ಯೆರೆಮೀಯ 17:19 - ಪರಿಶುದ್ದ ಬೈಬಲ್19 ಯೆಹೋವನು ನನಗೆ ಹೀಗೆ ಹೇಳಿದನು: “ಯೆರೆಮೀಯನೇ, ನೀನು ಹೋಗಿ ಯೆಹೂದದ ರಾಜರು ಸಂಚರಿಸುವ ಜೆರುಸಲೇಮಿನ ಜನರ ದ್ವಾರದಲ್ಲಿ ನಿಲ್ಲು. ಜನರಿಗೆ ನನ್ನ ಸಂದೇಶವನ್ನು ಹೇಳು. ಆಮೇಲೆ ಜೆರುಸಲೇಮಿನ ಎಲ್ಲಾ ದ್ವಾರಗಳಿಗೆ ಹೋಗಿ ಹಾಗೆಯೇ ಮಾಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಸರ್ವೇಶ್ವರ ನನಗೆ ಕೊಟ್ಟ ಆದೇಶ : “ನೀನು ಹೊರಟು ಜುದೇಯದ ಅರಸರು ಹೋಗಿಬರುವ ಜನತಾದ್ವಾರದಲ್ಲೂ ಜೆರುಸಲೇಮಿನ ಇತರ ಬಾಗಿಲುಗಳಲ್ಲೂ ನಿಂತುಕೊಂಡು ಹೀಗೆಂದು ಸಾರು : ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಯೆಹೋವನು ನನಗೆ ಇಂತೆಂದನು - ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯಜನರ ಬಾಗಲಿನಲ್ಲಿಯೂ ಯೆರೂಸಲೇವಿುನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಯೆಹೋವ ದೇವರು ನನಗೆ, “ಹೋಗಿ, ಯೆಹೂದದ ಅರಸರು ಪ್ರವೇಶಿಸುವ, ಹೊರಡುವ ಜನರ ಬಾಗಿಲಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು, ಅಧ್ಯಾಯವನ್ನು ನೋಡಿ |
ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.