Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:15 - ಪರಿಶುದ್ದ ಬೈಬಲ್‌

15 ಯೆಹೂದದ ಜನರು ನನಗೆ ಪ್ರಶ್ನೆಗಳನ್ನು ಕೇಳುತ್ತಿರುತ್ತಾರೆ. “ಯೆರೆಮೀಯನೇ, ಯೆಹೋವನ ಸಂದೇಶ ಎಲ್ಲಿದೆ? ಆ ಸಂದೇಶವು ಸತ್ಯವಾಗುವುದನ್ನು ನಾವು ಈಗಲೇ ನೋಡೋಣ” ಎಂದು ಅವರನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಹಾ, ಜನರು ನನಗೆ, “ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ” ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಕಟಾ, ಜನರು ನನ್ನನ್ನು ‘ಸರ್ವೇಶ್ವರನ ಮಾತೆಲ್ಲಿ? ಅದು ಈಗಲೇ ನೆರವೇರಲಿ’ ಎಂದು ಮೂದಲಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಹಾ, ಜನರು ನನಗೆ - ಯೆಹೋವನ ಮಾತೆಲ್ಲಿ? ಅದು ಈಗಲೇ ನೆರವೇರಲಿ ಎಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಗೋ, ಅವರು ನನಗೆ, “ಯೆಹೋವ ದೇವರ ವಾಕ್ಯವು ಎಲ್ಲಿ? ಅದು ಈಗ ನೆರವೇರಲಿ,” ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:15
7 ತಿಳಿವುಗಳ ಹೋಲಿಕೆ  

ಅವರು, “ದೇವರು ತಾನು ಮಾಡಲಿಕ್ಕಿರುವುದನ್ನು ಬೇಗನೇ ಮಾಡಿಮುಗಿಸಲಿ. ಆಗ ಏನಾಗುವದೋ ನೋಡೋಣ. ಆತನ ಯೋಜನೆ ಬೇಗನೆ ಕಾರ್ಯರೂಪಕ್ಕೆ ಬರಲಿ. ಆಗ ಆತನ ಯೋಜನೆ ಏನೆಂಬುದು ನಮಗೆ ತಿಳಿಯುವುದು” ಎಂದು ಹೇಳುತ್ತಿದ್ದಾರೆ.


ನಿಮ್ಮಲ್ಲಿ ಕೆಲವರಿಗೆ ಯೆಹೋವನ ನ್ಯಾಯತೀರ್ಪಿನ ದಿನವನ್ನು ನೋಡುವ ಮನಸ್ಸಿದೆ. ಆ ದಿವಸವನ್ನು ಯಾಕೆ ನೀವು ನೋಡಬೇಕು? ಯೆಹೋವನ ನ್ಯಾಯಾತೀರ್ಪಿನ ದಿನವು ಬೆಳಕನ್ನಲ್ಲ, ಕತ್ತಲನ್ನು ತರುವುದು.


“ನರಪುತ್ರನೇ, ‘ಸಂಕಷ್ಟದ ದಿನಗಳು ಉರುಳುತ್ತಿವೆ; ಎಲ್ಲಾ ದರ್ಶನಗಳು ನೆರವೇರುವುದಿಲ್ಲ’ ಎಂಬ ಈ ಗಾದೆಯನ್ನು ಇಸ್ರೇಲ್ ದೇಶದಲ್ಲಿರುವ ನೀವೆಲ್ಲರೂ ಹೇಗೆ ಅರ್ಥಮಾಡಿಕೊಳ್ಳುವಿರಿ?


ನೀವು ತಪ್ಪಾದ ವಿಷಯಗಳನ್ನು ಬೋಧಿಸಿದ್ದೀರಿ. ಅಂಥಾ ದುರ್ಬೋಧನೆಯು ಯೆಹೋವನನ್ನು ದುಃಖಗೊಳಿಸಿದೆ. ಯೆಹೋವನು ದುಷ್ಟರನ್ನು ಪ್ರೀತಿಸುತ್ತಾನೆ ಎಂದು ಜನರಿಗೆ ಬೋಧಿಸಿದ್ದೀರಿ. ಅಂಥಾ ಜನರನ್ನು ಯೆಹೋವನು ಒಳ್ಳೆಯವರೆಂದು ಕರೆಯುತ್ತಾನೆ ಎಂದು ನೀವು ಜನರಿಗೆ ಕಲಿಸಿದ್ದೀರಿ. ಅಲ್ಲದೆ ಪಾಪಮಾಡುವ ಜನರನ್ನು ಯೆಹೋವನು ಶಿಕ್ಷಿಸುವದಿಲ್ಲವೆಂದೂ ನೀವು ಹೇಳಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು