Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:21 - ಪರಿಶುದ್ದ ಬೈಬಲ್‌

21 ಯೆಹೋವನು ಹೀಗೆ ಹೇಳುತ್ತಾನೆ, ಸಬ್ಬತ್ ದಿನದಂದು ನೀವು ಯಾವ ಹೊರೆಯನ್ನೂ ಹೊತ್ತುಕೊಂಡು ಹೋಗದಂತೆ ಎಚ್ಚರವಹಿಸಿರಿ. ಸಬ್ಬತ್‌ದಿನದಂದು ಯಾವ ಹೊರೆಯನ್ನೂ ಜೆರುಸಲೇಮಿನ ದ್ವಾರಗಳ ಮೂಲಕ ತರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಮನಮುಟ್ಟಿ ಇದನ್ನು ಗಮನಿಸಿರಿ : ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿ. ಜೆರುಸಲೇಮಿನ ಬಾಗಿಲುಗಳಲ್ಲಿ ಅದನ್ನು ತರಲೇಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಯೆರೂಸಲೇವಿುನ ಬಾಗಿಲುಗಳಲ್ಲಿ ತರಲೇಬೇಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮಗೆ ನೀವೇ ಎಚ್ಚರಿಕೆಯಾಗಿರಿ. ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತೆಗೆದುಕೊಂಡು ಬರಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:21
18 ತಿಳಿವುಗಳ ಹೋಲಿಕೆ  

“ಆದ್ದರಿಂದ ಜಾಗರೂಕರಾಗಿರಿ. ಬೇರೆ ದೇವರುಗಳನ್ನು ಸೇವೆಮಾಡಿ ಆರಾಧಿಸಬೇಡಿ.


ನೀವು ಆ ದೇಶದಲ್ಲಿ ವಾಸಿಸುವಾಗ ನಿಮ್ಮ ದೇವರಾದ ಯೆಹೋವನೊಡನೆ ನೀವು ಮಾಡಿರುವ ಒಡಂಬಡಿಕೆಯನ್ನು ಮರೆಯಬೇಡಿರಿ. ನೀವು ಆತನ ಕಟ್ಟಳೆಗಳಿಗೆ ವಿಧೇಯರಾಗಿರಿ. ಯಾವ ವಿಗ್ರಹಗಳನ್ನಾಗಲಿ ಮಾಡಿಕೊಳ್ಳಬೇಡಿರಿ.


“ಆ ದಿನ ಸೀನಾಯಿ ಬೆಟ್ಟದಲ್ಲಿ ಸ್ವರವನ್ನು ಮಾತ್ರ ಕೇಳಿದಿರಿ. ನೀವು ಯೆಹೋವನ ರೂಪವನ್ನು ನೋಡಲಿಲ್ಲ. ದೇವರಿಗೆ ಯಾವ ಆಕಾರವೂ ಇಲ್ಲ.


ಆದರೆ ನೀವು ನೋಡಿದ್ದನ್ನು ನಿಮ್ಮ ಜೀವಮಾನವೆಲ್ಲಾ ಜಾಗ್ರತೆಯುಳ್ಳವರಾಗಿದ್ದು ಮರೆಯದೆ ಅದನ್ನು ನಿಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ತಿಳಿಸಬೇಕು.


ಆದ್ದರಿಂದ ನೀವು ಕಿವಿಗೊಡುವಾಗ ಜಾಗರೂಕರಾಗಿರಿ; ಸ್ವಲ್ಪ ತಿಳುವಳಿಕೆ ಇರುವ ವ್ಯಕ್ತಿಯು ಹೆಚ್ಚು ತಿಳುವಳಿಕೆಯನ್ನು ಹೊಂದುವನು. ಆದರೆ ತಿಳುವಳಿಕೆ ಇಲ್ಲದ ವ್ಯಕ್ತಿಯು ತನಗಿದೆ ಎಂದುಕೊಂಡಿದ್ದ ತಿಳುವಳಿಕೆಯನ್ನೂ ಕಳೆದುಕೊಳ್ಳುವನು” ಎಂದು ಹೇಳಿದನು.


ನೀವು ಕೇಳುತ್ತಿರುವ ಪ್ರತಿಯೊಂದು ವಿಷಯವನ್ನು ಎಚ್ಚರಿಕೆಯಿಂದ ಆಲೋಚಿಸಿರಿ. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು; ನೀವು ಕೊಟ್ಟದ್ದಕ್ಕಿಂತ ಹೆಚ್ಚಾಗಿ ಕೊಡುವರು.


ನಿನ್ನ ಆಲೋಚನೆಗಳ ವಿಷಯದಲ್ಲಿ ಎಚ್ಚರಿಕೆಯಿಂದಿರು. ನಿನ್ನ ನಡತೆಯು ನಿನ್ನ ಆಲೋಚನೆಗಳ ಮೇಲೆ ಆಧಾರಗೊಂಡಿದೆ.


ಆದ್ದರಿಂದ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸುವುದರಲ್ಲಿ ಬಹು ಎಚ್ಚರಿಕೆಯಿಂದಿರಿ.


ಆದ್ದರಿಂದ ನಿಮ್ಮ ವಿಷಯದಲ್ಲಿಯೂ ಪವಿತ್ರಾತ್ಮನು ನಿಮ್ಮ ಪಾಲನೆಗೆ ವಹಿಸಿರುವ ಮಂದೆಯ ವಿಷಯದಲ್ಲಿಯೂ ಎಚ್ಚರಿಕೆಯಿಂದಿರಿ. ದೇವರು ತನ್ನ ಸ್ವಂತ ರಕ್ತದಿಂದ ಕೊಂಡುಕೊಂಡಿರುವ ಸಭೆಗೆ ನೀವು ಕುರುಬರಾಗಿದ್ದೀರಿ.


ಸಬ್ಬತ್ತಿನ ವಿಷಯದಲ್ಲಿ ದೇವರ ಕಟ್ಟಳೆಗಳನ್ನು ಅನುಸರಿಸುವವರು ಆಶೀರ್ವಾದ ಹೊಂದುವರು. ದುಷ್ಕೃತ್ಯಗಳನ್ನು ಮಾಡದವನು ಸಂತೋಷದಿಂದಿರುವನು.”


ಸಬ್ಬತ್ತಿನ ವಿಷಯವಾಗಿ ಯೆಹೋವನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ನೀವು ಅನುಸರಿಸಿದರೆ ಮತ್ತು ಆ ವಿಶೇಷ ದಿನದಲ್ಲಿ ಸ್ವೇಚ್ಛೆಯಾಗಿ ನಡೆಯದಿದ್ದರೆ ಇದೆಲ್ಲಾ ನಿಮಗೆ ದೊರೆಯುವುದು. ಸಬ್ಬತ್‌ದಿವಸವನ್ನು ನೀವು ಸಂತಸದ ದಿವಸವೆಂದು ಕರೆಯಬೇಕು. ದೇವರ ಆ ವಿಶೇಷ ದಿವಸವನ್ನು ನೀವು ಸನ್ಮಾನಿಸಿ ಆ ದಿವಸದಲ್ಲಿ ನಿಮ್ಮ ಸ್ವಕಾರ್ಯಗಳನ್ನು ಮಾಡಕೂಡದು; ಹರಟೆ ಹೊಡೆಯಕೂಡದು.


“ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಜ್ಞಾಪಕದಲ್ಲಿಟ್ಟುಕೊಂಡು ಅದನ್ನು ಆಚರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು