸುವಕಲ್ಲಿನ ಸದ್ದನ್ನು ತೆಗೆದುಕೊಳ್ಳುವೆನು. ನಾನು ದೀಪದ ಬೆಳಕನ್ನು ತೆಗೆದುಕೊಳ್ಳುವೆನು.


ಯುವಕರು ಬೆಂಕಿಯ ಪಾಲಾದರು. ಅವರಿಗೆ ನಿಶ್ಚಿತಾರ್ಥವಾಗಿದ್ದ ಕನ್ಯೆಯರು ವಿವಾಹಗೀತೆಯನ್ನು ಹಾಡಲಿಲ್ಲ.


ಯಾಕೆಂದರೆ ನಾನೇ ಯೆಹೋವನು. ನನಗೆ ಇಷ್ಟಬಂದದ್ದನ್ನು ನಾನು ಹೇಳುವೆನು ಮತ್ತು ಆ ಸಂಗತಿಯು ನೆರವೇರುವುದು. ಅದಕ್ಕೆ ಹೆಚ್ಚು ಸಮಯಬೇಕಾಗದು. ಆ ಸಂಕಟಗಳು ಬೇಗನೇ ಬರುವವು; ನಿಮ್ಮ ಜೀವಮಾನ ಕಾಲದಲ್ಲಿಯೇ ಬರುವವು. ಓ ದಂಗೆಕೋರರಾದ ಜನರೇ, ನಾನು ಒಂದು ವಿಷಯದಲ್ಲಿ ಏನಾದರೂ ಹೇಳಿದರೆ ಆ ವಿಷಯವು ಸಂಭವಿಸುವಂತೆ ಮಾಡುವೆನು.” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು