ಯೆರೆಮೀಯ 17:16 - ಪರಿಶುದ್ದ ಬೈಬಲ್16 ಯೆಹೋವನೇ, ನಾನು ನಿನ್ನನ್ನು ಬಿಟ್ಟು ಓಡಿಹೋಗಲಿಲ್ಲ, ನಾನು ನಿನ್ನನ್ನು ಅನುಸರಿಸಿದೆನು. ನೀನು ಹೇಳಿದಂತೆ ನಾನು ಕುರುಬನಾದೆ. ಆ ಭಯಂಕರ ದಿನವು ಬರಲೆಂದು ನಾನು ಬಯಸಲಿಲ್ಲ. ಯೆಹೋವನೇ, ನಾನು ಹೇಳಿದ್ದೆಲ್ಲ ನಿನಗೆ ಗೊತ್ತಿದೆ. ಈಗ ನಡೆಯುತ್ತಿರುವುದನ್ನೆಲ್ಲಾ ನೀನು ನೋಡುತ್ತಿರುವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾನಾದರೋ ‘ಕೇಡನ್ನು ಬರಮಾಡಿ’ ಎಂದು ನಿಮ್ಮನ್ನು ತವಕಪಡಿಸಲಿಲ್ಲ. ಅನಿವಾರ್ಯ ವಿಪತ್ತಿನ ದಿನವನ್ನು ನಾನು ಅಪೇಕ್ಷಿಸಲಿಲ್ಲ. ಇದು ನಿಮಗೆ ತಿಳಿದ ವಿಷಯ. ನನ್ನ ಮಾತುಗಳು ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯಿಂದ ಹೊರಟವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾನಾದರೋ ಸಭಾ ಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವದನ್ನು ಬಿಡುವದಕ್ಕೆ ಆತುರಪಡಲಿಲ್ಲ; ಅನಿವಾರ್ಯ ವಿಪತ್ತಿನ ದಿನವನ್ನು ಅಪೇಕ್ಷಿಸಲಿಲ್ಲ; ನೀನೇ ಬಲ್ಲೆ; ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ; ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ನೀವೇ ಬಲ್ಲೆ; ನಿಮ್ಮ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು. ಅಧ್ಯಾಯವನ್ನು ನೋಡಿ |
ನಾವು ಈ ವಿಷಯದಲ್ಲಿ ಹೆಮ್ಮೆಪಡುತ್ತೇವೆ ಮತ್ತು ಇದು ಸತ್ಯವೆಂದು ನಾನು ಹೃದಯಪೂರ್ವಕವಾಗಿ ಹೇಳಬಲ್ಲೆನು. ಅದೇನೆಂದರೆ ಈ ಲೋಕದಲ್ಲಿ ಮಾಡಿದ ಎಲ್ಲಾ ಕಾರ್ಯಗಳನ್ನು ದೇವರಿಂದ ಕೊಡಲ್ಪಟ್ಟ ಯಥಾರ್ಥವಾದ ಮತ್ತು ಪರಿಶುದ್ಧವಾದ ಹೃದಯದಿಂದ ಮಾಡಿದೆವು. ನಾವು ನಿಮ್ಮ ಮಧ್ಯದಲ್ಲಿ ಮಾಡಿದ ಕಾರ್ಯಗಳಲ್ಲಂತೂ ಇದು ಮತ್ತಷ್ಟು ಸತ್ಯವಾಗಿದೆ. ನಾವು ಇದನ್ನು ಮಾಡಿದ್ದು ದೇವರ ಕೃಪೆಯಿಂದಲೇ ಹೊರತು ಲೋಕದ ಜ್ಞಾನದಿಂದಲ್ಲ.
ಒಮ್ಮೊಮ್ಮೆ ನನ್ನಷ್ಟಕ್ಕೆ ನಾನೇ ಹೇಳಿಕೊಳ್ಳುತ್ತೇನೆ, “ನಾನು ಯೆಹೋವನನ್ನೇ ಮರೆತುಬಿಡುತ್ತೇನೆ. ಆತನ ಹೆಸರಿನಲ್ಲಿ ಇನ್ನೇನೂ ಮಾತನಾಡುವುದಿಲ್ಲ” ಎಂದುಕೊಂಡರೆ ಆತನ ಸಂದೇಶವು ನನ್ನ ಅಂತರಾಳದಲ್ಲಿ ಉರಿಯುವ ಜ್ವಾಲೆಯಂತಾಗುತ್ತದೆ. ಅದು ಆಳಕ್ಕೆ ಇಳಿದು ನನ್ನ ಎಲುಬುಗಳನ್ನು ಸುಡುವಂತಾಗುತ್ತದೆ. ಯೆಹೋವನ ಸಂದೇಶವನ್ನು ನನ್ನ ಅಂತರಾಳದಲ್ಲಿ ಹಿಡಿದಿಟ್ಟುಕೊಳ್ಳಲು ಪ್ರಯತ್ನ ಮಾಡಿ ನಾನು ದಣಿಯುತ್ತೇನೆ. ಕೊನೆಗೆ ಅದನ್ನು ನನ್ನೊಳಗೆ ಇಟ್ಟುಕೊಳ್ಳಲು ಅಸಾಧ್ಯವಾಗುತ್ತದೆ.
ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು.