Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:1 - ಪರಿಶುದ್ದ ಬೈಬಲ್‌

1 “ಯೆಹೂದದ ಜನರ ಅಪರಾಧ ಅಳಿಸಲಾಗದ ಸ್ಥಳದಲ್ಲಿ ಬರೆಯಲಾಗಿದೆ. ಆ ಅಪರಾಧಗಳು ಕಬ್ಬಿಣದ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಪಾಪಗಳು ವಜ್ರದ ಮೊನೆಯುಳ್ಳ ಲೇಖನಿಯಿಂದ ಕಲ್ಲಿನ ಮೇಲೆ ಕೆತ್ತಲಾಗಿವೆ. ಅವರ ಹೃದಯವೇ ಆ ಕಲ್ಲು, ಆ ಪಾಪಗಳು ಅವರ ಯಜ್ಞವೇದಿಕೆಗಳ ಕೊಂಬುಗಳಲ್ಲಿ ಕೆತ್ತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಜುದೇಯದ ಜನರಿಗೆ ಹೀಗೆನ್ನುತ್ತಾರೆ : “ಜುದೇಯದ ಪಾಪವನ್ನು ಕಬ್ಬಿಣದ ಲೇಖನಿಯಿಂದ, ವಜ್ರದ ಮೊನೆಯಿಂದ ಬರೆಯಲಾಗಿದೆ. ಅದನ್ನು ನಿಮ್ಮ ಜನರ ಹೃದಯದ ಹಲಗೆಯ ಮೇಲೂ ಅವರ ಬಲಿಪೀಠಗಳ ಕೊಂಬುಗಳ ಮೇಲೂ ಕೆತ್ತಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ; ಅವರ ಹೃದಯದ ಹಲಗೆಯಲ್ಲಿಯೂ ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ, ವಜ್ರದ ಮೊನೆಯಿಂದಲೂ ಬರೆಯಲಾಗಿದೆ. ಅದು ಅವರ ಹೃದಯದ ಹಲಗೆಯ ಮೇಲೆಯೂ ಅವರ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:1
15 ತಿಳಿವುಗಳ ಹೋಲಿಕೆ  

ಪ್ರೀತಿಯೂ ನಂಬಿಗಸ್ತಿಕೆಯೂ ನಿನ್ನನ್ನು ಬಿಟ್ಟು ಹೋಗದಿರಲಿ. ಅವುಗಳನ್ನು ನಿನ್ನ ಕೊರಳಿಗೆ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ.


ಕ್ರಿಸ್ತನು ನಮ್ಮ ಮೂಲಕವಾಗಿ ಕಳುಹಿಸಿದ ಕ್ರಿಸ್ತನ ಪತ್ರ ನೀವಾಗಿದ್ದೀರಿ. ಆ ಪತ್ರವನ್ನು ಬರೆದಿರುವುದು ಶಾಯಿಯಿಂದಲ್ಲ, ಜೀವಸ್ವರೂಪನಾದ ದೇವರ ಆತ್ಮನಿಂದ. ಇದನ್ನು ಕಲ್ಲುಹಲಿಗೆಗಳ ಮೇಲೆ ಬರೆದಿಲ್ಲ. ಇದನ್ನು ಮಾನವ ಹೃದಯಗಳ ಮೇಲೆ ಬರೆಯಲಾಗಿದೆ.


ಅವುಗಳನ್ನು ನಿನ್ನ ಬೆರಳುಗಳ ಸುತ್ತಲೂ ಕಟ್ಟಿಕೊ; ನಿನ್ನ ಹೃದಯದ ಮೇಲೆ ಬರೆದುಕೊ,


ಯಾಜಕನು ಪಾಪಪರಿಹಾರಕ ಯಜ್ಞದ ರಕ್ತದಲ್ಲಿ ಸ್ವಲ್ಪವನ್ನು ತನ್ನ ಬೆರಳಿನಲ್ಲಿ ತೆಗೆದುಕೊಂಡು ಸರ್ವಾಂಗಹೋಮಮಾಡುವ ವೇದಿಕೆಯ ಮೂಲೆಗಳಿಗೆ ಹಚ್ಚಬೇಕು. ಯಾಜಕನು ಉಳಿದ ರಕ್ತವನ್ನು ವೇದಿಕೆಯ ಬುಡದಲ್ಲಿ ಸುರಿದು,


ಆದರೆ ಗಿಲ್ಯಾದಿನ ಜನರು ಪಾಪ ಮಾಡಿದ್ದಾರೆ. ಅವರ ಬಳಿಯಲ್ಲಿ ಅನೇಕ ಭಯಂಕರವಾದ ವಿಗ್ರಹಗಳಿವೆ. ಗಿಲ್ಗಾಲಿನಲ್ಲಿ ಬಸವನ ವಿಗ್ರಹಗಳಿಗೆ ಜನರು ಯಜ್ಞವನ್ನರ್ಪಿಸುತ್ತಾರೆ. ಅವರಲ್ಲಿ ಅನೇಕ ಯಜ್ಞವೇದಿಕೆಗಳಿವೆ. ಹೇಗೆ ಉಳಿಮೆ ಮಾಡಿದ ಹೊಲದಲ್ಲಿ ಮಣ್ಣಿನ ಸಾಲುಗಳಿರುತ್ತದೋ ಅದೇ ರೀತಿಯಲ್ಲಿ ಅವರ ಬಳಿಯಲ್ಲಿ ವಿಗ್ರಹಗಳ ಸಾಲಿದೆ.


ನೋಡಿ, ನಿಮ್ಮ ಹೆಸರುಗಳನ್ನು ನಾನು ನನ್ನ ಅಂಗೈಗಳಲ್ಲಿ ಕೆತ್ತಿರುತ್ತೇನೆ. ನಿಮ್ಮನ್ನು ಯಾವಾಗಲೂ ಜ್ಞಾಪಿಸಿಕೊಳ್ಳುತ್ತೇನೆ.


ನೀನು ಚೌಳನಿಂದ ತೊಳೆದುಕೊಂಡರೂ ಹೆಚ್ಚು ಸೋಪನ್ನು ಉಪಯೋಗಿಸಿದರೂ ನಾನು ನಿನ್ನ ದೋಷವನ್ನು ಕಂಡುಹಿಡಿಯಬಲ್ಲೆ” ಅನ್ನುತ್ತಾನೆ ಯೆಹೋವನು.


ಜೆರುಸಲೇಮಿನ ಜನರೇ, ನಿಮ್ಮ ಹೃದಯದ ಕೆಟ್ಟತನವನ್ನು ತೊಳೆದುಕೊಳ್ಳಿರಿ. ರಕ್ಷಣೆಹೊಂದಲು ನಿಮ್ಮ ಹೃದಯಗಳನ್ನು ಪವಿತ್ರಗೊಳಿಸಿರಿ. ದುರಾಲೋಚನೆಗಳನ್ನು ಮುಂದುವರಿಸಬೇಡಿರಿ.


ನಾನು ಅವರ ದುಷ್ಟತ್ವವನ್ನು ನೆನಪಿನಲ್ಲಿಟ್ಟಿರುತ್ತೇನೆಂಬುದನ್ನು ಅವರು ನಂಬುವದಿಲ್ಲ. ಅವರು ಮಾಡಿದ ದುಷ್ಟತನವು ಸುತ್ತಲೂ ಕಾಣಿಸುವದು. ನಾನು ಅವರ ಪಾಪಗಳನ್ನು ಸ್ಪಷ್ಟವಾಗಿ ನೋಡುತ್ತೇನೆ.


ಅವರು ಹಠಮಾರಿಗಳಾಗಿದ್ದರು. ನ್ಯಾಯವಿಧಿಗಳಿಗೆ ಅವರು ವಿಧೇಯರಾಗಲಿಲ್ಲ. ಸರ್ವಶಕ್ತನಾದ ಯೆಹೋವನು ತನ್ನ ಆತ್ಮನಿಂದ ಪ್ರವಾದಿಗಳ ಮೂಲಕ ಅವರಿಗೆ ಸಂದೇಶ ಕಳುಹಿಸಿದನು. ಆದರೂ ಜನರು ಅವರಿಗೆ ಕಿವಿಗೊಡಲಿಲ್ಲ. ಆದ್ದರಿಂದ ಸರ್ವಶಕ್ತನಾದ ಯೆಹೋವನು ಬಹಳ ಕೋಪಗೊಂಡನು.


“ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಬಲಿಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಬಲಿಪೀಠಗಳಿವೆ.


ಯೆಹೋವನು ಹೀಗೆನ್ನುತ್ತಾನೆ: “ಭವಿಷ್ಯದಲ್ಲಿ ಇಸ್ರೇಲಿನ ಜನರೊಂದಿಗೆ ನಾನು ಈ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ. ನಾನು ನನ್ನ ಉಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು; ಅವುಗಳನ್ನು ಅವರ ಹೃದಯಗಳ ಮೇಲೆ ಬರೆಯುವೆನು. ನಾನು ಅವರ ದೇವರಾಗಿರುವೆನು, ಅವರು ನನ್ನ ಜನರಾಗಿರುವರು.


“ಎಫ್ರಾಯೀಮ್ ಹೆಚ್ಚೆಚ್ಚಾಗಿ ಯಜ್ಞವೇದಿಕೆಗಳನ್ನು ಕಟ್ಟಿಸಿದನು. ಅದು ಪಾಪವಾಗಿತ್ತು. ಆ ವೇದಿಕೆಗಳ ಮೇಲೆಯೇ ಅವರು ಪಾಪಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು